AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ನ ಕರಾವಳಿ ಮೇಲೆ ಬಾಂಬ್ ಹಾಕುತ್ತೇನೆ; ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್

ಹಾರ್ಮುಜ್ ಜಲಸಂಧಿಯನ್ನು ಸಂಚಾರ ಮುಕ್ತಗೊಳಿಸುವುದಾಗಿ ಪ್ರತಿಜ್ಞೆ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ದಾಳಿ ಮುಂದುವರೆಸುವುದಾಗಿ ಹೇಳಿದ್ದಾರೆ. ‘ಒಂದು ರೀತಿಯಲ್ಲಿ ಅಲ್ಲವಾದರೆ ಇನ್ನೊಂದು ರೀತಿಯಲ್ಲಿ ನಾವು ಹಾರ್ಮುಜ್ ಅನ್ನು ಮತ್ತೆ ತೆರೆಯುತ್ತೇವೆ. ಏನು ಮಾಡುತ್ತೇವೆಂದು ನೋಡುತ್ತಿರಿ’ ಎಂದು ಟ್ರಂಪ್ ಹೇಳಿದ್ದಾರೆ. ಹಾಗೇ, ಚೀನಾ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಮುಂತಾದ ದೇಶಗಳು ಹಾರ್ಮುಜ್ ಜಲಸಂಧಿಗೆ ಹಡಗುಗಳನ್ನು ಕಳುಹಿಸಬೇಕೆಂದು ಟ್ರಂಪ್ ಒತ್ತಾಯಿಸಿದ್ದಾರೆ. ಒಟ್ಟಾರೆ ಸದ್ಯಕ್ಕಂತೂ ಇರಾನ್-ಇಸ್ರೇಲ್-ಅಮೆರಿಕದ ನಡುವಿನ ಯುದ್ಧ ಮುಗಿಯುವ ಲಕ್ಷಣವಂತೂ ಕಾಣುತ್ತಿಲ್ಲ.

ಇರಾನ್​ನ ಕರಾವಳಿ ಮೇಲೆ ಬಾಂಬ್ ಹಾಕುತ್ತೇನೆ; ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್
Trump
ಸುಷ್ಮಾ ಚಕ್ರೆ
|

Updated on: Mar 14, 2026 | 10:33 PM

Share

ನವದೆಹಲಿ, ಮಾರ್ಚ್ 14: ಇರಾನ್‌ನೊಂದಿಗಿನ ಉದ್ವಿಗ್ನತೆ ಹಾರ್ಮುಜ್ ಜಲಸಂಧಿಯ ಮೇಲೆ ಕೂಡ ಪರಿಣಾಮ ಬೀರಬಹುದು. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಯಾವೆಲ್ಲ ರೀತಿಯಲ್ಲಿ ಸಾಧ್ಯವೋ ಆ ಎಲ್ಲ ಪ್ರಯತ್ನ ಮಾಡುತ್ತೇವೆ. ಕರಾವಳಿಯ ಮೇಲೆ ಬಾಂಬ್ ಹಾಕಲು ಕೂಡ ಅಮೆರಿಕ ಸಿದ್ಧವಿದೆ. ನಾವು ಏನು ಮಾಡುತ್ತೇವೆಂದು ನೋಡುತ್ತಿರಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಸಿದ್ದಾರೆ. ಈ ಬಗ್ಗೆ ಅವರು ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇರಾನ್‌ನ ಕರಾವಳಿಯ ಬಳಿ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುತ್ತವೆ. ಈ ಮಾರ್ಗಕ್ಕೆ ಬೆದರಿಕೆ ಹಾಕುವ ಯಾವುದೇ ಇರಾನಿನ ದೋಣಿಗಳು ಅಥವಾ ಹಡಗುಗಳನ್ನು ಉರುಳಿಸುತ್ತವೆ ಎಂದಿರುವ ಟ್ರಂಪ್, “ನಾವು ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತ ಮತ್ತು ಮುಕ್ತಗೊಳಿಸುತ್ತೇವೆ” ಎಂದು ಶಪಥ ಮಾಡಿದ್ದಾರೆ.

ಇದನ್ನೂ ಓದಿ: ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ಚೀನಾ, ಫ್ರಾನ್ಸ್, ಜಪಾನ್, ದಕ್ಷಿಣ ಕೊರಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ (ಇಂಗ್ಲೆಂಡ್) ಸೇರಿದಂತೆ ಇತರೆ ದೇಶಗಳು ಹಾರ್ಮುಜ್ ಜಲಸಂಧಿಯ ಪ್ರದೇಶಕ್ಕೆ ಹಡಗುಗಳನ್ನು ಕಳುಹಿಸುವಂತೆ ಟ್ರಂಪ್ ಒತ್ತಾಯಿಸಿದ್ದಾರೆ. ಅಡೆತಡೆಗಳನ್ನು ತಡೆಗಟ್ಟಲು ಮತ್ತು ಜಲಸಂಧಿಯು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಬಹುರಾಷ್ಟ್ರಗಳು ಅಲ್ಲಿಗೆ ತೆರಳಬೇಕು ಎಂದು ಟ್ರಂಪ್ ಆಗ್ರಹಿಸಿದ್ದಾರೆ.

ಅಮೆರಿಕವು ಇರಾನ್‌ನ 100% ಮಿಲಿಟರಿ ಸಾಮರ್ಥ್ಯವನ್ನು ನಾಶಪಡಿಸಿದೆ ಎಂದು ಟ್ರಂಪ್ ಹೇಳಿಕೊಂಡರೂ, ಇರಾನ್ ಇನ್ನೂ ಡ್ರೋನ್‌ಗಳು, ಅಲ್ಪ-ಶ್ರೇಣಿಯ ಕ್ಷಿಪಣಿಗಳನ್ನು ಬಳಸಿಕೊಂಡು ಸಣ್ಣ ಪ್ರಮಾಣದ ದಾಳಿಗಳನ್ನು ನಡೆಸುವ ಸಾಧ್ಯತೆಯಿದೆ. ಇದು ಹಾರ್ಮುಜ್ ಜಲಸಂಧಿಯಲ್ಲಿ ಹಾದುಹೋಗುವ ಹಡಗುಗಳಿಗೆ ಅಪಾಯವನ್ನುಂಟುಮಾಡಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ; ಇರಾನ್ ಮೇಲಿನ ಯುದ್ಧ ಬೇಗ ಕೊನೆಯಾಗಲಿದೆ ಎಂದ ಟ್ರಂಪ್

“ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಪ್ರಯತ್ನಿಸಿದ್ದರಿಂದ ಪ್ರಭಾವಿತರಾದ ಅನೇಕ ದೇಶಗಳು, ಜಲಸಂಧಿಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿಡಲು ಅಮೆರಿಕ ಸಂಯುಕ್ತ ಸಂಸ್ಥಾನದೊಂದಿಗೆ ಯುದ್ಧನೌಕೆಗಳನ್ನು ಕಳುಹಿಸಲಿವೆ” ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ಹಾರ್ಮುಜ್ ಜಲಸಂಧಿಯು ವಿಶ್ವದ ತೈಲ ಸಾಗಣೆಯ ಗಮನಾರ್ಹ ಭಾಗವು ಹಾದುಹೋಗುವ ಪ್ರಮುಖ ಸಮುದ್ರ ಮಾರ್ಗವಾಗಿದೆ. ಈಗಾಗಲೇ ಭಾರತೀಯ ಹಡಗುಗಳಿಗೆ ಈ ಮಾರ್ಗದಲ್ಲಿ ಸಂಚರಿಸಲು ಇರಾನ್ ಅನುಮತಿ ನೀಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ