AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾವು, ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

ಅಮೆರಿಕದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ನಿರ್ಲಕ್ಷ್ಯದ ಚಾಲನೆಯಿಂದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ದುರ್ಮರಣಕ್ಕೀಡಾಗಿದ್ದರು. ಈ ಪ್ರಕರಣದಲ್ಲಿ ಜಾಹ್ನವಿ ಕುಟುಂಬಕ್ಕೆ 262 ಕೋಟಿ ರೂ. ದಾಖಲೆ ಮೊತ್ತದ ಪರಿಹಾರ ನೀಡಲಾಗುತ್ತಿದೆ. ಇದು ಅಮೆರಿಕ ಇತಿಹಾಸದಲ್ಲಿ ಪೊಲೀಸರ ನಿರ್ಲಕ್ಷ್ಯಕ್ಕೆ ನೀಡಿದ ಅತಿ ದೊಡ್ಡ ಪರಿಹಾರಗಳಲ್ಲಿ ಒಂದಾಗಿದ್ದು, ಈ ಆರ್ಥಿಕ ಇತ್ಯರ್ಥವು ಕುಟುಂಬಕ್ಕೆ ಒಂದಿಷ್ಟು ಸಾಂತ್ವನ ನೀಡುವ ನಿರೀಕ್ಷೆಯಿದೆ.

ಅಮೆರಿಕ: ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾವು, ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ
ಜಾಹ್ನವಿImage Credit source: NDTV
ನಯನಾ ರಾಜೀವ್
|

Updated on:Feb 12, 2026 | 2:53 PM

Share

ವಾಷಿಂಗ್ಟನ್, ಫೆಬ್ರವರಿ 12: ಅಮೆರಿಕದಲ್ಲಿ ನಡೆದ ಅಪಘಾತ(Accident)ದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು.

ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಈ ಘಟನೆ ಜನವರಿ 2023 ರಲ್ಲಿ ನಡೆದಿತ್ತು. ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಮಾದಕವಸ್ತು ಸೇವನೆ ಮಾಡಿ, ಫೋನ್​​ ಅಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದರು.

ಅವರು 25 mph ವೇಗದಲ್ಲಿ ಚಾಲನೆ ಮಾಡುವ ಪ್ರದೇಶದಲ್ಲಿ 74 mph (119 kph) ವೇಗದಲ್ಲಿ ಚಾಲನೆ ಮಾಡುತ್ತಿದ್ದರು. ನಂತರ ಅಧಿಕಾರಿಗೆ ಅಜಾಗರೂಕ ಚಾಲನೆಗಾಗಿ 5,000 ಡಾಲರ್ ದಂಡ ವಿಧಿಸಲಾಯಿತು. ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಯಿತು. ಆದಾಗ್ಯೂ, ಕಿಂಗ್ ಕೌಂಟಿ ಪ್ರಾಸಿಕ್ಯೂಟರ್‌ಗಳು ಅಧಿಕಾರಿ ಉದ್ದೇಶಪೂರ್ವಕವಾಗಿ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದಾರೆಂದು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಅವರ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಿಲ್ಲ.

ಮತ್ತಷ್ಟು ಓದಿ: ನೈಜೀರಿಯಾ: ಕಾನೋದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಪಘಾತ, 30 ಮಂದಿ ಸಾವು

ಮತ್ತೊಬ್ಬರ ಬಾಡಿ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದ ದೃಶ್ಯಗಳು ಬೆಳಕಿಗೆ ಬಂದಾಗ ವಿಷಯ ತುಂಬಾ ಗಂಭೀರವಾಯಿತು. ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯದಲ್ಲಿ ಇತ್ಯರ್ಥ ಅರ್ಜಿ ಸಲ್ಲಿಸಲಾಗಿದೆ. ಕುಟುಂಬದ ವಕೀಲರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಗರ ಅಟಾರ್ನಿ ಎರಿಕಾ ಇವಾನ್ಸ್ ಮಾತನಾಡಿ, ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಇತ್ಯರ್ಥವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಸಾಂತ್ವನ ನೀಡುತ್ತದೆ ಎಂದು ನಂಬಿದ್ದೇವೆಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:53 pm, Thu, 12 February 26

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು