AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ

West Asia conflict: ಅಮೆರಿಕ, ಇರಾನ್ ಸಂಧಾನ ಮುರಿದುಬಿದ್ದ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಬಿಕ್ಕಟ್ಟಿನ ತಲೆನೋವು ಸೃಷ್ಟಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಮುಕ್ತಗೊಳಿಸಲು ಇರಾನ್ ನಿರಾಕರಿಸಿದೆ. ಇದಕ್ಕೆ ಪ್ರತಿಯಾಗಿ ಅಮೆರಿಕವೂ ಜಲಸಂಧಿಗೆ ತಡೆ ಹಾಕಿದೆ. ಇದೇ ವೇಳೆ, ಅಮೆರಿಕ ಇರಾನ್ ನಡುವೆ ಸಂಧಾನ ಏರ್ಪಡಿಸಲು ಪ್ರಯತ್ನಿಸುವುದಾಗಿ ರಷ್ಯಾ ಆಫರ್ ಕೊಟ್ಟಿದೆ.

ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ
ಡೊನಾಲ್ಡ್ ಟ್ರಂಪ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 12, 2026 | 9:31 PM

Share

ನವದೆಹಲಿ, ಏಪ್ರಿಲ್ 12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಮುರಿದುಬಿದ್ದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ (Hormuz Strait) ಮೇಲೆ ಕಣ್ಣು ಇರಿಸಿದ್ದಾರೆ. ಈ ಜಲಸಂಧಿಯನ್ನು ಪೂರ್ಣವಾಗಿ ತಡೆಯುವಂತೆ ಅಮೆರಿಕದ ನೌಕಾಪಡೆಗೆ ತಿಳಿಸಿದ್ದೇನೆ. ಈ ಕ್ಷಣದಿಂದಲೇ ಹಾರ್ಮುಜ್ ಜಲಸಂಧಿಯಿಂದ ಯಾವುದೇ ಹಡಗು ಹೊರಹೋಗದಂತೆ, ಹಾಗೂ ಹೊರಗಿನಿಂದ ಯಾವ ಹಡಗೂ ಒಳಗೆ ಹೋಗದಂತೆ ತಡೆಯುವ ಪ್ರಕ್ರಿಯೆ ನಡೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ.

ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ಇರಾನ್ ಮತ್ತು ಅಮೆರಿಕ ನಡುವೆ ನಡೆದ ಸಂಧಾನ ಮುರಿದುಬೀಳಲು ಹಲವು ಕಾರಣಗಳನ್ನು ಪ್ರಸ್ತಾಪಿಸಲಾಗಿದೆ. ಇದರಲ್ಲಿ ಎರಡು ಪ್ರಮುಖವಾದುವೆಂದರೆ, ಪರಮಾಣ ಶಸ್ತ್ರಾಸ್ತ್ರ ತಯಾರಿಕೆಯನ್ನು ನಿಲ್ಲಿಸಲು ಇರಾನ್ ಒಪ್ಪದೇ ಇದ್ದದ್ದು ಒಂದು. ಹಾಗೆಯೇ, ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿ ಬಿಡಲೂ ಇರಾನ್ ಒಪ್ಪದಿದ್ದುದು ಇನ್ನೊಂದು ಕಾರಣ.

ಇದನ್ನೂ ಓದಿ: ಪಾಕಿಸ್ತಾನದ ಮಧ್ಯಸ್ತಿಕೆ ಇಲ್ಲದೇ ಇದ್ದಿದ್ದರೆ ಇಸ್ರೇಲ್​ಗೆ ತಕ್ಕ ಶಾಸ್ತಿಯಾಗುತ್ತಿತ್ತು: ಟರ್ಕಿ ಅಧ್ಯಕ್ಷ ಎರ್ಡೋಗನ್ ಗುಡುಗು

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಎಲ್ಲಾ ಹಡಗುಗಳಿಂದಲೂ ಸುಂಕ ವಸೂಲಿ ಮಾಡುವ ವ್ಯವಸ್ಥೆ ನಿರ್ಮಿಸಿದೆ. ಹಾರ್ಮುಜ್ ಜಲಸಂಧಿಯನ್ನು ದಾಟಬೇಕಾದರೆ ಇರಾನ್​ಗೆ ಟೋಲ್ ಕಟ್ಟಬೇಕು. ನಂತರ, ಇರಾನ್​ನ ನೌಕಾಸೇನೆಯ ಬೆಂಗಾವಲಿನಲ್ಲಿ ಆ ಹಡಗು ಹಾರ್ಮುಜ್ ಜಲಸಂಧಿ ದಾಟಲು ಅವಕಾಶ ಕೊಡಲಾಗುತ್ತದೆ. ಇಂಥದ್ದೊಂದು ವ್ಯವಸ್ಥೆಯನ್ನು ಇರಾನ್ ಮಾಡಿದೆ. ಈಗ ಅಮೆರಿಕದ ಸೇನೆಯಿಂದ ಹಾರ್ಮುಜ್ ಜಲಸಂಧಿಯನ್ನು ಹಿಡಿತಕ್ಕೆ ತರಲು ಹೊರಟಿದೆ. ಇದು ಇನ್ನಷ್ಟು ಭೀಕರ ಯುದ್ಧಕ್ಕೆ ಎಡೆ ಮಾಡಿಕೊಡಬಹುದು.

ಸಂಧಾನಕ್ಕೆ ಮಧ್ಯಸ್ತಿಕೆ ವಹಿಸಲು ರಷ್ಯಾ ಸಿದ್ಧ

ಇದೇ ವೇಳೆ, ಅಮೆರಿಕ ಮತ್ತು ಇರಾನ್ ಮಧ್ಯೆ ಒಂದು ರಾಜಿ ಏರ್ಪಡಿಸಲು ಮಧ್ಯಸ್ತಿಕೆ ವಹಿಸಲು ತಾನು ಸಿದ್ಧ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್​ಕಿಯನ್ ಅವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್-ಅಮೆರಿಕ ಸಂಧಾನಕ್ಕೆ ‘ಪರಮಾಣು’ ತಡೆ: ಇಸ್ಲಾಮಾಬಾದ್ ಮ್ಯಾರಥಾನ್ ಮಾತುಕತೆ ಹಳಿ ತಪ್ಪಿದ್ದೇಕೆ?

ಈ ಇಬ್ಬರು ನಾಯಕರು ಫೋನ್ ಮೂಲಕ ಮಾತನಾಡಿ, ಪ್ರಸಕ್ತ ವಿದ್ಯಮಾನಗಳನ್ನು ಚರ್ಚಿಸಿದ್ದಾರೆ. ಈ ಸಂಘರ್ಷ ಅಥವಾ ಬಿಕ್ಕಟ್ಟಿಗೆ ರಾಜಕೀಯವಾದ ಮತ್ತು ರಾಜತಾಂತ್ರಿಕವಾದ ಪರಿಹಾರಕ್ಕೆ ಪ್ರಯತ್ನಿಸಲು ತಾನು ಸಿದ್ಧ ಎಂದು ಈ ವೇಳೆ ಪುಟಿನ್ ಅವರು ಆಫರ್ ಮಾಡಿದರೆನ್ನಲಾಗಿದೆ.

ಇರಾನ್ ಮತ್ತು ಅಮೆರಿಕದ ನಡುವಿನ ಕದನವಿರಾಮ 15 ದಿನಗಳದ್ದಾಗಿದೆ. ಇನ್ನು 9-10 ದಿನಗಳು ಬಾಕಿ ಇವೆ. ಅಷ್ಟರೊಳಗೆ ರಾಜಿ ಏರ್ಪಟ್ಟರೆ ಯುದ್ಧ ನಿಲ್ಲಬಹುದು. ಇಲ್ಲದಿದ್ದರೆ ಇನ್ನೂ ಹೆಚ್ಚು ತೀವ್ರತೆಯಲ್ಲಿ ಸಮರ ಮುಂದುವರಿಯುವ ಸಾಧ್ಯತೆ ಇದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ