ಭಾರತದ ಆಂತರಿಕ ವಿಷಯಗಳ ಬಗ್ಗೆ ಮತ್ತೆ ಮಾತಾಡಿದ ಅಮೆರಿಕ, ಕೇಜ್ರಿವಾಲ್ ಬಂಧನ, ಕಾಂಗ್ರೆಸ್​ ಖಾತೆ ಸ್ಥಗಿತ ಪ್ರಸ್ತಾಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದಾದ ಬಳಿಕವೂ ಭಾರತದ ಆಂತರಿಕ ವಿಚಾರದ ಬಗ್ಗೆ ಅಮೆರಿಕ(America) ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದೆ. ಮೊದಲಿಗೆ, ಅರವಿಂದ್ ಕೇಜ್ರಿವಾಲ್ ಬಂಧನ ಮತ್ತು ಈಗ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಅಮೆರಿಕ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಮ್ಯಾಥ್ಯೂ ಮಿಲ್ಲರ್
Follow us
|

Updated on: Mar 28, 2024 | 11:10 AM

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದಾದ ಬಳಿಕವೂ ಭಾರತದ ಆಂತರಿಕ ವಿಚಾರದ ಬಗ್ಗೆ ಅಮೆರಿಕ(America) ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದೆ. ಮೊದಲಿಗೆ, ಅರವಿಂದ್ ಕೇಜ್ರಿವಾಲ್ ಬಂಧನ ಮತ್ತು ಈಗ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಅಮೆರಿಕ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಅಮೆರಿಕದ ರಕ್ಷಣಾ ಇಲಾಖೆ ವಕ್ತಾರ ಮ್ಯಾಥ್ಯೂ ಬುಧವಾರ ತಮ್ಮ ನಿಲುವನ್ನು ಪುನರುಚ್ಚರಿಸಿ, ನ್ಯಾಯಸಮ್ಮತ, ಪಾರದರ್ಶಕ ಹಾಗೂ ಸಕಾಲಿಕ ಕಾನೂನು ಕ್ರಮಗಳನ್ನು ವಾಷಿಂಗ್ಟನ್ ಸ್ವಾಗತಿಸುತ್ತದೆ ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಸೇರಿದಂತೆ ಹಲವು ಕ್ರಮಗಳನ್ನು ನಾವು ನಿಕಟವಾಗಿ ಗಮನಿಸುತ್ತಿದ್ದೇವೆ ಎಂದು ಮಿಲ್ಲರ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಬಗ್ಗೆ ಕೇಳಿದ ಪ್ರಶ್ನೆಗೂ ಉತ್ತರಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸೌತ್ ಬ್ಲಾಕ್ ಕಚೇರಿಯಲ್ಲಿ ಸುಮಾರು 40 ನಿಮಿಷಗಳ ಕಾಲ ಸಭೆ ನಡೆದಿದ್ದು, ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಭಾರತದ ಕಾನೂನು ಪ್ರಕ್ರಿಯೆಗಳು ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿರುವ ಸ್ವತಂತ್ರ ನ್ಯಾಯಾಂಗವನ್ನು ಆಧರಿಸಿವೆ. ಅದರ ವಿರುದ್ಧ ಆರೋಪಗಳನ್ನು ಮಾಡುವುದು ಸೂಕ್ತವಲ್ಲ ಎಂದು ಸಚಿವಾಲಯ ಪ್ರತಿಪಾದಿಸಿದೆ.

ಮತ್ತಷ್ಟು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ; ಏಪ್ರಿಲ್ 3ರಂದು ಮುಂದಿನ ವಿಚಾರಣೆ

ಕೇಜ್ರಿವಾಲ್ ನ್ಯಾಯಯುತ ವಿಚಾರಣೆಗೆ ಅರ್ಹರು ಎಂದು ಜರ್ಮನಿಯ ವಿದೇಶಾಂಗ ಕಚೇರಿ ಒತ್ತಿ ಹೇಳಿದ ದಿನಗಳ ನಂತರ ಅಮೆರಿಕ ಹೇಳಿಕೆ ನೀಡಿದೆ. ಆಂತರಿಕ ವ್ಯವಹಾರಗಳಲ್ಲಿ ಬಲವಂತದ ಹಸ್ತಕ್ಷೇಪ ಎಂದು ಭಾರತ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ

ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ

ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ

ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...

ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ

Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ

Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ