AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಸಮುದ್ರದಲ್ಲಿ ವಿಮಾನ ದುರಂತ, ಇಬ್ಬರು ಬಾಲಕರು ಸೇರಿ ಆರು ಮಂದಿ ಸಾವು

ಅಮೆರಿಕದ ಮಿಸ್ಸಿಸ್ಸಿಪ್ಪಿ ಕರಾವಳಿಯ ಹಾರ್ನ್ ದ್ವೀಪದ ಬಳಿ ಸೆಸ್ನಾ 210 ವಿಮಾನ ಪತನಗೊಂಡು ಆರು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಬಾಲಕರೂ ಸೇರಿದ್ದಾರೆ. ವಿಮಾನ ನಿಮಿಷಕ್ಕೆ 10,000 ಅಡಿ ವೇಗದಲ್ಲಿ ಕೆಳಕ್ಕೆ ಇಳಿದಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ದುರಂತದ ನಿಖರ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.

ಅಮೆರಿಕದ ಸಮುದ್ರದಲ್ಲಿ ವಿಮಾನ ದುರಂತ, ಇಬ್ಬರು ಬಾಲಕರು ಸೇರಿ ಆರು ಮಂದಿ ಸಾವು
ಸಮುದ್ರ
ನಯನಾ ರಾಜೀವ್
|

Updated on:Nov 25, 2026 | 12:14 PM

Share

ವಾಷಿಂಗ್ಟನ್, ನವೆಂಬರ್ 25: ಅಮೆರಿಕದ ಮಿಸ್ಸಿಸ್ಸಿಪ್ಪಿ ಕರಾವಳಿಯ ಹಾರ್ನ್ ದ್ವೀಪದ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ನವೆಂಬರ್ 24ರಂದು ಸಮುದ್ರಕ್ಕೆ ಪತನಗೊಂಡ ಸೆಸ್ನಾ 210 ವಿಮಾನದಲ್ಲಿದ್ದ ನಾಲ್ವರು ವಯಸ್ಕರು ಮತ್ತು 8 ಹಾಗೂ 10 ವರ್ಷದ ಇಬ್ಬರು ಬಾಲಕರು ಮೃತಪಟ್ಟಿರುವುದನ್ನು ರಕ್ಷಣಾ ತಂಡಗಳು ಪತ್ತೆಹಚ್ಚಿವೆ. ಆರಂಭದಲ್ಲಿ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಬಳಿಕ ಶೋಧ ಕಾರ್ಯಾಚರಣೆ ವೇಳೆ ವಿಮಾನದ ಅವಶೇಷಗಳೊಳಗೆ ಪ್ರಯಾಣಿಕರ ಮೃತದೇಹಗಳು ಪತ್ತೆಯಾಗಿವೆ.

ನ್ಯೂ ಓರ್ಲಿಯನ್ಸ್‌ನಿಂದ ಫ್ಲೋರಿಡಾಕ್ಕೆ ಹೊರಟಿದ್ದ ವಿಮಾನ

ನವೆಂಬರ್ 24ರಂದು ಮಂಗಳವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮಿಸ್ಸಿಸ್ಸಿಪ್ಪಿಯ ಪಾಸ್ಕಗೌಲಾ ಪ್ರದೇಶದ ಬಳಿ ವಿಮಾನ ಪತನಗೊಂಡಿದೆ. ಇದು ನ್ಯೂ ಓರ್ಲಿಯನ್ಸ್‌ನ ಲೇಕ್‌ಫ್ರಂಟ್ ವಿಮಾನ ನಿಲ್ದಾಣದಿಂದ ಫ್ಲೋರಿಡಾದ ಫೋರ್ಟ್ ಮೈಯರ್ಸ್‌ನ ಪೇಜ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ವಿಮಾನವು ಹಾರ್ನ್ ದ್ವೀಪದಿಂದ ಸುಮಾರು ಎರಡು ಮೈಲಿ ಈಶಾನ್ಯ ಭಾಗದಲ್ಲಿ ಸಮುದ್ರಕ್ಕೆ ಬಿದ್ದಿದೆ. ವಿಮಾನದಲ್ಲಿದ್ದವರ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಅಮೆರಿಕದ ಕರಾವಳಿ ರಕ್ಷಣಾ ಪಡೆ ತಕ್ಷಣವೇ ಶೋಧ ಕಾರ್ಯಾಚರಣೆ ಆರಂಭಿಸಿತು.

ನಿಮಿಷಕ್ಕೆ 10 ಸಾವಿರ ಅಡಿ ವೇಗದಲ್ಲಿ ಕೆಳಕ್ಕೆ ಕುಸಿತ

ಅಪಘಾತಕ್ಕೂ ಮುನ್ನ ವಿಮಾನವು ಅಸಾಮಾನ್ಯ ವೇಗದಲ್ಲಿ ಕೆಳಕ್ಕೆ ಇಳಿಯುತ್ತಿತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಅಮೆರಿಕದ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ನೀಡಿದ ಮಾಹಿತಿಯ ಪ್ರಕಾರ, ವಿಮಾನವು ನಿಮಿಷಕ್ಕೆ ಸುಮಾರು 10,000 ಅಡಿ ವೇಗದಲ್ಲಿ ಕೆಳಕ್ಕೆ ಇಳಿಯುತ್ತಿತ್ತು. ಮಧ್ಯಾಹ್ನ 3.45ರ ಸುಮಾರಿಗೆ ವಿಮಾನದೊಂದಿಗಿನ ಸಂಪರ್ಕ ಕಡಿತಗೊಂಡಿತ್ತು. ವಿಮಾನ ಏಕೆ ಇಷ್ಟು ವೇಗವಾಗಿ ಕೆಳಕ್ಕೆ ಇಳಿಯಿತು ಮತ್ತು ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಸಮುದ್ರದಲ್ಲಿ ಪತ್ತೆಯಾದ ವಿಮಾನದ ಅವಶೇಷಗಳು

ಶೋಧ ಕಾರ್ಯಾಚರಣೆ ವೇಳೆ ಕರಾವಳಿ ರಕ್ಷಣಾ ಪಡೆಗೆ ವಿಮಾನದ ಕ್ಯಾಬಿನ್, ಒಂದು ಲೈಫ್ ರಾಫ್ಟ್ ಮತ್ತು ಮೂರು ಲೈಫ್ ಜಾಕೆಟ್‌ಗಳು ಪತ್ತೆಯಾಗಿದ್ದವು. ಆರಂಭದಲ್ಲಿ ಪ್ರಯಾಣಿಕರ ಸುಳಿವು ಸಿಕ್ಕಿರಲಿಲ್ಲ. ನಂತರ ರಕ್ಷಣಾ ತಂಡಗಳು ಮತ್ತು ಮುಳುಗು ತಜ್ಞರು ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿ ವಿಮಾನದ ಅವಶೇಷಗಳೊಳಗೆ ಆರು ಮಂದಿಯ ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ. ಈ ಮೂಲಕ ನಾಪತ್ತೆಯಾಗಿದ್ದ ಎಲ್ಲ ಆರು ಪ್ರಯಾಣಿಕರ ಸಾವಿನ ಬಗ್ಗೆ ದೃಢಪಟ್ಟಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ:

ಸೈಬೀರಿಯಾದಲ್ಲಿ ರಷ್ಯಾದ ಸೇನಾ ವಿಮಾನ ಪತನ; 17 ಪ್ರಯಾಣಿಕರು ಸಾವು

ತನಿಖೆ ಕೈಗೆತ್ತಿಕೊಂಡ ಎನ್​ಟಿಎಸ್​ಬಿ

ಈ ವಿಮಾನ ದುರಂತದ ಕುರಿತು ಅಮೆರಿಕದ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ತನಿಖೆ ನಡೆಸಲಿವೆ. ಅಪಘಾತದ ತನಿಖೆಯ ನೇತೃತ್ವವನ್ನು ಎನ್​ಟಿಎಸ್​ಬಿ ವಹಿಸಲಿದೆ.

ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿತ್ತೇ? ಹವಾಮಾನ ವೈಪರೀತ್ಯ ಕಾರಣವೇ? ಅಥವಾ ಬೇರೆ ಯಾವುದಾದರೂ ಸಮಸ್ಯೆ ಎದುರಾಗಿತ್ತೇ ಎಂಬುದನ್ನು ತನಿಖೆಯ ನಂತರವೇ ತಿಳಿಯಬೇಕಿದೆ.

ಹಾರ್ನ್ ದ್ವೀಪದ ವಿಶೇಷತೆ ಏನು?

ಮಿಸ್ಸಿಸ್ಸಿಪ್ಪಿ ಕರಾವಳಿಯಲ್ಲಿರುವ ಹಾರ್ನ್ ದ್ವೀಪವು ಮೆಕ್ಸಿಕೊ ಕೊಲ್ಲಿಯಲ್ಲಿರುವ ನೈಸರ್ಗಿಕ ತಡೆಗೋಡೆ ದ್ವೀಪವಾಗಿದೆ. ಇದು ಗಲ್ಫ್ ಐಲ್ಯಾಂಡ್ಸ್ ನ್ಯಾಷನಲ್ ಸೀಶೋರ್ ಪ್ರದೇಶದ ಭಾಗವಾಗಿದೆ. ಇಲ್ಲಿ ಜನವಸತಿ ಕಡಿಮೆ ಇದ್ದು, ಖಾಸಗಿ ದೋಣಿಗಳ ಮೂಲಕವೇ ದ್ವೀಪವನ್ನು ತಲುಪಬಹುದು. ಈ ಕಾರಣದಿಂದ ಸಮುದ್ರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವುದು ಸವಾಲಿನ ಕೆಲಸವಾಗಿತ್ತು. ಈ ವಿಮಾನ ದುರಂತದ ನಿಖರ ಕಾರಣ ತಿಳಿಯಲು ತನಿಖೆ ಮುಂದುವರೆದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Wed, 25 November 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ