ಹಮಾಸ್ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಸೈನಿಕರಿಗೆ ಸಹಾಯ ಮಾಡಲು ಯುದ್ಧ ನೌಕೆ ಕಳುಹಿಸಿದ ಅಮೆರಿಕ
ಉಗ್ರಗಾಮಿ ಸಂಘಟನೆ ಹಮಾಸ್ ಶನಿವಾರ ಇಸ್ರೇಲ್ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಕೃತ್ಯವನ್ನು ಅಮೆರಿಕ ಹಾಗೂ ಭಾರತ ಖಂಡಿಸಿದೆ. ಇಸ್ರೇಲ್‌ಗೆ ತಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡುತ್ತೇವೆ ಎಂದು ಎರಡೂ ದೇಶಗಳು ಅಭಯ ನೀಡಿವೆ.
ಇಸ್ರೇಲ್, ಅಕ್ಟೋಬರ್ 09: ಉಗ್ರಗಾಮಿ ಸಂಘಟನೆ ಹಮಾಸ್ ಶನಿವಾರ ಇಸ್ರೇಲ್ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಕೃತ್ಯವನ್ನು ಅಮೆರಿಕ ಹಾಗೂ ಭಾರತ ಖಂಡಿಸಿದೆ. ಇಸ್ರೇಲ್‌ಗೆ ತಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡುತ್ತೇವೆ ಎಂದು ಎರಡೂ ದೇಶಗಳು ಅಭಯ ನೀಡಿವೆ.
ಅದರಂತೆ ಅಮೆರಿಕವು ಇಸ್ರೇಲ್ ಸೈನಿಕರಿಗೆ ಸಹಾಯವಾಗುವಂತೆ ಯುದ್ಧ ನೌಕೆಯನ್ನು ಕಳುಹಿಸಿದೆ, ಯುದ್ಧ ವಿಮಾನವನ್ನು ಕೂಡ ಕಳುಹಿಸಲು ತಯಾರಿ ನಡೆಸುತ್ತಿದೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಅದೇ ಸಮಯದಲ್ಲಿ, ಹಮಾಸ್ 100 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ತೆಗೆದುಕೊಂಡಿದೆ ಎಂದು ಹೇಳಿಕೊಂಡಿದೆ. ಹಮಾಸ್‌ನ ಈ ದಾಳಿಯ ನಂತರ ಹಲವು ದೇಶಗಳು ಇಸ್ರೇಲ್‌ಗೆ ಸಹಾಯ ಹಸ್ತ ಚಾಚಿವೆ.
ಇಸ್ರೇಲ್‌ಗೆ ಸಹಾಯ ಮಾಡಲು ಅಮೆರಿಕ ಘೋಷಿಸಿದೆ. ಮಾಹಿತಿಯ ಪ್ರಕಾರ, ಯುಎಸ್ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇದರ ನಂತರ ಅವರು ಮೆಡಿಟರೇನಿಯನ್ ಸಮುದ್ರಕ್ಕೆ ಯುದ್ಧ ಹಡಗುಗಳನ್ನು ಕಳುಹಿಸಿದೆ.
ಮತ್ತಷ್ಟು ಓದಿ: Israel War: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ: ಇಲ್ಲಿಯವರೆಗೆ 300ಕ್ಕೂ ಅಧಿಕ ಮಂದಿ ಸಾವು
ಹಮಾಸ್‌ನ ಈ ದಾಳಿಯಲ್ಲಿ ನಾಲ್ವರು ಅಮೆರಿಕನ್ ಪ್ರಜೆಗಳೂ ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಹಿಂದೆ ಹಮಾಸ್ ದಾಳಿಯ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಇಸ್ರೇಲ್ ಅನ್ನು ಬೆಂಬಲಿಸಿ ಹೇಳಿಕೆ ನೀಡಿದ್ದರು.
ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ ಮತ್ತು ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹಲವು ಸೈನಿಕರು ಮತ್ತು ಪೊಲೀಸರು ಸೇರಿದಂತೆ ಸಆವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 2,048ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಸ್ರೇಲ್ ಮೂಲದ ಮಾಧ್ಯಮ ವರದಿ ಮಾಡಿದೆ.
ಹಮಾಸ್ ರಾಕೆಟ್ ದಾಳಿ ಪ್ರಾರಂಭಿಸಿದ 24 ಗಂಟೆಗಳ ನಂತರ, ಗಾಜಾ ಗಡಿಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಐಡಿಎಫ್ ಎಲ್ಲಾ ಭಯೋತ್ಪಾದಕರನ್ನು ತಟಸ್ಥಗೊಳಿಸುವ ಪ್ರಯತ್ನ ನಡೆಯುತ್ತಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:46 am, Mon, 9 October 23