ಊಟದ ವಿಚಾರವಾಗಿ ನಡೆದ ಜಗಳದಲ್ಲಿ ನ್ಯಾಯಾಧೀಶರೊಬ್ಬರು ಪತ್ನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ನಂತರ ಪೊಲೀಸರು ಮನೆಯನ್ನು ಪರಿಶೀಲಿಸಿದಾಗ ಸಾಕಷ್ಟು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ವರದಿಗಳ ಪ್ರಕಾರ ನ್ಯಾಯಾಧೀಶರ ಮನೆಯಲ್ಲಿ 47 ಬಗೆಯ ಶಸ್ತ್ರಾಸ್ತ್ರಗಳಿದ್ದವು, 26,000 ಗುಂಡುಗಳು ಪತ್ತೆಯಾಗಿವೆ.
ಆರೆಂಜ್ ಕೌಂಟಿಯಾ ಸುಪೀರಿಯರ್ ಕೋರ್ಟ್ ನ್ಯಾಯಾಧೀಶ ಜೆಫ್ರಿ ಫರ್ಗುಸನ್ ಮದ್ಯದ ಅಮಲಿನಲ್ಲಿ ಪತ್ನಿಯನ್ನು ಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ತಾನು ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.
ನ್ಯಾಯಾಧೀಶರ ಪುತ್ರನೇ ತನ್ನ ತಾಯಿಯ ಸಾವಿನ ಕುರಿತು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ನ್ಯಾಯಾಧೀಶರ ಪತ್ನಿಗೆ 65 ವರ್ಷ ವಯಸ್ಸಾಗಿತ್ತು.
ನ್ಯಾಯಾಧೀಶ ಫರ್ಗುಸನ್ ಮತ್ತು ಅವರ ಪತ್ನಿ ಶೆರಿಲ್ ಅವರು ಹತ್ತಿರದ ರೆಸ್ಟೋರೆಂಟ್ನಲ್ಲಿ ರಾತ್ರಿ ಊಟ ಮಾಡುವಾಗ ಜಗಳವಾಡಿದ್ದರು. ಕೋಪದ ಭರದಲ್ಲಿ ಪತ್ನಿಗೆ ಎದೆಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿದ್ದಾರೆ.
ಮತ್ತಷ್ಟು ಓದಿ: ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ
ನ್ಯಾಯಾಧೀಶರಿಗೆ ಒಂದು ಮಿಲಿಯನ್ ಡಾಲರ್ ಮೊತ್ತದ ಮೇಲೆ ಜಾಮೀನು ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಅಕ್ಟೋಬರ್ 30ರಂದು ನಡೆಯಲಿದೆ. ಫರ್ಗುಸನ್ ಕೊಲೆಯನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದು ವಕೀಲರು ವಾದಿಸಿದ್ದಾರೆ. ಅವರಿಗೆ ಮದ್ಯಪಾನ ಮಾಡದಂತೆ ಕೋರ್ಟ್ ಸೂಚನೆ ನೀಡಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ