AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ರಕ್ಷಣಾ ವಲಯದಲ್ಲಿ ತಲ್ಲಣ: ಇರಾನ್ ಸಂಘರ್ಷದ ದಾಖಲೆ ಸೋರಿಕೆ ಬೆನ್ನಲ್ಲೇ ಅಧಿಕಾರಿಗಳಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಿದ ಅಮೆರಿಕ

ಅಮೆರಿಕದ ಸೇನಾ ಶಸ್ತ್ರಾಸ್ತ್ರಗಳ ಗಂಭೀರ ಕೊರತೆ ಕುರಿತ ರಹಸ್ಯ ಮಾಹಿತಿ ಸೋರಿಕೆಯಾಗಿದ್ದು, ಪೆಂಟಗನ್‌ನಲ್ಲಿ ತೀವ್ರ ತಲ್ಲಣ ಸೃಷ್ಟಿಸಿದೆ. ಇರಾನ್ ಸಂಘರ್ಷದ ಭೀತಿಯ ನಡುವೆ ರಾಷ್ಟ್ರೀಯ ಭದ್ರತೆಗೆ ಧಕ್ಕೆ ಆರೋಪದ ಮೇಲೆ, ಅಮೆರಿಕ ಆಡಳಿತವು ಸುಮಾರು 50 ಹಿರಿಯ ಸೇನಾ ಅಧಿಕಾರಿಗಳು ಮತ್ತು ನಾಗರಿಕ ಸಿಬ್ಬಂದಿಗೆ ಸುಳ್ಳು ಪತ್ತೆ ಪರೀಕ್ಷೆ (ಪಾಲಿಗ್ರಾಫ್) ನಡೆಸಿದೆ. ಉಕ್ರೇನ್, ಇಸ್ರೇಲ್‌ಗೆ ನೆರವೇ ಶಸ್ತ್ರಾಸ್ತ್ರ ಕೊರತೆಗೆ ಕಾರಣ ಎನ್ನಲಾಗಿದೆ.

ಅಮೆರಿಕ ರಕ್ಷಣಾ ವಲಯದಲ್ಲಿ ತಲ್ಲಣ: ಇರಾನ್ ಸಂಘರ್ಷದ ದಾಖಲೆ ಸೋರಿಕೆ ಬೆನ್ನಲ್ಲೇ ಅಧಿಕಾರಿಗಳಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಿದ ಅಮೆರಿಕ
ಡೊನಾಲ್ಡ್​ ಟ್ರಂಪ್Image Credit source: DD India
ನಯನಾ ರಾಜೀವ್
|

Updated on:Sep 05, 2026 | 8:15 AM

Share

ವಾಷಿಂಗ್ಟನ್, ಸೆಪ್ಟೆಂಬರ್ 05: ಇರಾನ್ ಜತೆಗಿನ ಸಂಭಾವ್ಯ ಸಂಘರ್ಷ ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಅಮೆರಿಕದ ಪ್ರಮುಖ ಶಸ್ತ್ರಾಸ್ತ್ರಗಳ ದಾಸ್ತಾನು ಕೊರತೆಯ ರಹಸ್ಯ ಮಾಹಿತಿ ಮಾಧ್ಯಮಗಳಿಗೆ ಸೋರಿಕೆಯಾಗಿದ್ದು, ಪೆಂಟಗನ್‌ನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಮಿಲಿಟರಿಯ ‘ಜಾಯಿಂಟ್ ಚೀಫ್ಸ್ ಆಫ್ ಸ್ಟಾಫ್’ ಜತೆ ಕಾರ್ಯನಿರ್ವಹಿಸುತ್ತಿರುವ ಸುಮಾರು 50 ಹಿರಿಯ ಸೇನಾ ಅಧಿಕಾರಿಗಳು ಹಾಗೂ ನಾಗರಿಕ ಸಿಬ್ಬಂದಿಯನ್ನು ಅಮೆರಿಕ ಆಡಳಿತವು ಪಾಲಿಗ್ರಾಫ್ (ಸುಳ್ಳು ಪತ್ತೆ) ಪರೀಕ್ಷೆಗೆ ಒಳಪಡಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಶಸ್ತ್ರಾಸ್ತ್ರಗಳ ಕೊರತೆ ಬಯಲು: ಅಮೆರಿಕದ ಸೇನಾ ಬತ್ತಳಿಕೆಯಲ್ಲಿ ದೀರ್ಘ-ಶ್ರೇಣಿಯ ಕ್ಷಿಪಣಿಗಳು ಹಾಗೂ ಪ್ರಮುಖ ಪೇಟ್ರಿಯಾಟ್ ವಾಯು ರಕ್ಷಣಾ ಇಂಟರ್‌ಸೆಪ್ಟರ್‌ಗಳ ದಾಸ್ತಾನು ಗಣನೀಯವಾಗಿ ಕುಸಿದಿದೆ ಎಂದು ಮಾಧ್ಯಮಗಳಲ್ಲಿ ಸರಣಿ ವರದಿಗಳು ಪ್ರಕಟವಾಗಿದ್ದವು. ಇದು ಅಮೆರಿಕದ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದೆ ಎಂದು ಆಡಳಿತ ಕೆಂಡಾಮಂಡಲವಾಗಿದೆ.

ಪಾಲಿಗ್ರಾಫ್ ಪರೀಕ್ಷೆ: ಜಂಟಿ ಸಿಬ್ಬಂದಿ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಸುಮಾರು 1,500 ರಿಂದ 2 ಸಾವಿರ ನೌಕರರ ಪೈಕಿ ಆಯ್ದ 50 ಪ್ರಮುಖ ಅಧಿಕಾರಿಗಳನ್ನು ವರ್ಗೀಕೃತ ಮಾಹಿತಿ ಲೀಕ್ ಮಾಡಿದ ಶಂಕೆಯಡಿ ತೀವ್ರ ವಿಚಾರಣೆ ಹಾಗೂ ಪಾಲಿಗ್ರಾಫ್ ಟೆಸ್ಟ್‌ಗೆ ಗುರಿಪಡಿಸಲಾಗಿದೆ.

ಪೆಂಟಗನ್ ಪ್ರತಿಕ್ರಿಯೆ: ಈ ಬಗ್ಗೆ ಪ್ರತಿಕ್ರಿಯಿಸಿರುವ ಪೆಂಟಗನ್ ವಕ್ತಾರ ಸೀನ್ ಪಾರ್ನೆಲ್, “ಆಂತರಿಕ ತನಿಖೆಗಳ ಕುರಿತು ನಾವು ಸಾರ್ವಜನಿಕವಾಗಿ ಯಾವುದೇ ವಿವರ ಹಂಚಿಕೊಳ್ಳುವುದಿಲ್ಲ. ಆದರೆ ವರ್ಗೀಕೃತ ರಾಷ್ಟ್ರೀಯ ಭದ್ರತಾ ಮಾಹಿತಿಯ ಸೋರಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು. ಜಗತ್ತಿನಾದ್ಯಂತ ನಿಯೋಜಿಸಲಾದ ನಮ್ಮ ಸೈನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅಗತ್ಯ” ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಓದಿ: ಇರಾನ್​ನ ಜನನಿಬಿಡ ಪ್ರದೇಶದ ಮೇಲೆ ಹೊಸ ಸೂಪರ್ ಕ್ಷಿಪಣಿ ಪ್ರಯೋಗಿಸಿದ ಯುಎಸ್ ಸೇನೆ

ಶಸ್ತ್ರಾಸ್ತ್ರಗಳ ಕೊರತೆಗೆ ಕಾರಣವೇನು?

ಉಕ್ರೇನ್ ಮತ್ತು ಇಸ್ರೇಲ್‌ಗೆ ಬೃಹತ್ ನೆರವು: ಕಳೆದ ಹಲವು ತಿಂಗಳುಗಳಿಂದ ಉಕ್ರೇನ್ ಹಾಗೂ ಮಧ್ಯಪ್ರಾಚ್ಯದಲ್ಲಿ ಇಸ್ರೇಲ್‌ಗೆ ನಿರಂತರವಾಗಿ ಅತ್ಯಾಧುನಿಕ ರಕ್ಷಣಾ ಕ್ಷಿಪಣಿಗಳನ್ನು ಸರಬರಾಜು ಮಾಡಿದ ಪರಿಣಾಮ ಅಮೆರಿಕದ ಸ್ವಂತ ಬತ್ತಳಿಕೆಯಲ್ಲೇ ನಿರ್ಣಾಯಕ ಯುದ್ಧಸಾಮಗ್ರಿಗಳ ಕೊರತೆ ಎದುರಾಗಿದೆ ಎನ್ನಲಾಗಿದೆ.

ಇರಾನ್ ಸಂಘರ್ಷದ ಭೀತಿ: ಇರಾನ್ ಜತೆ ಯುದ್ಧ ಸನ್ನಿವೇಶ ನಿರ್ಮಾಣವಾದರೆ ಕ್ಷಿಪಣಿ ಕೊರತೆಯಿಂದಾಗಿ ಅಮೆರಿಕ ಹಿನ್ನಡೆ ಅನುಭವಿಸಬಹುದು ಎಂಬ ಆಂತರಿಕ ರಹಸ್ಯ ವಿಶ್ಲೇಷಣೆಯನ್ನು ಪತ್ರಕರ್ತರಿಗೆ ಸೋರಿಕೆ ಮಾಡಿರುವುದು ಟ್ರಂಪ್ ಆಡಳಿತವನ್ನು ಮುಜುಗರಕ್ಕೀಡುಮಾಡಿದೆ.

ಸೇನೆಯಲ್ಲಿ ಅಸಮಾಧಾನ: ಸೇನೆಯ ಉನ್ನತ ದರ್ಜೆಯ ಜನರಲ್‌ಗಳು ಮತ್ತು ಗುಪ್ತಚರ ವಿಶ್ಲೇಷಕರನ್ನು ಅಪರಾಧಿಗಳಂತೆ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಿರುವುದು ಪೆಂಟಗನ್ ಆಂತರಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ.

ಟ್ರಂಪ್ ಆಡಳಿತದ ಬಿಗಿ ನಿಲುವು: ಶ್ವೇತಭವನ ಹಾಗೂ ರಕ್ಷಣಾ ಇಲಾಖೆಯಿಂದ ರಹಸ್ಯ ದಾಖಲೆಗಳು ಮತ್ತು ಮಾತುಕತೆಗಳು ಮಾಧ್ಯಮಗಳಿಗೆ ಸೋರಿಕೆಯಾಗುವುದನ್ನು ತಡೆಯಲು ಟ್ರಂಪ್ ಈ ಹಿಂದಿನಿಂದಲೂ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ತಪ್ಪಿತಸ್ಥರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಿ ಗಂಭೀರ ದೇಶದ್ರೋಹದ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:14 am, Sat, 5 September 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ