AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ರಾಜಕೀಯದಲ್ಲಿ ಸಂಚಲನ, ಟ್ರಂಪ್ ಮತ್ತು ಪಾಕ್ ಸೇನಾ ಮುಖ್ಯಸ್ಥರ ‘ದೋಸ್ತಿ’ ಮೇಲೆ ಅಮೆರಿಕ ಗುಪ್ತಚರ ಇಲಾಖೆ ಕಣ್ಣು

ಪಾಕಿಸ್ತಾನದ ಸೇನಾ ಮುಖ್ಯಸ್ಥ ಮುನೀರ್ ಅವರ ಇರಾನ್ ಭೇಟಿ ಅಮೆರಿಕದ ಭದ್ರತಾ ತಜ್ಞರಲ್ಲಿ ಆತಂಕ ಮೂಡಿಸಿದೆ. ಐಆರ್‌ಜಿಸಿ (IRGC) ಜೊತೆಗಿನ ಅವರ ಹಳೆಯ ಸಂಬಂಧಗಳು ಮತ್ತು ಟ್ರಂಪ್ ಆಡಳಿತಕ್ಕೆ ಸಂಭಾವ್ಯ ಸವಾಲುಗಳ ಕುರಿತು ಗುಪ್ತಚರ ಇಲಾಖೆ ನಿಗಾ ಇರಿಸಿದೆ. ಪಾಕಿಸ್ತಾನದ ಈ 'ದ್ವಂದ್ವ ನೀತಿ' ದಕ್ಷಿಣ ಏಷ್ಯಾ ಮತ್ತು ಜಾಗತಿಕ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ.

ಜಾಗತಿಕ ರಾಜಕೀಯದಲ್ಲಿ ಸಂಚಲನ, ಟ್ರಂಪ್ ಮತ್ತು ಪಾಕ್ ಸೇನಾ ಮುಖ್ಯಸ್ಥರ 'ದೋಸ್ತಿ' ಮೇಲೆ ಅಮೆರಿಕ ಗುಪ್ತಚರ ಇಲಾಖೆ ಕಣ್ಣು
ಡೊನಾಲ್ಡ್​ ಟ್ರಂಪ್, ಮುನೀರ್ Image Credit source: Moneycontrol.com
ನಯನಾ ರಾಜೀವ್
|

Updated on: Apr 19, 2026 | 7:53 AM

Share

ವಾಷಿಂಗ್ಟನ್, ಏಪ್ರಿಲ್ 19:ಅಮೆರಿಕ ಮತ್ತು ಇರಾನ್(Iran) ನಡುವಿನ ಸಂಘರ್ಷ ಉಲ್ಬಣಗೊಂಡ ನಂತರ ಟೆಹ್ರಾನ್‌ಗೆ ಭೇಟಿ ನೀಡಿದ ಮೊದಲ ವಿದೇಶಿ ನಾಯಕ ಎಂಬ ಹೆಗ್ಗಳಿಕೆಗೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಪಾತ್ರರಾಗಿದ್ದಾರೆ. ಆದರೆ, ಈ ಭೇಟಿಯು ಶಾಂತಿಗಾಗಿ ನಡೆದ ಪ್ರಯತ್ನವೋ ಅಥವಾ ಅಮೆರಿಕಕ್ಕೆ ನೀಡುತ್ತಿರುವ ಎಚ್ಚರಿಕೆಯೋ ಎಂಬ ಚರ್ಚೆ ಈಗ ಶುರುವಾಗಿದೆ. ಫಾಕ್ಸ್ ನ್ಯೂಸ್ ವರದಿಯ ಪ್ರಕಾರ, ಮುನೀರ್ ಅವರು ಕೇವಲ ರಾಜತಾಂತ್ರಿಕ ಅಧಿಕಾರಿಯಲ್ಲ. ಅವರು 2016-17ರಲ್ಲಿ ಪಾಕಿಸ್ತಾನದ ಮಿಲಿಟರಿ ಗುಪ್ತಚರ ಮುಖ್ಯಸ್ಥರಾಗಿದ್ದ ಕಾಲದಿಂದಲೂ ಇರಾನ್‌ನ ಅತ್ಯಂತ ಪ್ರಭಾವಶಾಲಿ ‘ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್’ (IRGC) ನೊಂದಿಗೆ ಆಳವಾದ ಸಂಬಂಧ ಹೊಂದಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ದಾಳಿಯಲ್ಲಿ ಕೊಲ್ಲಲ್ಪಟ್ಟ ಇರಾನ್‌ನ ಪ್ರಮುಖ ಕಮಾಂಡರ್‌ಗಳಾದ ಖಾಸಿಮ್ ಸೊಲೈಮಾನಿ ಮತ್ತು ಹೊಸೈನ್ ಸಲಾಮಿ ಅವರೊಂದಿಗೆ ಮುನೀರ್ ವೈಯಕ್ತಿಕ ಸ್ನೇಹ ಹೊಂದಿದ್ದರು ಎಂಬುದು ಈಗ ಬಯಲಾಗಿದೆ. ಮುನೀರ್ ಅವರ ಈ ಹಿನ್ನೆಲೆಯು ಅಮೆರಿಕದ ಭದ್ರತಾ ತಜ್ಞರಲ್ಲಿ ಆತಂಕ ಮೂಡಿಸಿದೆ. ‘ಫೌಂಡೇಶನ್ ಫಾರ್ ಡಿಫೆನ್ಸ್ ಆಫ್ ಡೆಮಾಕ್ರಸೀಸ್’ನ ಬಿಲ್ ರೊಗ್ಗಿಯೊ ಅವರು ಟ್ರಂಪ್ ಆಡಳಿತಕ್ಕೆ ಕಠಿಣ ಸಂದೇಶ ನೀಡಿದ್ದಾರೆ:

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನವು ನಮ್ಮ ಮಿತ್ರನಂತೆ ನಟಿಸಿ ತಾಲಿಬಾನ್‌ಗೆ ಬೆಂಬಲ ನೀಡಿದ ವಿಶ್ವಾಸಘಾತುಕ ಇತಿಹಾಸ ಹೊಂದಿದೆ. ಈಗ ಐಆರ್‌ಜಿಸಿ (IRGC) ಜೊತೆ ಮುನೀರ್ ಹೊಂದಿರುವ ನಿಕಟ ಸಂಬಂಧಗಳು ಟ್ರಂಪ್ ಆಡಳಿತಕ್ಕೆ ಮುಂದೊಂದು ದಿನ ದೊಡ್ಡ ಹೊಡೆತ ನೀಡಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಿಂದಾಗಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ರಾಜಕೀಯ ವಿಶ್ಲೇಷಕ ರಜಾ ರೂಮಿ ಅವರ ಪ್ರಕಾರ, ಮುನೀರ್ ಅವರಂತಹ ವ್ಯಕ್ತಿಗಳ ಪ್ರಭಾವವು ಪಾಕಿಸ್ತಾನದ ನಾಗರಿಕ ಸರ್ಕಾರವನ್ನು ಮಿಲಿಟರಿ ಹೇಗೆ ಸಂಪೂರ್ಣವಾಗಿ ಮರೆಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸುತ್ತದೆ. ವಿದೇಶಾಂಗ ನೀತಿಯ ನಿರ್ಧಾರಗಳನ್ನು ಚುನಾಯಿತ ನಾಯಕರಿಗಿಂತ ಹೆಚ್ಚಾಗಿ ಸೇನಾ ಮುಖ್ಯಸ್ಥರೇ ತೆಗೆದುಕೊಳ್ಳುತ್ತಿರುವುದು ಪಾಕ್ ಪ್ರಜಾಪ್ರಭುತ್ವದ ಅಸಹಾಯಕತೆಯನ್ನು ತೋರಿಸುತ್ತಿದೆ.

ಶನಿವಾರವಷ್ಟೇ ಇರಾನ್‌ನ ಮೂರು ದಿನಗಳ ಭೇಟಿ ಮುಗಿಸಿದ ಮುನೀರ್, ಅಲ್ಲಿನ ಅಧ್ಯಕ್ಷರು ಮತ್ತು ಮಿಲಿಟರಿ ಮುಖ್ಯಸ್ಥರೊಂದಿಗೆ ಶಾಂತಿ ಒಪ್ಪಂದದ ಬಗ್ಗೆ ಚರ್ಚಿಸಿದ್ದಾರೆ. ಇದರ ಬೆನ್ನಲ್ಲೇ ಈ ವಾರ ಇಸ್ಲಾಮಾಬಾದ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಯುವ ನಿರೀಕ್ಷೆಯಿದೆ. ಈ ಮಾತುಕತೆಯಲ್ಲಿ ಮುನೀರ್ ಅವರೇ ‘ಸೂತ್ರಧಾರ’ನ ಪಾತ್ರ ವಹಿಸುತ್ತಿರುವುದು ಜಾಗತಿಕ ರಾಜಕೀಯದ ಕುತೂಹಲಕಾರಿ ಬೆಳವಣಿಗೆಯಾಗಿದೆ.

ಒಂದೆಡೆ ಟ್ರಂಪ್ ಅವರೊಂದಿಗೆ ಸ್ನೇಹ ಪ್ರದರ್ಶಿಸುತ್ತಲೇ, ಮತ್ತೊಂದೆಡೆ ಅಮೆರಿಕದ ಬದ್ಧ ವೈರಿ ಇರಾನ್‌ನ ಮಿಲಿಟರಿ ನಾಯಕರೊಂದಿಗೆ ‘ವೈಯಕ್ತಿಕ ಸಮೀಕರಣ’ ಹೊಂದಿರುವ ಆಸಿಮ್ ಮುನೀರ್ ಅವರ ನಡೆ ಅಮೆರಿಕದ ಭದ್ರತೆಗೆ ಸವಾಲಾಗಬಹುದು. ಪಾಕಿಸ್ತಾನದ ಈ ‘ದ್ವಂದ್ವ ನೀತಿ’ಯನ್ನು ಟ್ರಂಪ್ ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ದಕ್ಷಿಣ ಏಷ್ಯಾದ ಭವಿಷ್ಯ ನಿಂತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ