AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಕ್ಯಾಪಿಟಲ್ ದಾಳಿ ಪ್ರಕರಣ: 100ಕ್ಕೂ ಹೆಚ್ಚು ಜನರ ಬಂಧನ, 200 ಶಂಕಿತರ ಗುರುತು ಪತ್ತೆ

ಈಗಾಗಲೇ 200 ಶಂಕಿತರನ್ನು ಪತ್ತೆಹಚ್ಚಲಾಗಿದ್ದು, ಸದ್ಯದಲ್ಲೇ ಎಫ್​ಬಿಐ ಏಜೆಂಟ್​ರು ಅವರನ್ನು ಬಂಧಿಸಲಿದ್ದಾರೆ. ದಾಳಿಯಲ್ಲಿ ಪಾಲ್ಗೊಂಡವರನ್ನು ಕಂಡುಹಿಡಿಯಲು 1,40,000 ಸಲಹೆಗಳು ಸಲ್ಲಿಕೆಯಾಗಿವೆ ಎಂದು ನ್ಯಾಯಾಂಗ ಇಲಾಖೆ ತಿಳಿಸಿದೆ.

ಅಮೆರಿಕ ಕ್ಯಾಪಿಟಲ್ ದಾಳಿ ಪ್ರಕರಣ: 100ಕ್ಕೂ ಹೆಚ್ಚು ಜನರ ಬಂಧನ, 200 ಶಂಕಿತರ ಗುರುತು ಪತ್ತೆ
ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ನಡೆದ ಘರ್ಷಣೆ ದೃಶ್ಯ
guruganesh bhat
|

Updated on:Jan 15, 2021 | 3:09 PM

Share

ವಾಷಿಂಗ್ಟನ್: ಜನವರಿ 6 ರಂದು ನಡೆದ ಅಮೆರಿಕಾ ಕ್ಯಾಪಿಟಲ್ ಕಟ್ಟಡದ ಮೇಲಿನ ದಾಳಿಗೆ ಸಂಬಂಧಿಸಿ 100 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಎಫ್​ಬಿಐ ನಿರ್ದೇಶಕ ಕ್ರಿಸ್ಟೋಫರ್ ವ್ರೇ ತಿಳಿಸಿದ್ದಾರೆ. ಅಲ್ಲದೇ ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಅಧಿಕಾರ ಗ್ರಹಣ ನಡೆಯುವವರೆಗೂ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಸಂವಾದ, ಚರ್ಚೆಗಳ ಮೇಲೆ ನಿಗಾ ಇಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಮೆರಿಕ ಉಪಾಧ್ಯಕ್ಷ ಮೈಕ್ ಫೆನ್ಸ್ ಜತೆಗಿನ ಸಭೆಯ ನಂತರ ಪ್ರತಿಕ್ರಿಯಿಸಿದ ಕ್ರಿಸ್ಟೋಫರ್ ವ್ರೇ, ಕ್ಯಾಪಿಟಲ್ ಕಟ್ಟಡದ ದಾಳಿಯಲ್ಲಿ ಭಾಗವಹಿಸಿದ ಇನ್ನಷ್ಟು ಜನರ ಹುಡುಕಾಟ ಮುಂದುವರೆದಿದೆ. ಅಪರಾಧ ಹಿನ್ನೆಲೆಯ 100 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಕೃತ್ಯಕ್ಕೆ ಕೈಹಾಕುವವರಿಗೆ ಎಫ್​ಬಿಐ ನಡೆ ಎಚ್ಚರಿಕೆಯಾಗಲಿದೆ ಎಂದು ಅವರು ತಿಳಿಸಿದರು.

200 ಶಂಕಿತರ ಗುರುತು ಪತ್ತೆ ಈಗಾಗಲೇ 200 ಶಂಕಿತರನ್ನು ಪತ್ತೆ ಹಚ್ಚಲಾಗಿದ್ದು, ಸದ್ಯದಲ್ಲೇ ಎಫ್​ಬಿಐ ಏಜೆಂಟ್​ರು ಅವರನ್ನು ಬಂಧಿಸಲಿದ್ದಾರೆ. ದಾಳಿಯಲ್ಲಿ ಪಾಲ್ಗೊಂಡವರನ್ನು ಕಂಡುಹಿಡಿಯಲು ಈಗಾಗಲೇ 1,40,000 ಸಲಹೆಗಳು ಸಲ್ಲಿಕೆಯಾಗಿವೆ ಎಂದು ನ್ಯಾಯಾಂಗ ಇಲಾಖೆ ತಿಳಿಸಿದೆ. ದಾಳಿಗೆ ಸಂಬಂಧಿಸಿ 200 ಪ್ರಕರಣಗಳನ್ನು ದಾಖಲಿಸಿ ಚುರುಕು ಕಾರ್ಯಾಚರಣೆ ನಡೆಸುತ್ತಿರುವ ಎಫ್​ಬಿಐ ಕುರಿತು ಅಮೆರಿಕ ಉಪಾಧ್ಯಕ್ಷ ಮೈಕ್ ಫೆನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜೋ ಬೈಡೆನ್ ಅಧಿಕಾರ ಗ್ರಹಣ ನಡೆಸಲಿರುವ ಜನವರಿ 20 ರಂದೇ ಡೊನಾಲ್ಡ್ ಟ್ರಂಪ್ ಅಮೆರಿಕ ಸಂಸತ್​ನಲ್ಲಿ ವಿಚಾರಣೆ ಎದುರಿಸಲಿದ್ದಾರೆ.

ಡೊನಾಲ್ಡ್ ಟ್ರಂಪ್ ಪರ ಪ್ರತಿಭಟನೆ ವೇಳೆ ಹಿಂಸಾಚಾರ: ಮಹಿಳೆ ಸೇರಿ ನಾಲ್ವರು ಸಾವು

Published On - 2:39 pm, Fri, 15 January 21

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?