AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

US Election Result: ಚುನಾವಣಾ ಗೆಲುವಿನ ಬಳಿಕ ಮೊದಲ ಭಾಷಣದಲ್ಲಿ ಡೊನಾಲ್ಡ್​ ಟ್ರಂಪ್ ಹೇಳಿದ್ದೇನು?

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಗೆಲುವಿನ ಹಿನ್ನೆಲೆಯಲ್ಲಿ ಟ್ರಂಪ್​ ಮೊದಲ ಭಾಷಣ ಮಾಡಿದ್ದಾರೆ. ದೇಶವನ್ನು ಸುಭದ್ರಗೊಳಿಸಲು ಬೇಕಾದ ಎಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದರು. ಮೇಕ್ ಅಮೆರಿಕ ಗ್ರೇಟ್ ಅಗೇನ್ ಎಂಬ ಘೋಷಣೆಯನ್ನು ಪುನರುಚ್ಚರಿಸಿದ ಡೊನಾಲ್ಡ್ ಟ್ರಂಪ್, ನಾನು ಪ್ರತಿ ಕ್ಷಣವೂ ಅಮೆರಿಕಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.

ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Nov 06, 2024 | 2:04 PM

Share

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಗೆಲುವಿನ ಹಿನ್ನೆಲೆಯಲ್ಲಿ ಟ್ರಂಪ್​ ಮೊದಲ ಭಾಷಣ ಮಾಡಿದ್ದಾರೆ. ದೇಶವನ್ನು ಸುಭದ್ರಗೊಳಿಸಲು ಬೇಕಾದ ಎಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದರು. ಮೇಕ್ ಅಮೆರಿಕ ಗ್ರೇಟ್ ಅಗೇನ್ ಎಂಬ ಘೋಷಣೆಯನ್ನು ಪುನರುಚ್ಚರಿಸಿದ ಡೊನಾಲ್ಡ್ ಟ್ರಂಪ್, ನಾನು ಪ್ರತಿ ಕ್ಷಣವೂ ಅಮೆರಿಕಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.

ಇದು ನನ್ನ ಜೀವನದ ಅತ್ಯಂತ ಮಹತ್ವದ ಕ್ಷಣವಾಗಿದ್ದು, ನನ್ನ ಸರ್ವಸ್ವವನ್ನು ಅಮೆರಿಕಕ್ಕೆ ಸಮರ್ಪಿಸಲಾಗಿದೆ ಎಂದರು. ನಾನು ಪ್ರತಿಯೊಬ್ಬ ನಾಗರಿಕರಿಗಾಗಿ, ನಿಮಗಾಗಿ, ನಿಮ್ಮ ಕುಟುಂಬಕ್ಕಾಗಿ ಮತ್ತು ನಿಮ್ಮ ಭವಿಷ್ಯಕ್ಕಾಗಿ ಹೋರಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. ಪ್ರತಿದಿನ, ನನ್ನ ದೇಹದ ಪ್ರತಿ ಉಸಿರಿನೊಂದಿಗೆ ನಾನು ನಿಮಗಾಗಿ ಹೋರಾಡುತ್ತೇನೆ. ನಾವು ನಮ್ಮ ಮಕ್ಕಳಿಗೆ ನೀವು ಅರ್ಹವಾದ ಬಲವಾದ, ಸುರಕ್ಷಿತ ಮತ್ತು ಸಮೃದ್ಧ ಅಮೆರಿಕವನ್ನು ನೀಡುವವರೆಗೂ ನಾನು ವಿಶ್ರಮಿಸುವುದಿಲ್ಲ.

ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ತಮ್ಮ ಭಾಷಣದಲ್ಲಿ ಉದ್ಯಮಿ ಎಲಾನ್ ಮಸ್ಕ್ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ತಮ್ಮ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದಾರೆ. ಎಲಾನ್ ಮಸ್ಕ್ ಅವರು ಚುನಾವಣೆಯಲ್ಲಿ ಟ್ರಂಪ್ ಅವರನ್ನು ಉತ್ಸಾಹದಿಂದ ಬೆಂಬಲಿಸಿದ್ದಾರೆ ಮತ್ತು ಹಣವನ್ನು ಸಹ ಒದಗಿಸಿದ್ದಾರೆ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರನ್ನು ಅಭಿನಂದಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತ ಡೊನಾಲ್ಡ್​ಟ್ರಂಪ್​ಗೆ ಹೃತ್ಪೂರ್ವಕ ಅಭಿನಂದನೆಗಳು, ಒಟ್ಟಾಗಿ, ನಮ್ಮ ಜನರ ಒಳಿತಿಗಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಕೆಲಸ ಮಾಡೋಣ ಎಂದು ಬರೆದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ