AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ-ಇರಾನ್ ನಡುವೆ ಜಿದ್ದಾಜಿದ್ದಿ: ಮತ್ತೊಮ್ಮೆ ಭೀಕರ ದಾಳಿ ಮಾಡುತ್ತೇವೆ ಎಂದ ಟ್ರಂಪ್‌ಗೆ ಎಚ್ಚರಿಕೆಯಿಂದಿರಿ ಎಂದ ಇರಾನ್

ಅಮೆರಿಕ-ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗಿದೆ. ಡೊನಾಲ್ಡ್ ಟ್ರಂಪ್ ಇರಾನ್‌ಗೆ ತೀವ್ರ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದು, ಅದಕ್ಕೆ ಇರಾನ್ ಕಠಿಣ ತಿರುಗೇಟು ನೀಡಿದೆ. "ನಮ್ಮ ಸಶಸ್ತ್ರ ಪಡೆಗಳು ಯಾವುದೇ ದಾಳಿಗೆ ಪ್ರತ್ಯುತ್ತರ ನೀಡಲು ಸಿದ್ಧ" ಎಂದು ಇರಾನ್ ಹೇಳಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿದ್ದರೂ, ಉಭಯ ದೇಶಗಳ ವಾಗ್ದಾಳಿ ಜಾಗತಿಕ ಆತಂಕ ಸೃಷ್ಟಿಸಿದೆ. ಪಾಕಿಸ್ತಾನ ಮತ್ತು ಕತಾರ್ ಮಧ್ಯಸ್ಥಿಕೆ ವಹಿಸಿವೆ.

ಅಮೆರಿಕ-ಇರಾನ್ ನಡುವೆ ಜಿದ್ದಾಜಿದ್ದಿ: ಮತ್ತೊಮ್ಮೆ ಭೀಕರ ದಾಳಿ ಮಾಡುತ್ತೇವೆ ಎಂದ ಟ್ರಂಪ್‌ಗೆ ಎಚ್ಚರಿಕೆಯಿಂದಿರಿ ಎಂದ  ಇರಾನ್
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: Jun 22, 2026 | 7:27 AM

Share

ಜ್ಯೂರಿಚ್ , ಜೂನ್ 22: ಒಂದು ಕಡೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವೆ ಯುದ್ಧ ನಿಲ್ಲಿಸುವ ಕುರಿತು ಮಹತ್ವದ ಶಾಂತಿ ಮಾತುಕತೆಗಳು ಆರಂಭವಾಗಿವೆ. ಆದರೆ ಮತ್ತೊಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಾಯಕರ ನಡುವಿನ ವಾಗ್ದಾಳಿ ಜಗತ್ತಿನಲ್ಲಿ ತೀವ್ರ ಆತಂಕ ಮೂಡಿಸಿದೆ. ಇರಾನ್ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರೆ, ನಮ್ಮ ಸಶಸ್ತ್ರ ಪಡೆಗಳು ತಕ್ಕ ಪ್ರತ್ಯುತ್ತರ ನೀಡಲು ಸಿದ್ಧವಾಗಿವೆ ಎಂದು ಇರಾನ್ ತಿರುಗೇಟು ನೀಡಿದೆ.

ಟ್ರಂಪ್ ಹಾಕಿದ ಭೀಕರ ದಾಳಿಯ ಬೆದರಿಕೆ ಏನು? ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರೂತ್ ಸೋಶಿಯಲ್’ನಲ್ಲಿ ಪೋಸ್ಟ್ ಹಾಕಿ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಸೇರಿದಂತೆ ಇರಾನ್ ಬೆಂಬಲಿತ ಸಶಸ್ತ್ರ ಗುಂಪುಗಳು ತೊಂದರೆ ಉಂಟುಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು.

ಒಂದು ವೇಳೆ ಇರಾನ್ ತನ್ನ ಈ ಕೃತ್ಯವನ್ನು ನಿಲ್ಲಿಸದಿದ್ದರೆ, ಕಳೆದ ವಾರ ನಾವು ಇರಾನ್ ಮೇಲೆ ಮಾಡಿದ ದಾಳಿಗಿಂತಲೂ ನೂರು ಪಟ್ಟು ಹೆಚ್ಚು ತೀವ್ರವಾದ ಮತ್ತು ಕಠಿಣವಾದ ಮಿಲಿಟರಿ ದಾಳಿಯನ್ನು ಅಮೆರಿಕ ನಡೆಸಲಿದೆ”ಎಂದು ಟ್ರಂಪ್ ಘರ್ಜಿಸಿದ್ದಾರೆ.

ಮತ್ತಷ್ಟು ಓದಿ: ‘ಇರಾನ್ ಕತೆ ಮುಗಿಯಿತು, ಅವರಿಗೆ ಒಂದು ಪೈಸೆಯೂ ಸಿಗುವುದಿಲ್ಲ’; ಕಿಡಿಕಾರಿದ ಟ್ರಂಪ್

ನಾವು ಮಾತನಾಡುವವರಲ್ಲ, ಮಾಡಿ ತೋರಿಸುವವರು: ಇರಾನ್ ಖಡಕ್ ಉತ್ತರ ಟ್ರಂಪ್ ಅವರ ಈ ಬೆದರಿಕೆಯನ್ನು ಇರಾನ್‌ನ ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಗಾಲಿಬಾಫ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಅಮೆರಿಕದ ಬೆದರಿಕೆಗಳಿಗೆ ನಾವು ಯಾವುದೇ ಬೆಲೆ ಕೊಡುವುದಿಲ್ಲ. ಟ್ರಂಪ್ ತಮ್ಮ ಹೇಳಿಕೆಗಳನ್ನು ನೀಡುವಾಗ ಜಾಗರೂಕರಾಗಿರಬೇಕು. ಅವರ ಬೆದರಿಕೆಗಳು ನಿಜವಾಗಿಯೂ ಕೆಲಸ ಮಾಡುತ್ತಿದ್ದರೆ, ಇಂದು ಅಮೆರಿಕ ಈ ಮಟ್ಟದ ಹತಾಶೆಗೆ ತಲುಪುತ್ತಿರಲಿಲ್ಲ. ಅವರು ಎಷ್ಟು ಬೇಕಾದರೂ ಮಾತನಾಡಿಕೊಳ್ಳಲಿ, ನಮ್ಮ ಸಶಸ್ತ್ರ ಪಡೆಗಳು ವಿಭಿನ್ನವಾಗಿ ಪ್ರತಿಕ್ರಿಯಿಸಲು ಸಜ್ಜಾಗಿವೆ. ನಾವು ಕೇವಲ ಮಾತನಾಡುವವರಲ್ಲ, ಯುದ್ಧಭೂಮಿಯಲ್ಲಿ ಕಾರ್ಯನಿರ್ವಹಿಸುವವರು” ಎಂದು ಗಾಲಿಬಾಫ್ ಸವಾಲು ಹಾಕಿದ್ದಾರೆ.

ಈ ತೀವ್ರ ವಾಗ್ದಾಳಿಗಳ ನಡುವೆಯೂ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಉಭಯ ದೇಶಗಳ ಮುಖಂಡರು ಮಾತುಕತೆ ನಡೆಸುತ್ತಿದ್ದಾರೆ. ಉಪಾಧ್ಯಕ್ಷ ಜೆಡಿ ವ್ಯಾನ್ಸ್, ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಮತ್ತು ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಚರ್ಚೆಯಲ್ಲಿದ್ದಾರೆ.

ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮತ್ತು ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಘಾಲಿಬಾಫ್ ಟೆಹ್ರಾನ್ ಪರವಾಗಿ ಭಾಗವಹಿಸಿದ್ದಾರೆ. ಈ ಇಡೀ ಜಾಗತಿಕ ಬಿಕ್ಕಟ್ಟನ್ನು ಬಗೆಹರಿಸಲು ಪಾಕಿಸ್ತಾನ ಮತ್ತು ಕತಾರ್ ದೇಶಗಳು ಮಧ್ಯಸ್ಥಿಕೆ ವಹಿಸಿ ಮಾತುಕತೆಯನ್ನು ಮುನ್ನಡೆಸುತ್ತಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ