AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಿ ಒಪ್ಪಂದದ ನಡುವೆಯೂ ಯುದ್ಧದ ಕಾರ್ಮೋಡ, ಒಪ್ಪಂದ ಮೀರಿದರೆ ಹುಷಾರ್, ಇರಾನ್ ಸುತ್ತ ಸೇನೆ ಜಮಾವಣೆ ಮಾಡಿದ ಟ್ರಂಪ್

ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್‌ಗೆ ತೀವ್ರ ಎಚ್ಚರಿಕೆ ನೀಡಿದ್ದು, ಶಾಶ್ವತ ಒಪ್ಪಂದವಾಗುವವರೆಗೂ ಅಮೆರಿಕದ ಸೇನೆ ಇರಾನ್ ಸುತ್ತ ಜಮಾಯಿಸಲಿದೆ ಎಂದಿದ್ದಾರೆ. ಒಪ್ಪಂದ ವಿಫಲವಾದರೆ ಭೀಕರ ಮಿಲಿಟರಿ ದಾಳಿ ನಡೆಸುವ ಬೆದರಿಕೆ ಹಾಕಿದ್ದಾರೆ. ಇಸ್ರೇಲ್ ದಾಳಿಯಿಂದ ಅಸಮಾಧಾನಗೊಂಡ ಇರಾನ್, ಮಾತುಕತೆ ನಿರಾಕರಿಸಿದೆ. ಹಾರ್ಮುಜ್ ಜಲಸಂಧಿಯ ಭದ್ರತೆ ಮತ್ತು ಪರಮಾಣು ಶಸ್ತ್ರಾಸ್ತ್ರ ನಿಷೇಧ ಟ್ರಂಪ್‌ನ ಪ್ರಮುಖ ಷರತ್ತುಗಳಾಗಿವೆ.

ಶಾಂತಿ ಒಪ್ಪಂದದ ನಡುವೆಯೂ ಯುದ್ಧದ ಕಾರ್ಮೋಡ, ಒಪ್ಪಂದ ಮೀರಿದರೆ ಹುಷಾರ್, ಇರಾನ್ ಸುತ್ತ ಸೇನೆ ಜಮಾವಣೆ ಮಾಡಿದ ಟ್ರಂಪ್
ಡೊನಾಲ್ಡ್​ ಟ್ರಂಪ್ Image Credit source: India Today
ನಯನಾ ರಾಜೀವ್
|

Updated on: Apr 09, 2026 | 11:04 AM

Share

ವಾಷಿಂಗ್ಟನ್, ಏಪ್ರಿಲ್ 09: ಅಮೆರಿಕ ಮತ್ತು ಇರಾನ್(Iran) ನಡುವಿನ ಕದನ ವಿರಾಮದ ಘೋಷಣೆಯ ಬೆನ್ನಲ್ಲೇ ಜಾಗತಿಕ ರಾಜಕೀಯದಲ್ಲಿ ಮತ್ತೆ ಯುದ್ಧದ ಕಾರ್ಮೋಡಗಳು ಕವಿಯತೊಡಗಿವೆ. ತಮ್ಮ ‘ಟ್ರುತ್ ಸೋಶಿಯಲ್’ ವೇದಿಕೆಯಲ್ಲಿ ಅಬ್ಬರಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಸರ್ಕಾರಕ್ಕೆ ಅತ್ಯಂತ ಗಂಭೀರ ಎಚ್ಚರಿಕೆ ನೀಡಿದ್ದಾರೆ.ಇರಾನ್ ಸುತ್ತಮುತ್ತ ಅಮೆರಿಕದ ನೌಕಾಪಡೆ, ಯುದ್ಧ ವಿಮಾನಗಳು ಮತ್ತು ಮಿಲಿಟರಿ ಸಿಬ್ಬಂದಿ ಸರ್ವ ಸನ್ನದ್ಧ ಸ್ಥಿತಿಯಲ್ಲಿ ಇರಲಿದ್ದಾರೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಹೆಚ್ಚುವರಿ ಮದ್ದುಗುಂಡು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ನಮ್ಮ ಸೇನೆ ಇರಾನ್‌ನ ಸುತ್ತಲೂ ಮೊಕ್ಕಾಂ ಹೂಡಲಿದೆ. ಒಂದು ಶಾಶ್ವತ ಮತ್ತು ನೈಜ ಒಪ್ಪಂದ ಏರ್ಪಡುವವರೆಗೆ ನಮ್ಮ ಮಿಲಿಟರಿ ಅಲ್ಲಿಂದ ಕದಲುವುದಿಲ್ಲ ದು ಟ್ರಂಪ್ ಘೋಷಿಸಿದ್ದಾರೆ. ಒಪ್ಪಂದದ ಪಾಲನೆಯಲ್ಲಿ ಇರಾನ್ ಒಂದು ವೇಳೆ ವಿಫಲವಾದರೆ ಅಥವಾ ವಾಷಿಂಗ್ಟನ್‌ನ ಶರತ್ತುಗಳನ್ನು ಗಾಳಿಗೆ ತೂರಿದರೆ, ಅಮೆರಿಕ ಹಿಂದೆಂದೂ ನೋಡಿರದ ರೀತಿಯಲ್ಲಿ ಭೀಕರ ಮಿಲಿಟರಿ ದಾಳಿ ನಡೆಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಯಾವುದೇ ಕಾರಣಕ್ಕೂ ಒಪ್ಪಂದ ಮುರಿದರೆ ಆಗ ಗುಂಡಿನ ದಾಳಿ ಆರಂಭವಾಗಲಿದೆ. ಅದು ಹಿಂದೆಂದಿಗಿಂತಲೂ ದೊಡ್ಡದಾಗಿ ಮತ್ತು ಬಲವಾಗಿರಲಿದೆ ಎಂಬುದು ಟ್ರಂಪ್ ಹೇಳಿದ್ದಾರೆ.

ಇರಾನ್‌ನ ಅಸಮಾಧಾನ ಮತ್ತು ಇಸ್ರೇಲ್ ದಾಳಿ ಬುಧವಾರ ಇಸ್ರೇಲ್ ಪಡೆಗಳು ಲೆಬನಾನ್ ಮೇಲೆ ನಡೆಸಿದ ಭೀಕರ ದಾಳಿಯಲ್ಲಿ ನೂರಾರು ಜನರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇರಾನ್ ಸರ್ಕಾರ, ಅಮೆರಿಕದೊಂದಿಗೆ ಶಾಶ್ವತ ಶಾಂತಿ ಮಾತುಕತೆ ನಡೆಸುವುದು ಈಗಿನ ಸಂದರ್ಭದಲ್ಲಿ ಅಸಮಂಜಸ ಎಂದು ಕಿಡಿಕಾರಿದೆ. ಈ ಬೆಳವಣಿಗೆಯು ಎರಡೂ ದೇಶಗಳ ನಡುವಿನ ಮಾತುಕತೆಗೆ ಹಿನ್ನಡೆಯುಂಟು ಮಾಡಿದೆ.

ಮತ್ತಷ್ಟು ಓದಿ: ಅಮೆರಿಕದ ಎಫ್-18 ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ಹಾರ್ಮುಜ್ ಜಲಸಂಧಿಯ ಭದ್ರತೆ ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ಮತ್ತೊಂದು ಪ್ರಮುಖ ಅಂಶವನ್ನು ಪ್ರಸ್ತಾಪಿಸಿದ್ದಾರೆ. ಇರಾನ್ ಯಾವುದೇ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರಬಾರದು ಮತ್ತು ಜಾಗತಿಕ ತೈಲ ವ್ಯಾಪಾರಕ್ಕೆ ಪ್ರಮುಖವಾದ ಹಾರ್ಮುಜ್ ಜಲಸಂಧಿಯು (Strait of Hormuz) ಸುರಕ್ಷಿತವಾಗಿ ಮತ್ತು ಮುಕ್ತವಾಗಿರಬೇಕು. ಇದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಟ್ರಂಪ್ ಅವರ ಈ ನಡೆ ಇರಾನ್ ಮೇಲೆ ಗರಿಷ್ಠ ಒತ್ತಡ ಹೇರುವ ತಂತ್ರದ ಮುಂದುವರಿದ ಭಾಗದಂತೆ ಕಾಣುತ್ತಿದೆ. ಇರಾನ್ ಈ ಬೆದರಿಕೆಗೆ ಮಣಿಯುತ್ತದೆಯೇ ಅಥವಾ ಮತ್ತೊಂದು ಸಂಘರ್ಷಕ್ಕೆ ನಾಂದಿ ಹಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ