AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವೆನೆಜುವೆಲಾಗೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ

ಅಟ್ಲಾಂಟಿಕ್‌ ಸಾಗರದಲ್ಲಿ ರಷ್ಯಾದ ಧ್ವಜವಿದ್ದ ವೆನೆಜುವೆಲಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್ ಹಡಗನ್ನು ಅಮೆರಿಕ ವಶಪಡಿಸಿಕೊಂಡಿದೆ. ಇದರಿಂದಾಗಿ ರಷ್ಯಾದೊಂದಿಗೂ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ. ರಷ್ಯಾ ನೌಕಾಪಡೆಗಳನ್ನು ನಿಯೋಜಿಸುವ ಮೂಲಕ ಹಡಗನ್ನು ರಕ್ಷಿಸಲು ಪ್ರಯತ್ನಿಸಿದೆ ಎಂಬ ವರದಿಗಳ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಮತ್ತು ಯುಎಸ್ ಮಿಲಿಟರಿಯ ಜಂಟಿ ಪ್ರಯತ್ನವಾಗಿದೆ.

Video: ವೆನೆಜುವೆಲಾಗೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ
Us Seizes Russia Flagged Tanker
ಸುಷ್ಮಾ ಚಕ್ರೆ
|

Updated on: Jan 07, 2026 | 9:52 PM

Share

ವಾಷಿಂಗ್ಟನ್, ಜನವರಿ 7: ವೆನೆಜುವೆಲಾದ ಮೇಲೆ ದಾಳಿ ನಡೆಸಿ, ಅಲ್ಲಿನ ಅಧ್ಯಕ್ಷರನ್ನು ಸೆರೆಹಿಡಿದ ಬೆನ್ನಲ್ಲೇ ಅಮೆರಿಕ ಇದೀಗ ವೆನೆಜುವೆಲಾಗೆ (Venezuela) ಸೇರಿದ ರಷ್ಯಾದ ಧ್ವಜ ಹೊತ್ತ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿದೆ. ಅಟ್ಲಾಂಟಿಕ್ ಸಾಗರದಲ್ಲಿ ಸುಮಾರು 2 ವಾರಗಳ ಕಾಲ ಯುಎಸ್ ಕೋಸ್ಟ್ ಗಾರ್ಡ್ ಹಡಗನ್ನು ಹಿಂಬಾಲಿಸಿತು. ವೆನೆಜುವೆಲಾದ ತೈಲ ರಫ್ತಿನ ಮೇಲೆ ಅಮೆರಿಕದ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ತೈಲ ಖರೀದಿಸಲು ಈ ಹಡಗು ವೆನೆಜುವೆಲಾಗೆ ತೆರಳುತ್ತಿತ್ತು.

ಈ ಕಾರ್ಯಾಚರಣೆಯ ಸಮಯದಲ್ಲಿ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿತ್ತು. ಏಕೆಂದರೆ, ರಷ್ಯಾದ ಮಿಲಿಟರಿ ಹಡಗು ಮತ್ತು ಜಲಾಂತರ್ಗಾಮಿ ನೌಕೆ ಕೂಡ ಆ ಪ್ರದೇಶದಲ್ಲಿತ್ತು. ಆದರೆ, ರಷ್ಯಾ ಮತ್ತು ಅಮೆರಿಕ ದೇಶಗಳ ನಡುವೆ ಯಾವುದೇ ಮಿಲಿಟರಿ ಘರ್ಷಣೆ ಸಂಭವಿಸಿಲ್ಲ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ರಷ್ಯಾ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಅಮೆರಿಕ ವಶಪಡಿಸಿಕೊಂಡ ಹಡಗನ್ನು ಈ ಹಿಂದೆ ಬೆಲ್ಲಾ-1 ಎಂದು ಹೆಸರಿಸಲಾಗಿತ್ತು. ನಂತರ ಅದು ತನ್ನ ಹೆಸರನ್ನು ಮರಿನೆರಾ ಎಂದು ಬದಲಾಯಿಸಿಕೊಂಡಿತು. ಇದನ್ನು ರಷ್ಯಾದ ಧ್ವಜದ ಅಡಿಯಲ್ಲಿ ನೋಂದಾಯಿಸಲಾಗಿದೆ. ಈ ಹಿಂದೆ, ಈ ಹಡಗು ಕೆರಿಬಿಯನ್ ಸಮುದ್ರದಲ್ಲಿ ಅಮೆರಿಕದ ದಿಗ್ಬಂಧನವನ್ನು ತಪ್ಪಿಸಿತ್ತು. ಯುಎಸ್ ಕೋಸ್ಟ್ ಗಾರ್ಡ್ ಅದನ್ನು ತಡೆದು ತನಿಖೆ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ

ಐಸ್ಲ್ಯಾಂಡ್ ಬಳಿಯ ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ಹಡಗನ್ನು ಅಂತಿಮವಾಗಿ ತಡೆಹಿಡಿಯಲಾಯಿತು ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಅದು ಐಸ್ಲ್ಯಾಂಡ್ ಮತ್ತು ಬ್ರಿಟನ್ ನಡುವೆ ಪ್ರಯಾಣಿಸುತ್ತಿತ್ತು. ಸಂಪೂರ್ಣ ಕಾರ್ಯಾಚರಣೆಯನ್ನು ಯುಎಸ್ ಕೋಸ್ಟ್ ಗಾರ್ಡ್ ಮತ್ತು ಸೈನ್ಯ ಜಂಟಿಯಾಗಿ ನಡೆಸಿತು. ಯುಎಸ್ ಸೈನ್ಯದ ಯುರೋಪಿಯನ್ ಕಮಾಂಡ್ (EUCOM) ಸಾಮಾಜಿಕ ಮಾಧ್ಯಮದಲ್ಲಿ ಆ ತೈಲ ಟ್ಯಾಂಕರ್ ಹಡಗು ಯುಎಸ್ ನಿರ್ಬಂಧಗಳನ್ನು ಉಲ್ಲಂಘಿಸುತ್ತಿದೆ. ಇದೇ ಕಾರಣಕ್ಕೆ ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಘೋಷಿಸಿತು.

ವಶಪಡಿಸಿಕೊಂಡ ಹಡಗನ್ನು ಮುಂದೆ ಎಲ್ಲಿಗೆ ಕೊಂಡೊಯ್ಯಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ, ಆದರೆ, ಮೂಲಗಳು ಅದನ್ನು ಬ್ರಿಟಿಷ್ ಜಲಪ್ರದೇಶಕ್ಕೆ ಕಳುಹಿಸಬಹುದು ಎಂದು ಸೂಚಿಸುತ್ತವೆ. ಇದರ ಜೊತೆಗೆ ವೆನೆಜುವೆಲಾಗೆ ಸಂಬಂಧಿಸಿದ ಮತ್ತೊಂದು ಟ್ಯಾಂಕರ್ ಎಂ ಸೋಫಿಯಾವನ್ನು ಸಹ ಅಮೆರಿಕ ವಶಕ್ಕೆ ಪಡೆದುಕೊಂಡಿದೆ. ಈ ಹಡಗು ಪನಾಮ ಧ್ವಜದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು, ನಿರ್ಬಂಧಗಳ ಹೊರತಾಗಿಯೂ ವೆನೆಜುವೆಲಾದಿಂದ ಚೀನಾಕ್ಕೆ ತೈಲವನ್ನು ಸಾಗಿಸುತ್ತಿತ್ತು.

ಇದನ್ನೂ ಓದಿ: ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್​​ಗಿದೆ ಭಾರತದ ನಂಟು; ಇವರೂ ಕೂಡ ಸಾಯಿ ಬಾಬಾ ಭಕ್ತೆ!

ವೆನೆಜುವೆಲಾದ ಅಕ್ರಮ ಮತ್ತು ನಿರ್ಬಂಧಿತ ತೈಲ ಸಾಗಣೆಗಳ ವಿರುದ್ಧ ಅಮೆರಿಕದ ಕ್ರಮವು ವಿಶ್ವಾದ್ಯಂತ ಮುಂದುವರಿಯುತ್ತದೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಅಂತಹ ಹಡಗುಗಳು ಎಲ್ಲಿದ್ದರೂ ಅಮೆರಿಕ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ವಿರುದ್ಧ ಅಮೆರಿಕ ಇತ್ತೀಚೆಗೆ ಪ್ರಮುಖ ಕ್ರಮ ಕೈಗೊಂಡ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು