AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧ-ಸಂಘರ್ಷದಿಂದ ದೂರ, ವ್ಯವಹಾರದಲ್ಲಿ ಚತುರ: ಪ್ರಧಾನಿ ಮೋದಿ ಶ್ರೇಷ್ಠ ನಾಯಕನೆಂದು ಹೊಗಳಿದ ಡೊನಾಲ್ಡ್ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆಗಿನ ಒಡನಾಟ ಮತ್ತು ಅಂತರರಾಷ್ಟ್ರೀಯ ಸಂಬಂಧಗಳ ನಿರ್ವಹಣೆ ವಿಚಾರವಾಗಿ ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿರುವ ಹೊತ್ತಿನಲ್ಲೇ, ಜಾಗತಿಕ ವೇದಿಕೆಯಲ್ಲೇ ಭಾರತದ ಪ್ರಧಾನಿ ಕುರಿತು ಮೆಚ್ಚುಗೆಯ ಮಾತುಗಳು ವ್ಯಕ್ತವಾಗಿವೆ. ಮೋದಿ ಜಗತ್ತಿನ ಅತ್ಯಂತ ಕಠಿಣ ನಿರ್ಧಾರಗಳ ನಾಯಕ ಎಂಬ ಶ್ಲಾಘನೆ ವ್ಯಕ್ತವಾಗಿದೆ. ಅದೂ ಸಹ ಟ್ರಂಪ್ ಕಡೆಯಿಂದಲೇ!

ಯುದ್ಧ-ಸಂಘರ್ಷದಿಂದ ದೂರ, ವ್ಯವಹಾರದಲ್ಲಿ ಚತುರ: ಪ್ರಧಾನಿ ಮೋದಿ ಶ್ರೇಷ್ಠ ನಾಯಕನೆಂದು ಹೊಗಳಿದ ಡೊನಾಲ್ಡ್ ಟ್ರಂಪ್
ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರಂಪ್Image Credit source: PTI
ಗಣಪತಿ ಶರ್ಮಾ
|

Updated on: Jun 20, 2026 | 10:36 AM

Share

ನವದೆಹಲಿ, ಜೂನ್ 20: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಜಗತ್ತಿನ ಅತ್ಯಂತ ಶ್ರೇಷ್ಠ ನಾಯಕರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ. ‘ದಿ ಆಕ್ಸಿಯೋಸ್ ಶೋ’ ಕಾರ್ಯಕ್ರಮದಲ್ಲಿ ಪ್ರಪಂಚದ ಶಕ್ತಿಶಾಲಿ ಮತ್ತು ಅತ್ಯುತ್ತಮ ನಾಯಕರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಪ್ರಧಾನಿ ಮೋದಿ ಅವರನ್ನು ವಿಭಿನ್ನ ಹಾಗೂ ಅತ್ಯಂತ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಲ್ಲ ಧೀರ ನಾಯಕ (Tough Cookie) ಎಂದು ಕರೆದಿದ್ದಾರೆ. ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಸಂಪೂರ್ಣ ವ್ಯವಹಾರಿಕ ನಾಯಕ ಎಂದಿದ್ದಾರೆ. ಜಾಗತಿಕ ವಹಿವಾಟಿನಲ್ಲಿ, ಅದರಲ್ಲಿಯೂ ಅಮೆರಿಕದೊಂದಿಗಿನ ವ್ಯವಹಾರದಲ್ಲಿ ಈ ಹಿಂದೆ ಭಾರತಕ್ಕೇ ಹೆಚ್ಚು ಪ್ರಯೋಜನವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

ಮುಖ್ಯಾಂಶಗಳು

  • ಮೋದಿ ಅತ್ಯಂತ ಕಠಿಣ ನಿರ್ಧಾರಗಳ ನಾಯಕ.
  • ಯುದ್ಧದಿಂದ ದೂರವಿರುವುದು ಭಾರತದ ಜಾಣ್ಮೆ.
  • ಅಮೆರಿಕದ ಜತೆಗಿನ ವ್ಯವಹಾರದಲ್ಲಿ ಭಾರತಕ್ಕೇ ಹೆಚ್ಚು ಲಾಭವಾಗ್ತಿತ್ತೆಂದ ಟ್ರಂಪ್.

ಭಾರತದಲ್ಲಿ ಪ್ರತಿಪಕ್ಷಗಳು ‘ಟ್ರಂಪ್ ತಾಳಕ್ಕೆ ತಕ್ಕಂತೆ ಮೋದಿ ಕುಣಿಯುತ್ತಾರೆ’ ಎಂಬ ಆರೋಪಗಳನ್ನು ಮಾಡುತ್ತಿರುವ ಹೊತ್ತಿನಲ್ಲೇ, ಅಮೆರಿಕ ಅಧ್ಯಕ್ಷರೇ ಮೋದಿ ಕಠಿಣ ನಾಯಕ ಎಂದಿದ್ದಾರೆ. ಅಲ್ಲದೆ, ಉಭಯ ದೇಶಗಳ ನಡುವಣ ಈವರೆಗಿನ ವ್ಯವಹಾರದಲ್ಲಿ ಭಾರತಕ್ಕೇ ಹೆಚ್ಚು ಪ್ರಯೋಜನವಾಗಿದೆ ಎಂದಿರುವುದು ಅಚ್ಚರಿ ಮೂಡಿಸಿದೆ.

ಮೋದಿ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

‘ಮೋದಿ ಅತ್ಯಂತ ಸಮರ್ಥ ನಾಯಕ. ಭಾರತವು ಇಂದು 150 ಕೋಟಿ ಜನಸಂಖ್ಯೆ ಹೊಂದಿರುವ ವಿಶ್ವದ ಅತಿ ದೊಡ್ಡ ದೇಶವಾಗಿದೆ. ಇಷ್ಟು ದೊಡ್ಡ ದೇಶವನ್ನು ಮುನ್ನಡೆಸುತ್ತಿರುವ ಮೋದಿ ಅವರು ಜಾಗತಿಕ ಯುದ್ಧ ಮತ್ತು ಸಂಘರ್ಷಗಳಿಂದ ಭಾರತವನ್ನು ದೂರ ಇಟ್ಟಿದ್ದಾರೆ, ಇದು ಅತ್ಯಂತ ಜಾಣ್ಮೆಯ ನಿರ್ಧಾರ’ ಎಂದು ಟ್ರಂಪ್ ಹೇಳಿದ್ದಾರೆ.

ಮೋದಿ ಬಗ್ಗೆ ಟ್ರಂಪ್ ಮಾತಿನ ವಿಡಿಯೋ: ಅಮಿತ್ ಮಾಳವೀಯ ಎಕ್ಸ್ ಸಂದೇಶ

ಸಂದರ್ಶನದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಬಂಧಗಳ ಬಗ್ಗೆಯೂ ಮಾತನಾಡಿದ ಟ್ರಂಪ್, ‘ಇಂದು ನಾವು ಭಾರತದೊಂದಿಗೆ ನ್ಯಾಯೋಚಿತ ನಿಯಮಗಳ ಅಡಿಯಲ್ಲಿ ಬೃಹತ್ ಪ್ರಮಾಣದ ವ್ಯಾಪಾರ ವ್ಯವಹಾರಗಳನ್ನು ಮಾಡುತ್ತಿದ್ದೇವೆ. ಈ ಹಿಂದೆ ಅಮೆರಿಕದ ರಾಜಕಾರಣಿಗಳ ತಪ್ಪು ನಿರ್ಧಾರಗಳಿಂದಾಗಿ ಭಾರತವು ವ್ಯಾಪಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಿತ್ತು. ಈಗ ಮಾಡಿಕೊಂಡಿರುವ ಹೊಸ ನಿಯಮಾವಳಿಗಳು ಭಾರತಕ್ಕೆ ಮೊದಲಿನಷ್ಟು ಹೆಚ್ಚಿನ ಲಾಭ ತರದಿದ್ದರೂ, ಉಭಯ ದೇಶಗಳ ನಡುವಿನ ಉದ್ಯಮ ಅತ್ಯಂತ ಯಶಸ್ವಿಯಾಗಿ ಮುಂದುವರಿಯುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ಸಕಾರಾತ್ಮಕ ನೇತೃತ್ವವೇ ಕಾರಣ’ ಎಂದು ಹೇಳಿದ್ದಾರೆ.

ಮತ್ತೊಂದೆಡೆ, ವಿಶ್ವದ ಅತ್ಯಂತ ದುರ್ಬಲ ನಾಯಕರು ಯಾರು ಎಂಬ ಪ್ರಶ್ನೆಗೆ ಉತ್ತರಿಸಲು ಟ್ರಂಪ್ ನಿರಾಕರಿಸಿದ್ದಾರೆ. ಜಿ7 ಶೃಂಗಸಭೆಯಿಂದ ಹಿಂದಿರುಗಿದ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷರು ಈ ವಿಶೇಷ ಸಂದರ್ಶನ ನೀಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್