US Judge: ಶಾಲೆಯನ್ನು ಅರ್ಧಕ್ಕೆ ಬಿಟ್ಟು, ಬೀಡಿ ಕಟ್ಟುತ್ತಿದ್ದ ಕೇರಳದ ವ್ಯಕ್ತಿ ಇದೀಗ ಅಮೆರಿಕದಲ್ಲಿ ನ್ಯಾಯಾಧೀಶ

ಮನಸ್ಸಿದ್ದರೆ ಮಾರ್ಗ, ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಒಂದು ಸಮಯದಲ್ಲಿ ಕೇರಳದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಟ್ಟು, ಬೀಡಿ ಕಟ್ಟುತ್ತಿದ್ದ ಬಾಲಕನೊಬ್ಬ ಇದೀಗ ಅಮೆರಿಕದ ಟೆಕ್ಸಾಸ್​ನ ಜಿಲ್ಲಾ ನ್ಯಾಯಾಧೀಶರಾಗಿದ್ದು, ಎಲ್ಲರೂ ಬಾಯಿ ಮೇಲೆ ಬೆರಳಿಡುವಂತೆ ಮಾಡಿದೆ.

US Judge: ಶಾಲೆಯನ್ನು ಅರ್ಧಕ್ಕೆ ಬಿಟ್ಟು, ಬೀಡಿ ಕಟ್ಟುತ್ತಿದ್ದ ಕೇರಳದ ವ್ಯಕ್ತಿ ಇದೀಗ ಅಮೆರಿಕದಲ್ಲಿ ನ್ಯಾಯಾಧೀಶ
ಸುರೇಂದ್ರನ್Image Credit source: NDTV
Follow us
TV9 Web
| Updated By: ನಯನಾ ರಾಜೀವ್

Updated on:Jan 08, 2023 | 11:40 AM

ಮನಸ್ಸಿದ್ದರೆ ಮಾರ್ಗ, ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಒಂದು ಸಮಯದಲ್ಲಿ ಕೇರಳದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಟ್ಟು, ಬೀಡಿ ಕಟ್ಟುತ್ತಿದ್ದ ಬಾಲಕನೊಬ್ಬ ಇದೀಗ ಅಮೆರಿಕದ ಟೆಕ್ಸಾಸ್​ನ ಜಿಲ್ಲಾ ನ್ಯಾಯಾಧೀಶರಾಗಿದ್ದು, ಈ ಸಾಧನೆಯು ಎಲ್ಲರೂ ಬಾಯಿ ಮೇಲೆ ಬೆರಳಿಡುವಂತೆ ಮಾಡಿದೆ. ಅಮೆರಿಕದ ಟೆಕ್ಸಾಸ್​ನಲ್ಲಿ ಭಾರತೀಯ ಮೂಲದ ವಕೀಲ ಸುರೇಂದ್ರನ್ ಕೆ ಪಟ್ಟೆಲ್ ನ್ಯಾಯಾಧೀಶರಾಗಿದ್ದಾರೆ. ಜನವರಿ 1 ರಂದು ಟೆಕ್ಸಾಸ್​ನ ಫೋರ್ಟ್​ ಬೆಂಡ್ ಕೌಂಟಿಯಲ್ಲಿರುವ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ದಿನಗೂಲಿ ನೌಕರರ ದಂಪತಿಗೆ ಜನಿಸಿದ್ದರು. ಶಾಲಾ, ಕಾಲೇಜು ದಿನಗಳಲ್ಲಿ ಪೋಷಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ತಾನೂ ಕೆಲಸ ಮಾಡುತ್ತಿದ್ದರು. ಬಿಡಿ ಕಟ್ಟಿ ಜೀವನ ನಡೆಸುತ್ತಿದ್ದ ವ್ಯಕ್ತಿ ಇದೀಗ ನ್ಯಾಯಾಧೀಶರಾಗಿರುವುದು ಹೆಮ್ಮೆಯ ವಿಚಾರ.

ಅವರು 10ನೇ ತರಗತಿ ಬಳಿಕ ಶಿಕ್ಷಣಕ್ಕೆ ತೆರೆ ಎಳೆದು ಬೀಡಿ ಕಟ್ಟಲು ಆರಂಭಿಸಿದ್ದರು. ಆದರೆ ಆ ಕಠಿಣ ಸಂದರ್ಭವು ಅವರ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಾಯಿಸಿತ್ತು. ಒಂದು ವರ್ಷದ ಬಳಿಕ ಮತ್ತೆ ಓದುವ ಬಯಕೆ ವ್ಯಕ್ತಪಡಿಸಿದ್ದರು. ಬಳಿಕ ಹಂತ ಹಂತವಾಗಿ ಬೆಳೆಯುತ್ತಾ ಇದೀಗ ಅಮೆರಿಕದಲ್ಲಿ ನ್ಯಾಯಾಧೀಶರಾಗಿದ್ದಾರೆ.

ಸುರೇಂದ್ರನ್ ಅವರು, ನಯನಾರ್ ಸ್ಮಾರಕ ಸರ್ಕಾರಿ ಕಾಲೇಜಿಗೆ ಸೇರಿದರೂ ಕೆಲಸವನ್ನು ಮುಂದುವರೆಸಬೇಕಾಯಿತು. ಇದರಿಂದ ಹಾಜರಾತಿಗೆ ತೊಂದರೆಯಾಗಿ ಅವರನ್ನು ಪರೀಕ್ಷೆಗೆ ಕೂರಲು ಬಿಡಲಿಲ್ಲವಂತೆ, ಆದರೆ ಪಟ್ಟೆಲ್ ಅವರು ವಕೀಲರಾಗಲು ಬಯಸಿದ್ದು, ತನಗೆ ಒಂದೇ ಒಂದು ಅವಕಾಶ ನೀಡುವಂತೆ ಬೇಡಿಕೊಂಡಿದ್ದರು.

ಪಟ್ಟೆಲ್ ಅವರು, 1995ರಲ್ಲಿ ಕಾನೂನು ಪದವಿ ಪಡೆದು, 1996ರಲ್ಲಿ ಕೇರಳದ ಹೊಸದುರ್ಗದಲ್ಲಿ ಪ್ರಾಕ್ಟೀಸ್ ಮಾಡಲು ಶುರುಮಾಡಿದ್ದರು. ಕ್ರಮೇಣವಾಗಿ ಪ್ರಸಿದ್ಧ ವಕೀಲರಾದರು. ಸುಮಾರು 1 ದಶಕದ ನಂತರ ಅವರು ಸುಪ್ರೀಂಕೋರ್ಟ್​ನಲ್ಲಿ ಪ್ರಾಕ್ಟೀಸ್ ಆರಂಭಿಸಿದ್ದರು.

2007ರಲ್ಲಿ ಅವರ ಕುಟುಂಬಕ್ಕೆ ಅಮೆರಿಕಕ್ಕೆ ಹೋಗುವ ಅವಕಾಶ ಸಿಕ್ಕಿತ್ತು, ಬಳಿಕ ನರ್ಸ್​ ಆಗಿದ್ದ ಅವರ ಪತ್ನಿಯನ್ನು ಅಮೆರಿಕದ ಪ್ರಮುಖ ವೈದ್ಯಕೀಯ ಸೌಲಭ್ಯವೊಂದರಲ್ಲಿ ಕೆಲಸ ಮಾಡಲು ಅವಕಾಶ ನೀಡಲಾಗಿತ್ತು.

ಅವರು ತಮ್ಮ ಮಗಳೊಂದಿಗೆ ಅಲ್ಲಿ ನೆಲೆಸಿದರು, ಅಮೆರಿಕಕ್ಕೆ ತೆರಳಿದ ಎರಡು ವರ್ಷಗಳ ನಂತರ, ಪಟ್ಟೆಲ್ ಟೆಕ್ಸಾಸ್​ ಬಾರ್ ಪರೀಕ್ಷೆಗೆ ಹಾಜರಾದರು. ಅವರು ತಮ್ಮ ಮೊದಲು ಪ್ರಯತ್ನದಲ್ಲಿ ಪಾಸ್ ಕೂಡ ಆದರು.

ನಾನು ಉತ್ತಮ ಸ್ಕೋರ್ ಮಾಡದಿದ್ದರೆ ಓದುವುದನ್ನೇ ನಿಲ್ಲಿಸುತ್ತೇನೆ ಎಂದು ಹೇಳಿದ್ದ ಅವರು, ಟಾಪರ್ ಆಗಿ ಹೊರಹೊಮ್ಮಿದ್ದರು. ಹೌಸ್ ಕೀಪಿಂಗ್ ಕೆಲಸ ಮಾಡುತ್ತಾ ಓದನ್ನು ಮುಂದುವರೆಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:39 am, Sun, 8 January 23

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ