AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ-ಇರಾನ್ ಭೀಕರ ಕದನ: ಯುಎಸ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ, ಇರಾನ್‌ನಲ್ಲಿ ಏನೂ ಉಳಿಯಲ್ಲ ಎಂದ ಟ್ರಂಪ್

ಕಾರ್ಯತಂತ್ರದ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ-ಇರಾನ್ ನಡುವೆ ತೀವ್ರ ಸಂಘರ್ಷ ಭುಗಿಲೆದ್ದಿದೆ. ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದರೆ, ಅಮೆರಿಕ ಪ್ರತಿದಾಳಿ ಮಾಡಿದೆ. ಟ್ರಂಪ್ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಈ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ ದರ ಏರಿಕೆಯಾಗಿದ್ದು, ಪ್ರಾದೇಶಿಕ ಸ್ಥಿತಿ ಮತ್ತಷ್ಟು ಜಟಿಲಗೊಂಡಿದೆ.

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ-ಇರಾನ್ ಭೀಕರ ಕದನ: ಯುಎಸ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ, ಇರಾನ್‌ನಲ್ಲಿ ಏನೂ ಉಳಿಯಲ್ಲ ಎಂದ ಟ್ರಂಪ್
ಹಾರ್ಮುಜ್
ನಯನಾ ರಾಜೀವ್
|

Updated on: Sep 02, 2026 | 8:03 AM

Share

ಟೆಹ್ರಾನ್, ಸೆಪ್ಟೆಂಬರ್ 2: ಕಾರ್ಯತಂತ್ರದ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮವಾಗಿರುವ ಹಾರ್ಮುಜ್ ಜಲಸಂಧಿ (Strait of Hormuz) ಬಳಿ ಅಮೆರಿಕ ಸೇನೆ ನಡೆಸಿದ ಹೊಸ ಸರಣಿ ವಾಯುದಾಳಿಗಳಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ನೆಲೆಗಳು ಧ್ವಂಸಗೊಂಡ ಬೆನ್ನಲ್ಲೇ, ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ವ್ಯಾಪಕ ಬ್ಯಾಲಿಸ್ಟಿಕ್ ಕ್ಷಿಪಣಿ ಮತ್ತು ಡ್ರೋನ್ ಪ್ರತಿದಾಳಿ ಆರಂಭಿಸಿದೆ.

ಇರಾನ್‌ನ ಈ ಪ್ರತೀಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಮತ್ತೆ ಮುಟ್ಟಿದರೆ ಹಿಂದೆಂದೂ ಕಾಣದ ಅತಿ ಭೀಕರ ಹೊಡೆತ ತಿನ್ನಲಿದೆ, ಆ ದಾಳಿಯ ನಂತರ ಇರಾನ್‌ನಲ್ಲಿ ಏನೂ ಉಳಿಯುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜೋರ್ಡಾನ್ ಮೇಲೆ ಕ್ಷಿಪಣಿ ದಾಳಿ: ಜೋರ್ಡಾನ್‌ನಲ್ಲಿರುವ ಯುಎಸ್ ಮಿಲಿಟರಿ ನೆಲೆಗಳನ್ನು (ಕ್ಯಾಂಪ್ ಟಿಟಿನ್, ಅಲ್ ಅಜ್ರಾಕ್) ಗುರಿಯಾಗಿಸಿ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ. ಜೋರ್ಡಾನ್ ಸೇನೆಯು ತನ್ನ ವಾಯುಪ್ರದೇಶಕ್ಕೆ ನುಗ್ಗಿದ 13 ಕ್ಷಿಪಣಿಗಳಲ್ಲಿ 10 ಕ್ಷಿಪಣಿಗಳನ್ನು ಆಕಾಶದಲ್ಲೇ ಹೊಡೆದುರುಳಿಸಿದ್ದು, ೩ ಕ್ಷಿಪಣಿಗಳು ದೂರದ ನಿರ್ಜನ ಪ್ರದೇಶಗಳಲ್ಲಿ ಬಿದ್ದಿವೆ.

ಮತ್ತಷ್ಟು ಓದಿ: ಇರಾನ್-ಅಮೆರಿಕ ನೀ ಕೊಡೆ ನಾ ಬಿಡೆ ಜಗ್ಗಾಟ; ಹಾರ್ಮುಜ್ ಜಲಸಂಧಿ ಅಮೆರಿಕದ ಭೂಭಾಗ ಎಂದು ಟ್ರಂಪ್ ಘೋಷಣೆ

ಬಹ್ರೇನ್ ಹಾಗೂ ಕುವೈತ್‌ನಲ್ಲಿ ಡ್ರೋನ್ ಹಾವಳಿ: ಬಹ್ರೇನ್‌ನಲ್ಲಿರುವ ಯುಎಸ್ ನೌಕಾಪಡೆ ನೆಲೆ ಮತ್ತು ಕುವೈತ್‌ನ ಗಡಿ ಭಾಗಗಳಲ್ಲಿ ಶಂಕಿತ ಇರಾನಿಯನ್ ಡ್ರೋನ್‌ಗಳು ಪತ್ತೆಯಾಗಿದ್ದು, ವಾಯು ರಕ್ಷಣಾ ವ್ಯವಸ್ಥೆಗಳು ಪ್ರತಿದಾಳಿ ನಡೆಸಿವೆ.

ಕೆಶ್ಮ್ ಮತ್ತು ಲಾರಕ್ ದ್ವೀಪಗಳ ಮೇಲೆ ದಾಳಿ: ಹಾರ್ಮುಜ್ ಜಲಸಂಧಿಯಲ್ಲಿ ಕಡಲ ಗಣಿಗಳನ್ನು ಅಳವಡಿಸಲು ಸಜ್ಜಾಗಿದ್ದ ಐಆರ್‌ಜಿಸಿ ರಾಕೆಟ್ ಲಾಂಚರ್‌ಗಳು ಹಾಗೂ ಜಿರೋಫ್ಟ್ ವಿಮಾನ ನಿಲ್ದಾಣದಂತಹ ಪ್ರಮುಖ ಕೇಂದ್ರಗಳ ಮೇಲೆ ಅಮೆರಿಕದ ಸೆಂಟ್ರಲ್ ಕಮಾಂಡ್ ಭಾರಿ ದಾಳಿ ನಡೆಸಿದೆ.

ಟ್ರಂಪ್ ಖಡಕ್ ವಾರ್ನಿಂಗ್: ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಅಧ್ಯಕ್ಷ ಟ್ರಂಪ್, ಜಲಸಂಧಿಯಲ್ಲಿ ಗಣಿಗಳನ್ನು ಹಾಕುವ ಇರಾನ್‌ನ ವಿಫಲ ಪ್ರಯತ್ನಕ್ಕೆ ನಾವು ತಕ್ಕ ಪ್ರಹಾರ ನೀಡಿದ್ದೇವೆ. ಇರಾನ್ ಮತ್ತೆ ಪ್ರತೀಕಾರಕ್ಕೆ ಮುಂದಾದರೆ ನಾವು ಇನ್ನಷ್ಟು ದೊಡ್ಡ ಮತ್ತು ವಿನಾಶಕಾರಿ ಮಟ್ಟದಲ್ಲಿ ದಾಳಿ ಮಾಡುತ್ತೇವೆ ಎಂದು ಗುಡುಗಿದ್ದಾರೆ.

ಕಚ್ಚಾ ತೈಲ ದರ ಏರಿಕೆ: ವಿಶ್ವದ ಒಟ್ಟು ತೈಲ ಮತ್ತು ಅನಿಲ ಸಾಗಣೆಯ ಸುಮಾರು ಶೇಕಡಾ 20 ರಷ್ಟು ಭಾಗ ಹಾದುಹೋಗುವ ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮಿತಿಮೀರಿರುವ ಕಾರಣ, ಬ್ರೆಂಟ್ ಕಚ್ಚಾ ತೈಲ ದರದಲ್ಲಿ ತಕ್ಷಣವೇ ಪ್ರತಿ ಬ್ಯಾರೆಲ್‌ಗೆ ಶೇ. 2 ಕ್ಕೂ ಹೆಚ್ಚು ಏರಿಕೆ ಕಂಡುಬಂದಿದೆ.

ನಾಗರಿಕರ ಸಾವು-ನೋವು ಆರೋಪ: ಅಮೆರಿಕ ನಡೆಸಿದ ದಾಳಿಯ ಚರ್ರೆಗಳು ಸಿರಿಕ್ ಕೌಂಟಿಯ ಕೊಹೆಸ್ತಕ್‌ನಲ್ಲಿ ಮದುವೆ ಸಮಾರಂಭ ನಡೆಯುತ್ತಿದ್ದ ಮನೆಯೊಂದಕ್ಕೆ ತಗುಲಿ ಮಗು ಸೇರಿದಂತೆ 4ಮಂದಿ ಸಾವನ್ನಪ್ಪಿದ್ದಾರೆ ಎಂದು ಇರಾನಿನ ರೆಡ್ ಕ್ರೆಸೆಂಟ್ ಆರೋಪಿಸಿದ್ದು, ಪ್ರಾದೇಶಿಕ ಉದ್ವಿಗ್ನತೆ ಮತ್ತಷ್ಟು ಜಟಿಲಗೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ