AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್‌ಗೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್‌ನಲ್ಲಿ ನಿರ್ಣಯ ಅಂಗೀಕಾರ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್ ವಿಚಾರದಲ್ಲಿ ರಾಜಕೀಯ ಹಿನ್ನಡೆಯಾಗಿದೆ. ಅಮೆರಿಕ ಸೆನೆಟ್, ಇರಾನ್ ವಿರುದ್ಧದ ಯುದ್ಧ ಮುಂದುವರಿಸದಂತೆ ತಡೆಯುವ ನಿರ್ಣಯವನ್ನು ಅಂಗೀಕರಿಸಿದೆ. ಸ್ವಪಕ್ಷೀಯರೇ ಟ್ರಂಪ್ ವಿರುದ್ಧ ಮತ ಚಲಾಯಿಸಿದ್ದು ವಿಶೇಷ. ಈ ನಿರ್ಣಯ ಕಾನೂನಾತ್ಮಕವಾಗಿ ಬಾಧ್ಯವಲ್ಲ, ಕೇವಲ ರಾಜಕೀಯ ಅಸಮಾಧಾನದ ಪ್ರದರ್ಶನವಷ್ಟೇ. ಈಗಾಗಲೇ ಏಪ್ರಿಲ್ 7ರಂದು ಕದನ ವಿರಾಮದೊಂದಿಗೆ ಇರಾನ್ ಯುದ್ಧ ಕೊನೆಗೊಂಡಿದೆ.

ಟ್ರಂಪ್‌ಗೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್‌ನಲ್ಲಿ ನಿರ್ಣಯ ಅಂಗೀಕಾರ
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: Jun 24, 2026 | 7:23 AM

Share

ವಾಷಿಂಗ್ಟನ್,ಜೂನ್ 24: ಇರಾನ್ ಜತೆಗಿನ ಯುದ್ಧದ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಆಡಳಿತಕ್ಕೆ ಭಾರಿ ರಾಜಕೀಯ ಹಿನ್ನಡೆಯಾಗಿದೆ. ಇರಾನ್ ವಿರುದ್ಧದ ಸಂಘರ್ಷವನ್ನು ಅಧ್ಯಕ್ಷರು ಮುಂದುವರೆಸದಂತೆ ತಡೆಯುವ ಪ್ರಮುಖ ನಿರ್ಣಯವೊಂದನ್ನು ಅಮೆರಿಕದ ಸಂಸತ್ತಿನ ಮೇಲ್ಮನೆಯಾದ ಸೆನೆಟ್ ಅಂಗೀಕರಿಸಿದೆ. ಟ್ರಂಪ್ ಅವರ ಪಕ್ಷವಾದ ರಿಪಬ್ಲಿಕನ್ ಪಕ್ಷವೇ ಸೆನೆಟ್​ನಲ್ಲಿ ಬಹುಮತ ಹೊಂದಿದ್ದರೂ, ಅವರದೇ ಪಕ್ಷದ ನಾಲ್ವರು ಶಾಸಕರು ಟ್ರಂಪ್ ವಿರುದ್ಧ ಮತ ಚಲಾಯಿಸಿರುವುದು ಈ ಆಘಾತಕ್ಕೆ ಕಾರಣವಾಗಿದೆ.

ಸೆನೆಟ್‌ನಲ್ಲಿ ಈ ನಿರ್ಣಯವು 50-48 ಮತಗಳ ಅಲ್ಪ ಅಂತರದಿಂದ ಅಂಗೀಕಾರಗೊಂಡಿದೆ. ಇದಕ್ಕೂ ಮುನ್ನ ಕೆಳಮನೆಯಾದ ‘ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್’ನಲ್ಲೂ ಇದು 215-208 ಮತಗಳಿಂದ ಪಾಸ್ ಆಗಿತ್ತು.

ಟ್ರಂಪ್ ವಿರುದ್ಧ ಮತ ಹಾಕಿದ ಸ್ವಪಕ್ಷೀಯರು ಯಾರು? ಸುಸಾನ್ ಕಾಲಿನ್ಸ್, ಲಿಸಾ ಮುರ್ಕೋವ್ಸ್ಕಿ, ಬಿಲ್ ಕ್ಯಾಸಿಡಿ ಮತ್ತು ರಾಂಡ್ ಪಾಲ್ ಎಂಬ ನಾಲ್ವರು ರಿಪಬ್ಲಿಕನ್ ಸೆನೆಟರ್‌ಗಳು ಅಧ್ಯಕ್ಷ ಟ್ರಂಪ್ ನಿಲುವಿನ ವಿರುದ್ಧವಾಗಿ ನಿರ್ಣಯದ ಪರ ಮತ ಚಲಾಯಿಸಿದರು. ಡೇವ್ ಮೆಕ್‌ಕಾರ್ಮಿಕ್ ಮತ್ತು ಮಿಚ್ ಮೆಕ್‌ಕಾನ್ನೆಲ್ ಎಂಬ ಇಬ್ಬರು ಪ್ರಮುಖ ರಿಪಬ್ಲಿಕನ್ ನಾಯಕರು ಸಭೆಗೆ ಗೈರಾಗಿದ್ದು ಬಂಡಾಯ ಬಣಕ್ಕೆ ಜಯ ತಂದುಕೊಟ್ಟಿತು. ಆದರೆ, ವಿರೋಧ ಪಕ್ಷವಾದ ಡೆಮಾಕ್ರಾಟ್‌ನ ಜಾನ್ ಫೆಟರ್‌ಮ್ಯಾನ್ ಮಾತ್ರ ಟ್ರಂಪ್ ಆಡಳಿತವನ್ನು ಬೆಂಬಲಿಸಿ ನಿರ್ಣಯದ ವಿರುದ್ಧ ಮತ ಹಾಕಿದ್ದು ವಿಶೇಷವಾಗಿತ್ತು.

ಇದರ ಅಸಲಿ ಅರ್ಥವೇನು? ಟ್ರಂಪ್ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ? ಈ ನಿರ್ಣಯ ಸೆನೆಟ್‌ನಲ್ಲಿ ಅಂಗೀಕಾರವಾಗಿದ್ದರೂ, ಪ್ರಸ್ತುತ ಪರಿಸ್ಥಿತಿಯಲ್ಲಿ ಇದು ಅಧ್ಯಕ್ಷ ಟ್ರಂಪ್‌ಗೆ ಕೇವಲ ರಾಜಕೀಯ ಮುಜುಗರ ತರಲಿದೆಯೇ ಹೊರತು ಕಾನೂನಾತ್ಮಕವಾಗಿ ಯುದ್ಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ.

ಮತ್ತಷ್ಟು ಓದಿ: ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್

ಅಮೆರಿಕದ ಸಂವಿಧಾನದ ಪ್ರಕಾರ, ಇಂತಹ ‘ಏಕಕಾಲಿಕ ನಿರ್ಣಯಗಳು’ ಅಧ್ಯಕ್ಷರ ಅಂತಿಮ ಅನುಮೋದನೆಗೆ ಹೋಗುವುದಿಲ್ಲ ಮತ್ತು ಇವುಗಳಿಗೆ ಕಡ್ಡಾಯ ಕಾನೂನಿನ ಬಲ ಇರುವುದಿಲ್ಲ. ಇದು ಕೇವಲ ಸರ್ಕಾರದ ನಿರ್ಧಾರದ ವಿರುದ್ಧ ಸಂಸತ್ತು ಹೊಂದಿರುವ ಅಸಮಾಧಾನದ ಪ್ರದರ್ಶನವಷ್ಟೇ ಆಗಿರುತ್ತದೆ.

ಅಮೆರಿಕ ಮತ್ತು ಇರಾನ್ ನಡುವೆ 3 ತಿಂಗಳಿಗೂ ಹೆಚ್ಚು ಕಾಲ ನಡೆದಿದ್ದ ಯುದ್ಧವು ಈಗಾಗಲೇ ಕಳೆದ ಏಪ್ರಿಲ್ 7 ರಂದೇ ಕದನ ವಿರಾಮದೊಂದಿಗೆ ಕೊನೆಗೊಂಡಿದೆ.

ಅಮೆರಿಕ-ಇರಾನ್ ಶಾಂತಿ ಒಪ್ಪಂದ ಮತ್ತು ಪರಮಾಣು ಕಿಡಿ ಇತ್ತೀಚೆಗಷ್ಟೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಡಿಜಿಟಲ್ ಮೂಲಕ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆದರೂ ಇರಾನ್‌ನ ಪರಮಾಣು ಕಾರ್ಯಕ್ರಮದ ವಿವಾದ ಇನ್ನೂ ಜೀವಂತವಾಗಿದೆ. ಇರಾನ್ ತನ್ನ ಪರಮಾಣು ಕೇಂದ್ರಗಳ ತಪಾಸಣೆಗೆ ಒಪ್ಪದಿದ್ದರೆ ಮಾತುಕತೆ ನಿಲ್ಲಿಸುವುದಾಗಿ ಟ್ರಂಪ್ ಎಚ್ಚರಿಸಿದ್ದಾರೆ. ಅಂತಾರಾಷ್ಟ್ರೀಯ ಪರಮಾಣು ಸಂಸ್ಥೆ (IAEA) ಪ್ರಕಾರ, ಇರಾನ್ ಬಳಿ ಬಾಂಬ್ ತಯಾರಿಸಲು ಬೇಕಾದ ಯುರೇನಿಯಂ ಇರುವುದು ಜಾಗತಿಕ ಆತಂಕಕ್ಕೆ ಕಾರಣವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ