AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಮತ್ತು ಇರಾನ್ ನಡುವೆ ಉತ್ತಮ ಬಾಂಧವ್ಯವಿದೆ; ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

ಕಳೆದ ವಾರ, ಹಾರ್ಮುಜ್ ಜಲಸಂಧಿಯಿಂದ ನಿರ್ಗಮಿಸುತ್ತಿದ್ದ ಸರಕು ಸಾಗಣೆ ಹಡಗನ್ನು ಇರಾನ್ ಟಾರ್ಗೆಟ್ ಮಾಡಿದ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಾಗಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕವು ಇರಾನ್‌ನ ಕ್ಷಿಪಣಿ, ಡ್ರೋನ್ ಮತ್ತು ರಾಡಾರ್ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು, ಇದು ಟೆಹ್ರಾನ್ ಪ್ರತಿದಾಳಿ ನಡೆಸುವಂತೆ ಮಾಡಿತ್ತು. ಆದರೆ, ಈ ಎರಡು ಕಡೆಯ ಮಾತುಕತೆಯನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಅಮೆರಿಕ ಮತ್ತು ಇರಾನ್ ನಡುವೆ ಉತ್ತಮ ಬಾಂಧವ್ಯವಿದೆ; ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Jul 01, 2026 | 9:30 PM

Share

ನವದೆಹಲಿ, ಜುಲೈ 1: ಅಮೆರಿಕ ಮತ್ತು ಇರಾನ್ ದೇಶಗಳು ಅತ್ಯಂತ ಉತ್ತಮ ಬಾಂಧವ್ಯವನ್ನು ಹೊಂದಿವೆ ಮತ್ತು ಇತ್ತೀಚೆಗೆ ಕತಾರ್‌ನಲ್ಲಿ ನಡೆದ ರಾಜತಾಂತ್ರಿಕ ಸಭೆಗಳು ಆಶಾದಾಯಕ ಪ್ರಗತಿಯನ್ನು ತೋರಿಸಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ. ನಾರ್ತ್ ಡಕೋಟಾ ಪ್ರವಾಸಕ್ಕಾಗಿ ಕತಾರ್ ಒದಗಿಸಿದ ‘ಏರ್ ಫೋರ್ಸ್ ಒನ್’ ವಿಮಾನವನ್ನು ಏರುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ಜೊತೆಗಿನ ಮಾತುಕತೆಗಳು ಉತ್ತಮ ದಿಕ್ಕಿನಲ್ಲಿ ಸಾಗುತ್ತಿವೆ ಎಂದು ತಿಳಿಸಿದರು.

ಉಭಯ ದೇಶಗಳ ನಡುವೆ ಈ ಹಿಂದೆ ಉದ್ವಿಗ್ನತೆ ಇತ್ತಾದರೂ, ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸದಂತೆ ತಡೆಯುವುದರ ಮೇಲೆಯೇ ಪ್ರಸ್ತುತ ಪ್ರಯತ್ನಗಳು ಕೇಂದ್ರೀಕೃತವಾಗಿವೆ ಎಂದು ಅವರು ಹೇಳಿದರು. “ನಾವು ಅವರ ಮೇಲೆ ತೀವ್ರವಾದ ದಾಳಿ ನಡೆಸಿದ್ದೆವು. ಆದರೆ ಈಗ ನಾವು ತುಂಬಾ ಚೆನ್ನಾಗಿ ಒಟ್ಟಿಗೆ ಸಾಗುತ್ತಿದ್ದೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಟ್ರಂಪ್ ಅವರ ಪ್ರಕಾರ, ಇತ್ತೀಚೆಗೆ ಕತಾರ್‌ನಲ್ಲಿ ನಡೆದ ಚರ್ಚೆಗಳು ಯಶಸ್ವಿಯಾಗಿದ್ದು, ಉಭಯ ದೇಶಗಳು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಪರಸ್ಪರ ತಿಳುವಳಿಕೆಯನ್ನು ಸುಧಾರಿಸಲು ಮಾತುಕತೆಯಲ್ಲಿ ತೊಡಗಿವೆ. ಅಮೆರಿಕ ಆಡಳಿತವು ಇರಾನ್ ಜೊತೆಗಿನ ಸಂಬಂಧವನ್ನು ನಿರ್ವಹಿಸಲು ಪರೋಕ್ಷ ಮತ್ತು ತಾಂತ್ರಿಕ ಮಟ್ಟದ ಮಾತುಕತೆಗಳನ್ನು ಜಾಗತಿಕ ರಾಜತಾಂತ್ರಿಕ ಪ್ರಯತ್ನದ ಭಾಗವಾಗಿ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಟ್ರಂಪ್‌ಗೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್‌ನಲ್ಲಿ ನಿರ್ಣಯ ಅಂಗೀಕಾರ

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಈ ಪ್ರಸ್ತುತ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿದ್ದು, ಅಮೆರಿಕದೊಂದಿಗೆ ಶಾಂತಿ ಮಾತುಕತೆ ನಡೆಯುತ್ತಿಲ್ಲ ಎಂಬ ಇರಾನ್‌ನ ಸಾರ್ವಜನಿಕ ನಿರಾಕರಣೆಯನ್ನು ತಳ್ಳಿಹಾಕಿದ್ದಾರೆ. ಉಭಯ ದೇಶಗಳ ನಡುವೆ ತಾಂತ್ರಿಕ ಮಟ್ಟದ ಚರ್ಚೆಗಳು ಮುಂದುವರಿದಿವೆ ಎಂದು ಅವರು ಹೇಳಿದ್ದಾರೆ.

ಮತ್ತೊಂದು ಸಂದರ್ಶನದಲ್ಲಿ ಮಾತನಾಡಿದ ವ್ಯಾನ್ಸ್, “ಇರಾನಿಯನ್ನರು ಏನು ಹೇಳುತ್ತಾರೆಂಬುದರ ಬಗ್ಗೆ ನಮಗೆ ತಲೆಕೆಡಿಸಿಲ್ಲ. ಅವರು ಏನು ಮಾಡುತ್ತಾರೆ ಎಂಬುದು ನಮಗೆ ಮುಖ್ಯ,” ಎಂದು ಹೇಳಿದ್ದಾರೆ. ಮಾತುಕತೆಗಳು ವಿಫಲವಾದರೆ ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿಟ್ಟುಕೊಂಡು, ರಾಜತಾಂತ್ರಿಕ ಪ್ರಯತ್ನಗಳನ್ನು ಮುಂದುವರಿಸಲು ಟ್ರಂಪ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ