Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್

ವಿಮಾನದ ತುರ್ತು ಬಾಗಿಲು ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್
ವೈರಲ್​ ವೀಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 17, 2023 | 12:20 PM

ವಿಮಾನದ ತುರ್ತು ಬಾಗಿಲು (Aircraft emergency door) ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ, ಹೌದು ಈ ಬಗ್ಗೆ ಒಂದು ವೀಡಿಯೊ ಕೂಡ ಟ್ವಿಟರ್​​ನಲ್ಲಿ ವೈರಲ್​ ಆಗಿದೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕರೊಬ್ಬರು ಹಂಚಿಕೊಂಡಿದ್ದಾರೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನಾಕಾರ ಟಿಯೆರ್ರಿ ಅವರ ಹಂಚಿಕೊಂಡಿದ್ದು, ವಿಮಾನದಲ್ಲಿ ಬಾಗಿಲು ತೆರೆದಿರುವ ಮತ್ತು ಜೋರಾಗಿ ಗಾಳಿ ಬರುತ್ತಿರುವುದನ್ನು ಕಾಣುಬಹುದು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಬ್ರೇಕಿಂಗ್ ಏವಿಯೇಷನ್ ​​ನ್ಯೂಸ್ ತಮ್ಮ ಟ್ವಿಟ್ಟರ್​​ನಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನೆಕಾರ ಟಿಯೆರ್ರಿಯ ವಿಮಾನವು ಸಾವೊ ಲೂಯಿಸ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ, ಎಂದು ಟ್ವೀಟ್ ಮಾಡಿದ್ದಾರೆ. ನಂತರದ ಟ್ವೀಟ್‌ನಲ್ಲಿ, ಎನ್‌ಎಚ್‌ಆರ್ ಟ್ಯಾಕ್ಸಿ ಏರಿಯೊ ನಿರ್ವಹಿಸುವ ಎಂಬ್ರೇರ್ -110 ವಿಮಾನದಲ್ಲಿಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ನನ್ನದೊಂದು ಅಳಿಲು ಸೇವೆ ಎಂದು ಮನೆ ಮಾಲೀಕನ ಜೊತೆಗೆ ಗೋವಿಗೆ ಹುಲ್ಲು ತಂದ ಶ್ವಾನ

ವಿಮಾನದಲ್ಲಿದ್ದ ಎಲ್ಲರೂ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ಅವರನ್ನು ಹೊಟೇಲ್​​ಗಳಿಗೆ ಸಾಗಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ವೀಡಿಯೊವನ್ನು ಜೂನ್ 14ರಂದು ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಅನೇಕರು ಕಮೆಂಟ್ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ವಿಮಾನದಲ್ಲಿ ನೈಸರ್ಗಿಕವಾಗಿ ಗಾಳಿಬಂದಿದೆ. ಇನ್ನೂಬ್ಬ ಬಳಕೆದಾರ ಇದು ತುಂಬಾ ಭಯಾನಕವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ