AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ನಲ್ಲಿ ನಾಪತ್ತೆಯಾಗಿದ್ದ ಅಮೆರಿಕ ಯುದ್ಧ ವಿಮಾನದ ಪೈಲಟ್ ಸಿಕ್ಕಿದ್ದಾರೆ: ಡೊನಾಲ್ಡ್​ ಟ್ರಂಪ್

ಇರಾನ್‌ನಲ್ಲಿ ಕಾಣೆಯಾಗಿದ್ದ ಅಮೆರಿಕ ಯುದ್ಧ ವಿಮಾನದ ಪೈಲಟ್‌ನ್ನು ಪತ್ತೆ ಹಚ್ಚಿ ರಕ್ಷಿಸಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಧೈರ್ಯಶಾಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಎಂದು ಟ್ರಂಪ್ ಬಣ್ಣಿಸಿದ್ದಾರೆ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಪೈಲಟ್‌ರನ್ನು ಇಸ್ರೇಲಿ ಪಡೆಗಳ ಸಹಾಯದಿಂದ ರಕ್ಷಿಸಲಾಗಿದ್ದು, ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಾಗಿಯೇ ಇದೆ.

ಇರಾನ್​ನಲ್ಲಿ ನಾಪತ್ತೆಯಾಗಿದ್ದ ಅಮೆರಿಕ ಯುದ್ಧ ವಿಮಾನದ ಪೈಲಟ್ ಸಿಕ್ಕಿದ್ದಾರೆ: ಡೊನಾಲ್ಡ್​ ಟ್ರಂಪ್
ಟ್ರಂಪ್ Image Credit source: Frontline The Hindu
ನಯನಾ ರಾಜೀವ್
|

Updated on: Apr 05, 2026 | 10:16 AM

Share

ಟೆಹ್ರಾನ್, ಮಾರ್ಚ್​ 05: ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಹೆಚ್ಚು ಗಂಭೀರವಾಗುತ್ತಿದೆ. ಇತ್ತೀಚೆಗೆ, ಎರಡು ಯುಎಸ್ ಮಿಲಿಟರಿ ವಿಮಾನಗಳು ಇರಾನ್​ನಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಅಪಘಾತಕ್ಕೀಡಾಗಿದ್ದು, ಆ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಪೈಲಟ್ ಸಿಕ್ಕಿರುವುದಾಗಿ ಡೊನಾಲ್ಡ್​ ಟ್ರಂಪ್(Donald Trump) ಹೇಳಿದ್ದಾರೆ. ಟ್ರೂತ್‌ಸೋಶಿಯಲ್‌ನಲ್ಲಿನ ಪೋಸ್ಟ್‌ನಲ್ಲಿ, ಟ್ರಂಪ್ ಮಾಹಿತಿ ನೀಡಿದ್ದು, ಈ ಕಾರ್ಯಾಚರಣೆಯನ್ನು ಅಮೆರಿಕದ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದೆಂದು ಬಣ್ಣಿಸಿದ್ದಾರೆ.

ಪೈಲಟ್ ಇರಾನ್‌ನ ಪರ್ವತಗಳ ಹಿಂದೆ ಇದ್ದರು, ಅವರನ್ನು ಇಸ್ರೇಲಿ ಪಡೆಗಳು ಹಿಂಬಾಲಿಸುತ್ತಿದ್ದವು. ಒಬ್ಬನೇ ಒಬ್ಬ ಅಮೆರಿಕನ್ನನ ಸಾವು ಅಥವಾ ಗಾಯಗೊಳ್ಳದೆ ನಾವು ಈ ಎರಡೂ ಕಾರ್ಯಾಚರಣೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಯಿತು. ಎರಡು ದಿನಗಳಿಂದ ಪೈಲಟ್ ನಾಪತ್ತೆಯಾಗಿದ್ದರು, ಭಾರೀ ಹೋರಾಟದ ಬಳಿಕ ಅವರನ್ನು ರಕ್ಷಿಸಲಾಗಿದೆ ಎಂದು ಯುಎಸ್ ಅಧಿಕಾರಿಗಳು ಹೇಳಿರುವುದಾಗಿ ಅಲ್​ ಜಜೀರಾ ವರದಿ ಮಾಡಿದೆ.

ಅಮೆರಿಕದ ಎಫ್-15ಇ ಸ್ಟ್ರೈಕ್ ಈಗಲ್ ವಿಮಾನವು ಒಬ್ಬ ಪೈಲಟ್ ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಯ ಅಧಿಕಾರಿಯನ್ನು ಹೊತ್ತೊಯ್ದಿತ್ತು.ಅವರಲ್ಲಿ ಒಬ್ಬರನ್ನು ತಕ್ಷಣವೇ ರಕ್ಷಿಸಲಾಗಿದ್ದರೆ, ಮತ್ತೊಬ್ಬರು ಕಾಣೆಯಾಗಿದ್ದರು. ಇರಾನ್ ಅಮೆರಿಕ, ಇಸ್ರೇಲಿ ಮತ್ತು ಪ್ರಾದೇಶಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಮುಂದುವರೆಸಿದೆ.

ಮತ್ತಷ್ಟು ಓದಿ: ​ಇರಾನ್ ಕದನವಿರಾಮಕ್ಕೆ ಮನವಿ ಮಾಡಿದೆ; ಡೊನಾಲ್ಡ್ ಟ್ರಂಪ್ ಸ್ಫೋಟಕ ಹೇಳಿಕೆ

ಬುಶೆಹ್ರ್ ಪರಮಾಣು ಸೌಲಭ್ಯದ ಬಳಿ ಶನಿವಾರ ನಡೆದ ವೈಮಾನಿಕ ದಾಳಿಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು ಮತ್ತು ಬೆಂಬಲ ಕಟ್ಟಡಕ್ಕೆ ಹಾನಿಯಾಗಿತ್ತು. ಮಧ್ಯ ಇರಾನ್ ಮೇಲೆ F-15E ಯುದ್ಧ ವಿಮಾನವನ್ನು ಗುರಿಯಾಗಿರಿಸಿಕೊಂಡು ಹಾರಿಸಲಾಗಿತ್ತು ಮತ್ತು ಅದು ಕೊಹ್ಗಿಲುಯೆ ಮತ್ತು ಬೋಯರ್-ಅಹ್ಮದ್ ಪ್ರಾಂತ್ಯದಲ್ಲಿ ಪತನಗೊಂಡಿರಬಹುದು ಎಂದು ಇರಾನಿನ ಮಾಧ್ಯಮವೊಂದು ತಿಳಿಸಿದೆ. ಇರಾನ್ ಸೇನೆಯು ಅಮೆರಿಕದ ಜೆಟ್ ಸಿಬ್ಬಂದಿಗಾಗಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಸದಸ್ಯನ ಇರುವಿಕೆಯ ಬಗ್ಗೆ ಮಾಹಿತಿ ನೀಡುವ ಯಾವುದೇ ನಾಗರಿಕನಿಗೆ ಅದು 60,000 ಡಾಲರ್ ಬಹುಮಾನವನ್ನು ಘೋಷಿಸಿತ್ತು.

ನೈಋತ್ಯ ಇರಾನ್‌ನ ಅನೇಕ ಜನರು ಅಮೆರಿಕನ್ ಯುದ್ಧ ವಿಮಾನ ಪತನಗೊಂಡ ಪ್ರದೇಶದ ಸುತ್ತಮುತ್ತ ಖಾಸಗಿ ಕಾರುಗಳಲ್ಲಿ ತೆರಳಿ ಅಮೆರಿಕನ್ ಪೈಲಟ್‌ನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ. ಪೈಲಟ್‌ ಜೊತೆ ಯಾರೂ ಅನುಚಿತವಾಗಿ ವರ್ತಿಸಬಾರದು ಎಂದು ಇರಾನ್ ಸಶಸ್ತ್ರ ಪಡೆಗಳು ಜನರಿಗೆ ಮನವಿ ಮಾಡಿದ್ದವು ಎಂದು ಮಾಧ್ಯಮಗಳು ವರದಿ ಪ್ರಕಟಿಸಿವೆ.

ಬ್ರಿಟನ್‌ನ ಆರ್‌ಎಎಫ್ ಲೇಕನ್‌ಹೀತ್ ತಾಣದಲ್ಲಿ ನೆಲೆಯೂರಿರುವ 494ನೇ ಫೈಟರ್ ಸ್ಕ್ವಾಡ್ರನ್‌ಗೆ ಸೇರಿದ F-15E ಸ್ಟ್ರೈಕ್ ಈಗಲ್ ವಿಮಾನವನ್ನೂ ಹೊಡೆದುರುಳಿಸಲಾಗಿದೆ ಎಂದು ಹೇಳಿದೆ. ಫೆಬ್ರವರಿ 28ರಂದು ಸಂಘರ್ಷ ಆರಂಭವಾದ ನಂತರ ಇರಾನ್ ಮೂರನೇ ಬಾರಿ F-35 ಅನ್ನು ಹೊಡೆದುರುಳಿಸಿದ್ದೇವೆ ಎಂದು ಹೇಳುತ್ತಿದೆ.

ಮಾರ್ಚ್ 23 ಮತ್ತು ಏಪ್ರಿಲ್ 2ರಂದು ಟೆಹ್ರಾನ್ ಇದೇ ರೀತಿಯ ಹೇಳಿಕೆ ನೀಡಿತ್ತು. ಆ ಎರಡೂ ಬಾರಿ ಅಮೆರಿಕದ ಸೆಂಟ್ರಲ್ ಕಮಾಂಡ್ ಆ ಆರೋಪಗಳನ್ನು ತಳ್ಳಿ ಹಾಕಿತ್ತು. ಕೇಶ್ಮ್ ದ್ವೀಪದ ಸಮೀಪ ಸಂಭವಿಸಿದೆ ಎಂದು ಹೇಳಲಾದ ಒಂದು ಅಪಘಾತದ ಕುರಿತ ಇರಾನಿಯನ್ ವಿಡಿಯೋಗೆ ಪ್ರತಿಕ್ರಿಯಿಸಿದ ಸೆಂಟ್ಕಾಂ ಅಧಿಕೃತ ಎಕ್ಸ್ ಖಾತೆ, ಎಲ್ಲಾ ಅಮೆರಿಕನ್ ಯುದ್ಧ ವಿಮಾನಗಳು ಸರಿ ಇವೆ ಯಾವ ಹಾನಿಯೂ ಆಗಿಲ್ಲ ಎಂದಿದ್ದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ