2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಪೋಟದ ಹಿಂದಿರುವ ಮಾಸ್ಟರ್​ಮೈಂಡ್​ನನ್ನು ಹತ್ಯೆಗೈದ ತಾಲಿಬಾನ್

2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಪೋಟದ ಹಿಂದಿರುವ ಮಾಸ್ಟರ್​ಮೈಂಡ್​ನನ್ನು ಹತ್ಯೆಗೈದ ತಾಲಿಬಾನ್
ಕಾಬೂಲ್
Follow us
ನಯನಾ ರಾಜೀವ್
|

Updated on: Apr 26, 2023 | 7:34 AM

2021ರಲ್ಲಿ ಕಾಬೂಲ್(Kabul) ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ, ಈ ಕೃತ್ಯಕ್ಕೆ ಕಾರಣಕರ್ತರಾಗಿದ್ದ ಐಸಿಸ್ ಉಗ್ರನನ್ನು ತಾಲಿಬಾನ್ ಹತ್ಯೆ ಮಾಡಿದೆ ಎನ್ನುವ ಮಾಹಿತಿ ಸಿಕ್ಕಿದೆ. ಅಮೆರಿಕ ಮತ್ತು ಇತರೆ ದೇಶಗಳು ಸಾವಿರಾರು ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಗಳಲ್ಲಿ ತೊಡಗಿಕೊಮಡಿರುವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಹಮೀದ್ ಕರ್ಝಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ ಸಂಭವಿಸಿತ್ತು, ಅಮೆರಿಕ ಸೇನೆಯು ಇದನ್ನು ದೃಢಪಡಿಸಿತ್ತು. 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ದೇಶವನ್ನು ತೊರೆಯಲು ಸಾವಿರಾರು ಜನರು ಕಳೆದ 12 ದಿನಗಳಿಂದಲೂ ಠಿಕಾಣಿ ಹೂಡಿರುವ ವಿಮಾನ ನಿಲ್ದಾಣದ ಮುಖ್ಯ ಅಬ್ಬೆ ಗೇಟ್​ನಲ್ಲಿ ಸ್ಫೋಟ ಸಂಭವಿಸಿತ್ತು.

ಮತ್ತಷ್ಟು ಓದಿ: Afghanistan ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟ; 3 ಸಾವು

ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಅಫ್ಗಾನಿಸ್ತಾದ ಕಾಬೂಲ್‌ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು ಎಂದು ಬ್ರಿಟನ್ ಸರ್ಕಾರ ತನ್ನ ನಾಗರಿಕರಿಗೆ ಸೂಚನೆ ನೀಡಿತ್ತು.

ವಿದೇಶಿ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್‌ಸಿಡಿಒ) ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಅತಂತ್ರವಾಗಿದೆ ಎಂದು ಹೇಳಿದ್ದು, ಬ್ರಿಟಿಷ್ ನಾಗರಿಕರು ಮತ್ತು ಇತರ ಸ್ಥಳಾಂತರಗೊಂಡವರು ಸುರಕ್ಷಿತ ಸ್ಥಳಗಳಿಗೆ ತೆರಳಿ, ಮುಂದಿನ ಸೂಚನೆ ಬರುವವರೆಗೆ ಅಲ್ಲಿಯೇ ಇರಿ ಎಂದು ಸೂಚನೆ ನೀಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ