AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್, ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಸಭೆ ನಡೆಸಲು ಮುಂದಾದ ಟ್ರಂಪ್

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimir Putin) ಅವರೊಂದಿಗಿನ ಭೇಟಿ ಬಳಿಕ ಇದೀಗ ಆಗಸ್ಟ್​ 22ರಂದು ಪುಟಿನ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಮಾತುಕತೆ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಸಿದ್ಧರಾಗಿದ್ದಾರೆ. ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಉದ್ದೇಶದಿಂದ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಡುವೆ ಅಮೆರಿಕದ ಅಲಾಸ್ಕಾದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ಯಾವುದೇ ಸಕಾರಾತ್ಮಕ ಫಲಿತಾಂಶವಿಲ್ಲದೇ ಅಂತ್ಯವಾಗಿದೆ ಎಂದು ಹೇಳಲಾಗಿದೆ.

ಪುಟಿನ್, ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಸಭೆ ನಡೆಸಲು ಮುಂದಾದ ಟ್ರಂಪ್
ಪುಟಿನ್
ನಯನಾ ರಾಜೀವ್
|

Updated on: Aug 17, 2025 | 8:49 AM

Share

ವಾಷಿಂಗ್ಟನ್​, ಆಗಸ್ಟ್​ 17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimir Putin) ಅವರೊಂದಿಗಿನ ಭೇಟಿ ಬಳಿಕ ಇದೀಗ ಆಗಸ್ಟ್​ 22ರಂದು ಪುಟಿನ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಮಾತುಕತೆ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಸಿದ್ಧರಾಗಿದ್ದಾರೆ. ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಉದ್ದೇಶದಿಂದ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಡುವೆ ಅಮೆರಿಕದ ಅಲಾಸ್ಕಾದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ಯಾವುದೇ ಸಕಾರಾತ್ಮಕ ಫಲಿತಾಂಶವಿಲ್ಲದೇ ಅಂತ್ಯವಾಗಿದೆ ಎಂದು ಹೇಳಲಾಗಿದೆ.

ಶನಿವಾರ ಎಕ್ಸ್ ಪೋಸ್ಟ್‌ನಲ್ಲಿ ಝೆಲೆನ್ಸ್ಕಿ ಅವರು ಸೋಮವಾರ ವಾಷಿಂಗ್ಟನ್‌ನಲ್ಲಿ ಟ್ರಂಪ್ ಅವರನ್ನು ಭೇಟಿಯಾಗುವುದಾಗಿ ಹೇಳಿದ್ದಾರೆ. ಸೋಮವಾರದ ಶ್ವೇತಭವನದ ಸಭೆಯಲ್ಲಿ ಭಾಗವಹಿಸಲು ಟ್ರಂಪ್ ಯುರೋಪಿಯನ್ ನಾಯಕರನ್ನು ಆಹ್ವಾನಿಸಿದ್ದಾರೆ ಎಂದು ಅಮೆರಿಕದ ಆನ್‌ಲೈನ್ ಮಾಧ್ಯಮ ಸಂಸ್ಥೆ ಆಕ್ಸಿಯೋಸ್ ವರದಿ ಮಾಡಿದೆ.

1945ರ ನಂತರದ ಯುರೋಪಿನ ಅತಿದೊಡ್ಡ ಭೂ ಯುದ್ಧವಾದ ರಷ್ಯಾ ಮತ್ತು ಉಕ್ರೇನ್ ನಡುವಿನ ಕ್ರೂರ ಸಂಘರ್ಷವನ್ನು ಕೊನೆಗೊಳಿಸಲು ಅಥವಾ ವಿರಾಮಗೊಳಿಸಲು ಸೇರಿದ್ದ ಅಲಸ್ಕಾ ಶೃಂಗಸಭೆ ಯಾವುದೇ ಒಪ್ಪಂದವಿಲ್ಲದೆ ಅಂತ್ಯಗೊಂಡಿದೆ.

ಸುಮಾರು ಮೂರು ಗಂಟೆಗಳ ಸುದೀರ್ಘ ಸಮಾಲೋಚನೆ ನಡೆದಿದ್ದು, ಮಾತುಕತೆ ಬಳಿಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ವ್ಲಾಡಿಮಿರ್ ಪುಟಿನ್ ಮಾತನಾಡಿ ಮಾತುಕತೆಯಲ್ಲಿ ಮಹತ್ವದ ಪ್ರಗತಿ ಕಂಡು ಬಂದಿದೆ ಎಂದು ಘೋಷಣೆ ಮಾಡಿದರು.

ಮತ್ತಷ್ಟು ಓದಿ: ಟ್ರಂಪ್ ಇಬ್ಬಗೆ ನೀತಿಯ ಬಣ್ಣ ಬಯಲು! ರಷ್ಯಾ ಜತೆ ಅಮೆರಿಕದ ವಹಿವಾಟು ಭಾರೀ ಹೆಚ್ಚಳ

ಸೋಮವಾರ ಝೆಲೆನ್ಸ್ಕಿ ಮತ್ತು ಟ್ರಂಪ್ ನಡುವಿನ ಸಭೆಯ ನಂತರ ತ್ರಿಪಕ್ಷೀಯ ಸಭೆ ನಡೆಯುವ ನಿರೀಕ್ಷೆಯಿದೆ ಎಂದು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಹೇಳಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆಗಸ್ಟ್ 15 ರಂದು, ಪುಟಿನ್ ಮತ್ತು ಟ್ರಂಪ್ ಅಲಾಸ್ಕಾದ ಎಲ್ಮೆಂಡಾರ್ಫ್-ರಿಚರ್ಡ್ಸನ್ ಮಿಲಿಟರಿ ನೆಲೆಯಲ್ಲಿ ಭೇಟಿಯಾದರು. ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು. ಟ್ರಂಪ್ ಮತ್ತು ಝೆಲೆನ್ಸ್ಕಿ ಸೋಮವಾರ ಶ್ವೇತಭವನದಲ್ಲಿ ಸಭೆ ನಡೆಸಲಿದ್ದಾರೆ.

ಝೆಲೆನ್ಸ್ಕಿ ಜೊತೆಗಿನ ಮಾತುಕತೆ ಯಶಸ್ವಿಯಾದರೆ, ಪುಟಿನ್ ಜೊತೆ ಮತ್ತೊಂದು ಸಭೆಯನ್ನು ನಿಗದಿಪಡಿಸಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ. ಇನ್ನು ಇದೇ ವೇಳೆ ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಬಗ್ಗೆ ಪುಟಿನ್ ಮತ್ತು ತಮ್ಮ ನಡುವೆ ಯಾವುದೇ ಒಪ್ಪಂದವಾಗಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಝೆಲೆನ್ಸ್ಕಿ ಮತ್ತು ನ್ಯಾಟೋ ನಾಯಕರ ಸಭೆ ಕರೆಯುವುದಾಗಿ ಹೇಳಿದರು. ಜತೆಗೆ ಇಬ್ಬರೂ ನಾಯಕರು ಪರಸ್ಪರ ಹೊಗಳುತ್ತಾ ಹಲವು ಇತರೆ ಒಪ್ಪಂದಗಳು ಆಗಿವೆ ಎಂದರು.

ಕೇವಲ ಭಾರತ-ಪಾಕಿಸ್ತಾವಲ್ಲದೇ, ಟ್ರಂಪ್​ ಆ ಸಂದರ್ಶನದಲ್ಲಿ ಕಾಂಗೋ ಮತ್ತು ರುವಾಂಡಾ, ಥಾಯ್ಲೆಂಡ್​ ಮತ್ತು ಕಾಂಬೋಡಿಯಾ, ಹಾಗೂ ಅರ್ಮೇನಿಯಾ ಮತ್ತು ಅಜರ್‌ಬೈಜಾನ್ ಸೇರಿದಂತೆ ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ತಾನು ಪರಿಹರಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಕಳೆದ ವಾರ ಟ್ರಂಪ್ ಭಾರತದ ಮೇಲೆ ಶೇ 50ರಷ್ಟು ಸುಂಕವನ್ನು ವಿಧಿಸಿದ್ದರು. ಇದರಲ್ಲಿ, ಭಾರತ ರಷ್ಯಾದಿಂದ ಖರೀದಿಸುತ್ತಿದ್ದ ತೈಲದ ಮೇಲೂ ಶೇ 25ರಷ್ಟು ಸುಂಕ ಸೇರಿದೆ. ಹೆಚ್ಚುವರಿ ಸುಂಕಗಳು ಆಗಸ್ಟ್ 27 ರಿಂದ ಜಾರಿಗೆ ಬರಲಿವೆ.ಟ್ರಂಪ್​ ಅವರ ಈ ನಿರ್ಧಾರಗಳಿಗೆ ಭಾರತದ ವಿದೇಶಾಂಗ ಸಚಿವಾಲಯವು ಭಾರತದ ಮೇಲೆ ಗುರಿ ಇಡುವುದು ಅಸಮರ್ಥನೀಯ ಮತ್ತು ಅಸಮಂಜಸವಾಗಿದೆ ಎಂದು ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು