ಅಮೆರಿಕ ಯುದ್ಧ ಗೆದ್ದಿದೆ, ಇರಾನಿನ ನೌಕಾಪಡೆ, ವಾಯುಪಡೆ ಸಂಪೂರ್ಣ ನಾಶವಾಗಿದೆ ಎಂದ ಟ್ರಂಪ್

ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಯುದ್ಧ ಗೆದ್ದಿದ್ದೇವೆ, ಅವರ ನೌಕಾಪಡೆ, ವಾಯುಪಡೆ ನಾಶವಾಗಿದೆ ಎಂದು ಘೋಷಿಸಿದ್ದಾರೆ. ಇರಾನ್ ಒಪ್ಪಂದಕ್ಕೆ ಸಿದ್ಧವಿದೆ ಎಂದು ಹೇಳಿದರೂ, ಇರಾನ್ ವಿದೇಶಾಂಗ ಸಚಿವಾಲಯ ಇದನ್ನು ನಿರಾಕರಿಸಿದೆ. ಅಮೆರಿಕ-ಇಸ್ರೇಲ್ ದಾಳಿಗಳು ಮುಂದುವರಿದಿದ್ದು, ಹಲವರು ಸತ್ತಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿಯೇ ಉಳಿದಿದೆ.

ಅಮೆರಿಕ ಯುದ್ಧ ಗೆದ್ದಿದೆ, ಇರಾನಿನ ನೌಕಾಪಡೆ, ವಾಯುಪಡೆ ಸಂಪೂರ್ಣ ನಾಶವಾಗಿದೆ ಎಂದ ಟ್ರಂಪ್
ಡೊನಾಲ್ಡ್​ ಟ್ರಂಪ್
Image Credit source: Shutterstock

Updated on: Mar 25, 2026 | 9:33 AM

ವಾಷಿಂಗ್ಟನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಉಲ್ಬಣಗೊಳ್ಳುತ್ತಿದ್ದರೂ, ಡೊನಾಲ್ಡ್​ ಟ್ರಂಪ್(Donald Trump) ಮಾತ್ರ ತಾವೇ ಯುದ್ಧ ಗೆದ್ದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇರಾನಿನ ನೌಕಾಪಡೆ, ವಾಯುಪಡೆ ಸಂಪೂರ್ಣವಾಗಿ ನಾಶವಾಗಿದೆ ಎಂದರು. ಗೃಹ ಸಚಿವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಟ್ರಂಪ್, ನಾವು ಈಗ ಮಾತುಕತೆ ನಡೆಸುತ್ತಿದ್ದೇವೆ ಇರಾನ್ ಒಪ್ಪಂದ ಮಾಡಿಕೊಳ್ಳಲು ಸಿದ್ಧವಿದೆ ಎಂದರು.

ಅವರ ನೌಕಾಪಡೆ ಹೋಗಿದೆ, ಅವರ ವಾಯುಪಡೆ ಹೋಗಿದೆ, ಅವರ ಸಂವಹನ ಹೋಗಿದೆ ಅವರ ಶಕ್ತಿ ಬಹುತೇಕ ಕುಸಿದಿದೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ ಜತೆಗಿನ ಶಾಂತಿ ಮಾತುಕತೆಗಳು ಯಶಸ್ವಿಯಾಗುತ್ತೆ ಎನ್ನುವ ನಂಬಿಕೆ ಇದೆ, ನಾವು ಯುದ್ಧ ಕೊನೆಗೊಳಿಸುತ್ತೇವೆ, ಆದರೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ಇರಾನ್ ಒಪ್ಪಂದಕ್ಕೆ ಉತ್ಸುಕವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್ ಸ್ವತಃ ಮಾತುಕತೆಗಳನ್ನು ಪ್ರಾರಂಭಿಸಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಇದಕ್ಕೂ ಮೊದಲು, ಮುಂದಿನ ಐದು ದಿನಗಳವರೆಗೆ ಇರಾನಿನ ವಿದ್ಯುತ್ ಸ್ಥಾವರಗಳ ಮೇಲಿನ ದಾಳಿಗೆ ಅವರು ನಿಷೇಧ ಹೇರಿದ್ದಾರೆ. ಈ ಸಮಯದಲ್ಲಿ ಒಪ್ಪಂದಕ್ಕೆ ಬರಬಹುದು ಎನ್ನಲಾಗಿದೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್; ಇರಾನ್ ಮೇಲಿನ ಯುದ್ಧ, ಹಾರ್ಮುಜ್ ಜಲಸಂಧಿಯ ಬಗ್ಗೆ ಚರ್ಚೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಸಂಪೂರ್ಣವಾಗಿ ಕೊನೆಗೊಳಿಸಲು ಮಾತುಕತೆ ನಡೆಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆದರೆ, ಮಾತುಕತೆ ಕುರಿತು ಟ್ರಂಪ್ ಅವರ ಹೇಳಿಕೆಯನ್ನು ಇರಾನ್ ವಿದೇಶಾಂಗ ಸಚಿವಾಲಯ ತಿರಸ್ಕರಿಸಿದೆ.

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ಮುಂದುವರೆದಿದ್ದು, ದಕ್ಷಿಣ ಟೆಹ್ರಾನ್‌ನಲ್ಲಿ ನಡೆದ ಒಂದು ದಾಳಿಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 28 ಜನರು ಗಾಯಗೊಂಡಿದ್ದಾರೆ. ಇರಾನ್ ವಾಯು ಪ್ರದೇಶದ ಮೇಲೆ ಅಮೆರಿಕದ ಪಡೆಗಳು ನಿಯಂತ್ರಣ ಹೊಂದಿವೆ.

ನಮ್ಮ ವಿಮಾನಗಳು ಟೆಹ್ರಾನ್ ಮೇಲೆ ಹಾರುತ್ತಿವೆ.ಆದರೆ ಈ ಬಗ್ಗೆ ಅವರಿಗೆ ಏನೂ ಮಾಡಲು ಸಾಧ್ಯವಿಲ್ಲ. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲು ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇರಾನ್ ಈ ಷರತ್ತಿಗೆ ಒಪ್ಪಿಕೊಂಡಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:25 am, Wed, 25 March 26

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us