Donald Trump Speech: ನನ್ನ ಸ್ಪರ್ಧೆ ತಡೆಯಲು ಚೀನಾದಿಂದ ಹಣ ಪಡೆದಿದ್ದಾರೆ: ಅಧ್ಯಕ್ಷ ಬೈಡನ್ ವಿರುದ್ಧ ಟ್ರಂಪ್ ಗಂಭೀರ ಆರೋಪ

|

Updated on: Apr 05, 2023 | 7:20 AM

ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ಸ್‌ಗೆ ಗೌಪ್ಯವಾಗಿ ಹಣ ಪಾವತಿಸಿರುವ ಪ್ರಕರಣದಲ್ಲಿ ಬಂಧನವಾಗಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾಷಣದಲ್ಲಿ ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ.

Donald Trump Speech: ನನ್ನ ಸ್ಪರ್ಧೆ ತಡೆಯಲು ಚೀನಾದಿಂದ ಹಣ ಪಡೆದಿದ್ದಾರೆ: ಅಧ್ಯಕ್ಷ ಬೈಡನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಡೊನಾಲ್ಡ್ ಟ್ರಂಪ್
Follow us on

ನ್ಯೂಯಾರ್ಕ್​: ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್ ಪ್ರಕರಣದ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump)​ ಅವರನ್ನು ಪೊಲೀಸರು ಬಂಧಿಸಿದ್ದಾರೆ.  ಇನ್ನು ಈ ಬಗ್ಗೆ ಫ್ಲೋರಿಡಾದ ರೆಸಾರ್ಟ್​ನಲ್ಲಿ ಟ್ರಂಪ್ ಭಾಷಣ ಮಾಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮಾಡಲು ಸುಳ್ಳು ಕೇಸ್​ ಹಾಕಿಸಿದ್ದಾರೆ. ನನ್ನ ಸ್ಪರ್ಧೆ ತಡೆಯಲು ಚೀನಾದಿಂದ ಬೈಡನ್ ಹಣ ಪಡೆದಿದ್ದಾರೆ ಎಂದು ಅಧ್ಯಕ್ಷ ಜೋ ಬೈಡನ್ ವಿರುದ್ಧ ಮಾಜಿ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Donald Trump Arrested: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬಂಧನ


ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡಲಾಗಿದೆ. ಈ ಬಗ್ಗೆ ಕೋರ್ಟ್​ಗೆ ನನ್ನ ಮನವಿಯನ್ನು ಸಲ್ಲಿಸಿದ್ದೇನೆ. ನನ್ನ ಬಳಿ ಇರುವ ಎಲ್ಲ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಿದ್ದು, ಪ್ರಕರಣದ ಕುರಿತ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ನಾನು ಆರೋಪ ಮುಕ್ತನಾಗಿ ಹೊರ ಬರುತ್ತೇನೆ. ನನ್ನ ಬೆಂಬಲಕ್ಕೆ ನಿಂತ ಅಭಿಮಾನಿಗಳಿಗೆ ಹಾಗೂ ಜನತೆಗೆ ಧನ್ಯವಾದ ಎಂದು ಹೇಳಿದ್ದಾರೆ.


2024ರ ಅಧ್ಯಕ್ಷೀಯ ಚುನಾವಣೆ ಸಿದ್ಧತೆಯಲ್ಲಿದ್ದು, ಎರಡನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಹೀಗಾಗಿ ಈ ಬೆಳವಣಿಗೆ ಅಮೆರಿಕಾದಲ್ಲಿ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಟ್ರಂಪ್ ಬಂಧನ ವಿರೋಧಿಸಿ ರಿಪಬ್ಲಿಕನ್ ಪಾರ್ಟಿಯ ಸದಸ್ಯರು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೈಡನ್​​​​ ಸರ್ಕಾರವು ಸಾಕಷ್ಟು ರಕ್ಷಣಾ ಸಿಬ್ಬಂದಿಯನ್ನ ನಿಯೋಜಿಸಿತ್ತು. ಅಲ್ಲದೇ ಟ್ರಂಪ್​​ಗೂ ಮಿಲಿಟರಿ ಭದ್ರತೆ ಒದಗಿಸಲಾಗಿತ್ತು. 2016ರ ಅಧ್ಯಕ್ಷೀಯ ಚುನಾವಣೆ ಪ್ರಚಾರ ಸಂದರ್ಭದಲ್ಲಿ ತಮ್ಮ ಜತೆಗಿನ ಸಂಬಂಧ ಬಹಿರಂಗ ಪಡಿಸದಿರಲು ನೀಲಿಚಿತ್ರ ತಾರೆಗೆ ಟ್ರಂಪ್ ಹಣ ಸಂದಾಯ ಮಾಡಿದ್ದ ಪ್ರಕರಣ ಇದಾಗಿದೆ.

ಏನಿದು ಪ್ರಕರಣ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2016 ರ ಅಧ್ಯಕ್ಷೀಯ ಪ್ರಚಾರದ ಸಮಯದಲ್ಲಿ ಪೋರ್ನ್ ಸ್ಟಾರ್‌ಗಳಿಗೆ ಹಣ ಪಾವತಿಸಿದ್ದಾರೆ ಎಂಬ ಆರೋಪವಿದೆ. ವಾಸ್ತವವಾಗಿ ಟ್ರಂಪ್ ವಿವಾಹೇತರ ಸಂಬಂಧಗಳನ್ನು ಹೊಂದಿದ್ದಾರೆಂದು ಆರೋಪಿಸಲಾಗಿದೆ. ಆದರೆ ಚುನಾವಣಾ ಪ್ರಚಾರದ ಸಮಯದಲ್ಲಿ ಇದು ಹೊರಬರದಂತೆ ತಡೆಯಲು ಅವರಿಗೆ ಹಣ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಮೊದಲ ಬಾರಿಗೆ ಅಮೆರಿಕದ ಮಾಜಿ ಅಧ್ಯಕ್ಷರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿತ್ತು.

ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ಸ್‌ಗೆ ಡೊನಾಲ್ಡ್ ಟ್ರಂಪ್ 130,000 ಡಾಲರ್ ಪಾವತಿಸಿದ್ದಾರೆ ಎಂದು ಗ್ರ್ಯಾಂಡ್ ಜ್ಯೂರಿ ಒಪ್ಪಿಕೊಂಡಿದೆ ಎಂದು ತನಿಖೆಯಿಂದ ತಿಳಿದುಬಂದಿತ್ತು. ಆ ಸಮಯದಲ್ಲಿ ಡೇನಿಯಲ್ಸ್ 27 ವರ್ಷ ವಯಸ್ಸು ಮತ್ತು ಟ್ರಂಪ್ 60 ವರ್ಷ ವಯಸ್ಸಿನವರಾಗಿದ್ದರು. ಆಗಷ್ಟೇ ಅವರ ಮೂರನೇ ಪತ್ನಿ ಮೆಲಾನಿಯಾ ತಮ್ಮ ಮಗ ಬ್ಯಾರನ್‌ಗೆ ಜನ್ಮ ನೀಡಿದ್ದರು.