AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ಮಿಲಿಟರಿ ದಾಳಿಯ ಎಚ್ಚರಿಕೆ, ಮತ್ತೊಂದೆಡೆ ಒಪ್ಪಂದದ ಮಾತು: ಟ್ರಂಪ್ ಮಾತುಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ ತಳಮಳ!

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೀಘ್ರದಲ್ಲೇ ಮಿಲಿಟರಿ ದಾಳಿ ನಡೆಸುವ ಸಾಧ್ಯತೆಯನ್ನು ತಳ್ಳಿಹಾಕಿಲ್ಲ. ಅದೇ ವೇಳೆ ಪರಿಸ್ಥಿತಿ ತಿಳಿಗೊಳಿಸಲು ರಾಜತಾಂತ್ರಿಕ ಶಾಂತಿ ಒಪ್ಪಂದದ ಆಯ್ಕೆಯೂ ಮುಕ್ತವಾಗಿದೆ ಎಂದು ತಿಳಿಸಿರುವುದು ಜಾಗತಿಕವಾಗಿ ಭಾರೀ ಚರ್ಚೆಗೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

ಒಂದೆಡೆ ಮಿಲಿಟರಿ ದಾಳಿಯ ಎಚ್ಚರಿಕೆ, ಮತ್ತೊಂದೆಡೆ ಒಪ್ಪಂದದ ಮಾತು: ಟ್ರಂಪ್ ಮಾತುಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ ತಳಮಳ!
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್Image Credit source: PTI
ಭಾವನಾ ಹೆಗಡೆ
|

Updated on: Oct 25, 2026 | 12:46 PM

Share

ಮುಖ್ಯಾಂಶಗಳು

  • ಅಮೆರಿಕದ ಅಧ್ಯಕ್ಷ ಟ್ರಂಪ್ ಇರಾನ್ ಮೇಲೆ ಮಿಲಿಟರಿ ದಾಳಿ ನಡೆಸುವ ಎಚ್ಚರಿಕೆ ನೀಡಿದ್ದಾರೆ.
  • ಉದ್ವಿಗ್ನತೆಯ ನಡುವೆಯೂ ಉತ್ತಮ ರಾಜತಾಂತ್ರಿಕ ಶಾಂತಿ ಒಪ್ಪಂದದ ಸಾಧ್ಯತೆಯೂ ಇದೆ.
  • ಹಾರ್ಮುಜ್ ಜಲಸಂಧಿ ಹಾಗೂ ಪ್ರಾದೇಶಿಕ ಬಿಕ್ಕಟ್ಟಿನಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿದೆ.

ಫ್ಲೋರಿಡಾ, ಅಕ್ಟೋಬರ್ 25: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿದ್ದು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಶೀಘ್ರದಲ್ಲೇ (ಭಾನುವಾರ) ಮತ್ತೊಮ್ಮೆ ಮಿಲಿಟರಿ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಸೂಚನೆ ಕೊಟ್ಟಿದ್ದಾರೆ. ಅದೇ ಸಮಯದಲ್ಲಿ, ಪರಿಸ್ಥಿತಿಯನ್ನು ತಿಳಿಗೊಳಿಸಲು ರಾಜತಾಂತ್ರಿಕ ಒಪ್ಪಂದಕ್ಕೂ ಅವಕಾಶವಿದೆ ಎಂದು ಹೇಳುವ ಮೂಲಕ ಜಾಗತಿಕ ರಾಜಕಾರಣದಲ್ಲಿ ಟ್ರಂಪ್ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಫ್ಲೋರಿಡಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, ಅಮೆರಿಕದ ಮುಂದಿನ ಕ್ರಮದ ಬಗ್ಗೆ ಯಾವುದೇ ಖಚಿತತೆ ನೀಡದಿದ್ದರೂ, ಮಿಲಿಟರಿ ಕಾರ್ಯಾಚರಣೆ ಹಾಗೂ ಶಾಂತಿ ಒಪ್ಪಂದ ಎರಡೂ ಆಯ್ಕೆಗಳು ಮುಕ್ತವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್ ಜೊತೆಗಿನ ಒಪ್ಪಂದಕ್ಕೆ ಬದ್ಧರಾಗಿರುತ್ತಾರಾ ಟ್ರಂಪ್?

ಈ ಹಿಂದೆ ಇರಾನ್ ವಿರುದ್ಧ “ಎಪಿಕ್ ಫ್ಯೂರಿ” (Epic Fury) ಹೆಸರಿನಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನ ಮಿಲಿಟರಿ ಮೂಲಭೂತ ಸೌಕರ್ಯಗಳಿಗೆ ಭಾರಿ ಹಾನಿಯಾಗಿತ್ತು. ಪ್ರಸ್ತುತ ಇರಾನ್ ಹಾಗೂ ಅಮೆರಿಕದ ನಡುವಿನ ಈ ಸಂಘರ್ಷವು ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮಡ ಕವಿಯುವಂತೆ ಮಾಡಿದೆ. ಇರಾನ್ ಪರಮಾಣು ಆಯುಧಗಳನ್ನು ಹೊಂದುವುದನ್ನು ತಡೆಯುವುದೇ ತಮ್ಮ ಮುಖ್ಯ ಗುರಿ ಎಂದು ಪುನರುಚ್ಚರಿಸಿರುವ ಟ್ರಂಪ್, ಇರಾನ್ ಜತೆ ಉತ್ತಮ ಒಪ್ಪಂದ ಮಾಡಿಕೊಳ್ಳಲು ಸಿದ್ಧವಿದ್ದರೂ, ಅವರು ಆ ಒಪ್ಪಂದವನ್ನು ಎಷ್ಟರ ಮಟ್ಟಿಗೆ ಗಂಭೀರವಾಗಿ ಪಾಲಿಸುತ್ತಾರೆ ಎಂಬುದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ಮೆಕ್ಕಾ, ಮದೀನಾ ಗುರಿಯಾಗಿಸಿ ದಾಳಿ ಎಂದ ಸೌದಿ ಅರೇಬಿಯಾ: ಆರೋಪ ನಿರಾಕರಿಸಿದ ಹೌತಿಗಳು

ಅಮೆರಿಕದ ಮುಂದಿನ ಹೆಜ್ಜೆ ಏನು?

ಮತ್ತೊಂದೆಡೆ, ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವ ಸಂಬಂಧ ಪಾಕಿಸ್ತಾನಿ ಮಧ್ಯವರ್ತಿಗಳ ಮೂಲಕ ಇರಾನ್ ಹೊಸ ಪ್ರಸ್ತಾವನೆ ಮುಂದಿಟ್ಟಿದೆ ಎಂಬ ವರದಿಗಳನ್ನು ಇರಾನ್ ತಳ್ಳಿಹಾಕಿದೆ. ಅಮೆರಿಕದ ಕಠಿಣ ನೌಕಾ ದಿಗ್ಬಂಧನ ಹಾಗೂ ನಿರಂತರ ಬೆದರಿಕೆಗಳ ನಡುವೆಯೂ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮುಂದುವರಿದಿದ್ದು, ಅಮೆರಿಕದ ಮುಂದಿನ ಹೆಜ್ಜೆ ಏನಾಗಲಿದೆ ಎಂಬ ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!