AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ನಡೆದ ಪ್ರತೀಕಾರದ ಕ್ರಮವಾಗಿ ದುಬೈ, ಅಬುಧಾಬಿ ಸೇರಿದಂತೆ ಗಲ್ಫ್ ದೇಶಗಳಿಗೆ ಹಾನಿಯಾಗಿತ್ತು. ಇನ್ನು ಮುಂದೆ ನೆರೆಹೊರೆಯ ರಾಷ್ಟ್ರಗಳ ಮೇಲೆ ದಾಳಿ ನಡೆಸದಿರಲು ಇರಾನ್ ನಿರ್ಧರಿಸಿದೆ, ಆದರೆ ತಮ್ಮ ಮೇಲೆ ದಾಳಿಯಾದರೆ ತಿರುಗೇಟು ನೀಡುವುದಾಗಿ ಎಚ್ಚರಿಸಿದೆ. ಸೌದಿ ಅರೇಬಿಯಾ ತನ್ನ ತೈಲ ಕ್ಷೇತ್ರಗಳ ರಕ್ಷಣೆಗೆ ಬದ್ಧವಾಗಿದೆ ಎಂದು ತಿಳಿಸಿದೆ.

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್
ಇರಾನ್​Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on:Mar 07, 2026 | 2:46 PM

Share

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಲ್ಲಿ ಆದ ಹಾನಿಗೆ ಕ್ಷಮೆ ಕೋರುತ್ತೇನೆ,” (Iran apology missile damage) ಎಂದಿದ್ದಾರೆ.

ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು ಇರಾನ್‌ನ ಮಧ್ಯಂತರ ನಾಯಕತ್ವ ಮಂಡಳಿ ನಿರ್ಧರಿಸಿದೆ. ಆದರೆ, ಆ ದೇಶಗಳ ನೆಲದಿಂದ ಇರಾನ್ ಮೇಲೆ ದಾಳಿ ನಡೆದರೆ ಮಾತ್ರ ತಿರುಗೇಟು ನೀಡುವುದಾಗಿ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ.

ಫೆಬ್ರವರಿ 28 ರಂದು ಅಮೆರಿಕ-ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಮತ್ತು ಅವರ ಕುಟುಂಬಸ್ಥರು ಹತರಾಗಿದ್ದರು. ಇದಕ್ಕೆ ಪ್ರತಿಕಾರವಾಗಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗಳು ದುಬೈ, ಅಬುಧಾಬಿ, ಕತಾರ್ ಮತ್ತು ಬಹ್ರೇನ್‌ನಂತಹ ಗಲ್ಫ್ ರಾಷ್ಟ್ರಗಳಿಗೂ ತಗುಲಿತ್ತು. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದರು. ಅಲ್ಲದೆ ಬುರ್ಜ್ ಅಲ್ ಅರಬ್ ಹೋಟೆಲ್ ಮತ್ತು ಸೌದಿ ಅರಾಮ್ಕೊ ತೈಲ ಸಂಸ್ಕರಣಾ ಕೇಂದ್ರಗಳ ಮೇಲೆಯೂ ಇರಾನ್ ದಾಳಿ ನಡೆಸಿದೆ ಎಂಬ ವರದಿಗಳಿವೆ.

ಇದನ್ನೂ ಓದಿ: ಇರಾನ್ ಜತೆಗೂಡಿ ಟ್ರಂಪ್, ಅಮೆರಿಕ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿತ್ತಾ ಪಾಕ್? ಮಹತ್ವದ ಮಾಹಿತಿ ಬಯಲು

ಸೌದಿ ಅರೇಬಿಯಾದ ರಕ್ಷಣಾ ಸಚಿವ ಪ್ರಿನ್ಸ್ ಖಾಲಿದ್ ಬಿನ್ ಸಲ್ಮಾನ್ ಅವರು “ತಪ್ಪು ಲೆಕ್ಕಾಚಾರ ಬೇಡ” ಎಂದು ಇರಾನ್‌ಗೆ ಎಚ್ಚರಿಕೆ ನೀಡಿದ್ದು, ಸೌದಿ ಅರೇಬಿಯಾದ ತೈಲ ಕ್ಷೇತ್ರಗಳ ರಕ್ಷಣೆಗೆ ತಾವು ಬದ್ಧ ಎಂದು ತಿಳಿಸಿದ್ದಾರೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Sat, 7 March 26

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು