AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ

ಗೆಳತಿಯ ಹೊಸ ಹೇರ್​ಕಟ್​ ಅನ್ನು ಇಷ್ಟಪಡದ ಕಾರಣ ಅಮೆರಿಕದ ಮಹಿಳೆಯೊಬ್ಬರನ್ನು ಆಕೆಯ ಪ್ರೇಮಿ ಇರಿದು ಸಾಯಿಸಿದ್ದಾನೆ. ಪೆನ್ಸಿಲ್ವೇನಿಯಾದಲ್ಲಿ ಹೊಸ ಹೇರ್​ಕಟ್ ಮಾಡಿಕೊಂಡ 50 ವರ್ಷದ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಂದಿದ್ದಾನೆ.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ
ಬೆಂಜಮಿನ್ ಗುಯಲ್
ಸುಷ್ಮಾ ಚಕ್ರೆ
|

Updated on: Nov 07, 2024 | 9:15 PM

Share

ಪೆನ್ಸಿಲ್ವೇನಿಯಾದ ವ್ಯಕ್ತಿಯೊಬ್ಬ ತನಗೆ ಇಷ್ಟವಿಲ್ಲದ ಹೇರ್​ಕಟ್ ಮಾಡಿಕೊಂಡ ನಂತರ ತನ್ನ ಗೆಳತಿಯನ್ನು ಇರಿದು ಕೊಂದಿದ್ದಾನೆ. ರಕ್ತಸಿಕ್ತ ಚಾಕುವಿನ ಜೊತೆಗಿದ್ದ ಆತನನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಯಿತು. ಹಿಂಸಾತ್ಮಕ ದಾಳಿಯಲ್ಲಿ ತನ್ನ ಗೆಳತಿಯನ್ನು ಮಾರಣಾಂತಿಕವಾಗಿ ಇರಿದ ನಂತರ ಪೆನ್ಸಿಲ್ವೇನಿಯಾದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬೆಂಜಮಿನ್ ಗುಯಲ್ ಎಂಬ 49 ವರ್ಷದ ವ್ಯಕ್ತಿ ತನ್ನ 50 ವರ್ಷದ ಗೆಳತಿ ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿಕೊಂಡು ಬಂದಿದ್ದಕ್ಕೆ ಅಸಮಾಧಾನಗೊಂಡು ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ತನ್ನ ತಾಯಿಯ ಹೊಸ ಹೇರ್​ಕಟ್ ಕಾರಣಕ್ಕೆ ಈ ಕೊಲೆಯಾಗಿದೆ ಎಂದು ಮೃತ ಮಹಿಳೆಯ ಮಗಳು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು; ಶಾಕಿಂಗ್ ವಿಡಿಯೋ ವೈರಲ್

ಈ ವೇಳೆ ಚಾಕುವಿನ ಇರಿತವನ್ನು ತಡೆಯಲೆತ್ನಿಸಿದ ಆ ಮಹಿಳೆಯ ಸಹೋದರರಿಗೂ ಆರೋಪಿ ಇರಿದಿದ್ದಾನೆ. ಬಳಿಕ ರಕ್ತಸಿಕ್ತವಾದ ಚಾಕುವಿನ ಜೊತೆಗೆ ಆರೋಪಿಯನ್ನು ಬಂಧಿಸಲಾಗಿದೆ. ಹೊಸ ಹೇರ್​ಕಟ್ ಮಾಡಿಸಿಕೊಂಡು ಬಂದಾಗ ಆಕೆಯನ್ನು ನೋಡಿದ ಆರೋಪಿ ಕೋಪಗೊಂಡಿದ್ದ. ಆ ಹೇರ್​ಕಟ್ ಬದಲಿಸಿಕೊಳ್ಳದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ಗಾಬರಿಯಾಗಿದ್ದ ಆ ಮಹಿಳೆ ಆತನಿಗೆ ಕಾಣದಂತೆ ಅಡಗಿದ್ದಳು. ಆದರೆ, ಆತ ಆಕೆಯನ್ನು ಹುಡುಕಿ ಕೊಂದಿದ್ದಾನೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ