AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಷನಲ್​ ಗಾರ್ಡ್​​ ಮೇಲೆ ದಾಳಿ, 19 ದೇಶಗಳ ಜನರ ಗ್ರೀನ್ ಕಾರ್ಡ್‌ಗಳ ಮೇಲೆ ಟ್ರಂಪ್ ಕಣ್ಣು, ಭಾರತದ ಮೇಲೂ ಪರಿಣಾಮ ಬೀರುತ್ತಾ?

ವಾಷಿಂಗ್ಟನ್, ಡಿಸಿಯಲ್ಲಿ ನ್ಯಾಷನಲ್ ಗಾರ್ಡ್ ಮೇಲಿನ ದಾಳಿಯ ಬಳಿಕ, ಅಮೆರಿಕ ಸರ್ಕಾರವು ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. 19 ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರ ಗ್ರೀನ್ ಕಾರ್ಡ್‌ಗಳನ್ನು ಸಂಪೂರ್ಣವಾಗಿ ಮರುಪರಿಶೀಲಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಆಡಳಿತದ ಈ ನಿರ್ಧಾರವು ಗ್ರೀನ್ ಕಾರ್ಡ್ ಹೊಂದಿರುವವರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ.

ನ್ಯಾಷನಲ್​ ಗಾರ್ಡ್​​ ಮೇಲೆ ದಾಳಿ,  19 ದೇಶಗಳ ಜನರ ಗ್ರೀನ್ ಕಾರ್ಡ್‌ಗಳ ಮೇಲೆ ಟ್ರಂಪ್ ಕಣ್ಣು, ಭಾರತದ ಮೇಲೂ ಪರಿಣಾಮ ಬೀರುತ್ತಾ?
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Nov 28, 2025 | 9:48 AM

Share

ವಾಷಿಂಗ್ಟನ್, ನವೆಂಬರ್ 28: ಅಮೆರಿಕದ ಶ್ವೇತಭವನದ ಹೊರಗೆ ಅಫ್ಘಾನ್ ಪ್ರಜೆಯೊಬ್ಬ ಇಬ್ಬರು ನ್ಯಾಷನಲ್​ ಗಾರ್ಡ್​ಗಳ ಮೇಲೆ  ಗುಂಡಿನ ದಾಳಿ(Firing) ನಡೆಸಿದ್ದ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ. ಈ ಹೊತ್ತಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಅಫ್ಘಾನಿಸ್ತಾನ ಸೇರಿ 18 ದೇಶಗಳ ಜನರ ಗ್ರೀನ್​ ಕಾರ್ಡ್​ಗಳನ್ನು ಮರುಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ. ದಾಳಿಕೋರ 29 ವರ್ಷದ ಅಫ್ಘಾನ್ ಪ್ರಜೆಯಾಗಿದ್ದು, ಈ ಹಿಂದೆ ಅಫ್ಘಾನಿಸ್ತಾನದಲ್ಲಿ ಅಮೆರಿಕದ ಪಡೆಗಳೊಂದಿಗೆ ಕೆಲಸ ಮಾಡಿದ್ದ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಆಡಳಿತವು 19 ದೇಶಗಳ ಜನರಿಗೆ ನೀಡಲಾದ ಗ್ರೀನ್ ಕಾರ್ಡ್‌ಗಳನ್ನು ಮರುಪರಿಶೀಲಿಸುವುದಾಗಿ ಘೋಷಿಸಿದೆ. ಅಮೆರಿಕದ ಪೌರತ್ವ ಮತ್ತು ವಲಸೆ ಸೇವೆಯ ಮುಖ್ಯಸ್ಥ ಜೋಸೆಫ್ ಅಡ್ಲೋ ಈ ಘೋಷಣೆ ಮಾಡಿದ್ದಾರೆ. ಭೀತಿ ಇರುವ ದೇಶದ ಜನರ ಗ್ರೀನ್ ಕಾರ್ಡ್‌ಗಳನ್ನು ಸಂಪೂರ್ಣವಾಗಿ ಮತ್ತು ಕಟ್ಟುನಿಟ್ಟಾಗಿ ಮರುಪರಿಶೀಲಿಸುವಂತೆ ನಿರ್ದೇಶಿಸಿದ್ದಾರೆ ಎಂದು ಅಡ್ಲೋ ಹೇಳಿದ್ದಾರೆ.

ಜೋಸೆಫ್ ಅಡ್ಲೋ ಯಾವ 19 ದೇಶಗಳ ಗ್ರೀನ್ ಕಾರ್ಡ್ ಹೊಂದಿರುವವರು ಪರಿಶೀಲನೆಗೆ ಒಳಪಡುತ್ತಾರೆ ಎಂಬುದನ್ನು ನಿರ್ದಿಷ್ಟಪಡಿಸಿಲ್ಲ. ಕಳವಳಕಾರಿ ದೇಶಗಳ ಪಟ್ಟಿಯಲ್ಲಿ 19 ದೇಶಗಳನ್ನು ಜೂನ್‌ನಲ್ಲಿ ಟ್ರಂಪ್ ಆಡಳಿತ ಗುರುತಿಸಿತ್ತು. ಈ ದೇಶಗಳಲ್ಲಿ ಅಫ್ಘಾನಿಸ್ತಾನ, ಬರ್ಮಾ, ಚಾಡ್, ಕಾಂಗೋ ಗಣರಾಜ್ಯ, ಈಕ್ವಟೋರಿಯಲ್ ಗಿನಿಯಾ, ಎರಿಟ್ರಿಯಾ, ಹೈಟಿ, ಇರಾನ್, ಲಿಬಿಯಾ, ಸೊಮಾಲಿಯಾ, ಸುಡಾನ್, ಯೆಮೆನ್, ಬುರುಂಡಿ, ಕ್ಯೂಬಾ, ಲಾವೋಸ್, ಸಿಯೆರಾ ಲಿಯೋನ್, ಟೋಗೊ, ತುರ್ಕಮೆನಿಸ್ತಾನ್ ಮತ್ತು ವೆನೆಜುವೆಲಾ ಸೇರಿವೆ.

ಮತ್ತಷ್ಟು ಓದಿ: ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ದಾಳಿ, ಇಬ್ಬರು ನ್ಯಾಷನಲ್​ ಗಾರ್ಡ್​​ಗಳಿಗೆ ಗಾಯ

ಗುರುವಾರ ವಾಷಿಂಗ್ಟನ್​ ಡಿಸಿಯಲ್ಲಿ ನ್ಯಾಷನಲ್​ ಗಾರ್ಡ್​ಗಳ ಮೇಲೆ ದಾಳಿ ಮಾಡಿದವನನ್ನು ರಹಮಾನಲ್ಲಾ ಲಕನ್ವಾಲ್ ಎಂದು ಗುರುತಿಸಲಾಗಿದೆ. ಆತ ಅಫ್ಘಾನಿಸ್ತಾನದವನಾಗಿದ್ದು 2021ರಲ್ಲಿ ಅಮೆರಿಕಕ್ಕೆ ಬಂದಿದ್ದ.ಅಫ್ಘಾನಿಸ್ತಾನದಲ್ಲಿ ಸಿಐಎ ಜತೆ ಕೆಲಸ ಮಾಡಿದ್ದ, ಅಲ್ಲಿ ತಾಲಿಬಾನ್ ಸರ್ಕಾರ ಅಧಿಕಾರವಹಿಸಿಕೊಂಡ ಬಳಿಕ ಬೈಡನ್ ಸರ್ಕಾರದ ಪುನರ್ವಸತಿ ನೀತಿಯಡಿಯಲ್ಲಿ ಆತ ಅಮೆರಿಕಕ್ಕೆ ಬಂದಿದ್ದ.

ಗ್ರೀನ್ ಕಾರ್ಡ್ ಪರಿಶೀಲನೆಯ ಕುರಿತು ಎಡ್ಲೋ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಅಮೆರಿಕ ಜನರ ಭದ್ರತೆ ಅತ್ಯಂತ ಮುಖ್ಯ. ಹಿಂದಿನ ಆಡಳಿತದ ಅಜಾಗರೂಕ ಪುನರ್ವಸತಿ ನೀತಿಗಳಿಗೆ ಅಮೆರಿಕ ಜನರು ಬೆಲೆ ತೆರುವುದಿಲ್ಲ.ಗ್ರೀನ್ ಕಾರ್ಡ್ ಮರು-ಪರಿಶೀಲನಾ ಪ್ರಕ್ರಿಯೆಯನ್ನು ಹೇಗೆ ನಡೆಸಲಾಗುತ್ತದೆ ಎಂಬುದರ ಕುರಿತು ಎಡ್ಲೋ ವಿವರಗಳನ್ನು ನೀಡಿಲ್ಲ. ಜೂನ್‌ನಲ್ಲಿ ಯುಎಸ್ ವಲಸೆ ಸಂಸ್ಥೆಯು ಹಲವಾರು ದೇಶಗಳ, ವಿಶೇಷವಾಗಿ ಅಫ್ಘಾನಿಸ್ತಾನದ ಗ್ರೀನ್ ಕಾರ್ಡ್ ಹೊಂದಿರುವವರ ಮೇಲೆ ಕಠಿಣ ಪರಿಶೀಲನೆಯನ್ನು ಘೋಷಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್