AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ವೈರಲ್​​: ಅಮೆರಿಕದ ಸಾರ್ವಜನಿಕ ಪ್ರದೇಶದಲ್ಲಿ ಮಹಿಳೆಗೆ ಚುಂಬಿಸಿದ ಪೊಲೀಸ್​​ ಅಧಿಕಾರಿ ಅಮಾನತು

ಅಮೆರಿಕದಲ್ಲಿ ಮಹಿಳೆಯೊಬ್ಬರಿಗೆ ಪೊಲೀಸ್​​ ಅಧಿಕಾರಿ ಕಾರಿನ ಬಳಿ ಚುಂಬಿಸಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದ್ದು, ಅಧಿಕಾರಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ವಿಡಿಯೋ ವೈರಲ್​​: ಅಮೆರಿಕದ ಸಾರ್ವಜನಿಕ ಪ್ರದೇಶದಲ್ಲಿ ಮಹಿಳೆಗೆ ಚುಂಬಿಸಿದ ಪೊಲೀಸ್​​ ಅಧಿಕಾರಿ ಅಮಾನತು
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Sep 07, 2023 | 1:09 PM

Share

ಅಮೆರಿಕದಲ್ಲಿ ಮಹಿಳೆಯೊಬ್ಬರಿಗೆ ಪೊಲೀಸ್​​ ಅಧಿಕಾರಿ ಕಾರಿನ ಬಳಿ ಚುಂಬಿಸಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದ್ದು, ಅಧಿಕಾರಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಈ ವಿಡಿಯೋದಲ್ಲಿರುವ ಪೊಲೀಸ್​​ ಅಧಿಕಾರಿಯನ್ನು ಪ್ರಿನ್ಸ್ ಜಾರ್ಜ್‌ನ ಕೌಂಟಿ ಪೊಲೀಸ್ ಅಧಿಕಾರಿ ಫ್ರಾನ್ಸೆಸ್ಕೊ ಮಾರ್ಲೆಟ್ ಎಂದು ಗುರುತಿಸಲಾಗಿದ್ದು, ಸಾರ್ವಜನಿಕ ಪಾರ್ಕ್​​​ ಬಳಿ ಮಹಿಳೆಯೊಬ್ಬರನ್ನು ಅಪ್ಪಿಕೊಂಡು ಮುತ್ತಿಡುತ್ತಿರುವುದನ್ನು ವೀಡಿಯೊ ತೋರಿಸಲಾಗಿದೆ. ನಂತರ ಮಹಿಳೆ ಅಧಿಕಾರಿಯ ಕೈಯನ್ನು ಹಿಡಿದುಕೊಂಡು, ವಾಹನದ ಹಿಂಭಾಗಕ್ಕೆ ಬರುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

ಇನ್ನು ಈ ವೀಡಿಯೋವನ್ನು ಚಿತ್ರೀಕರಿಸಿದ ವ್ಯಕ್ತಿ ಹೇಳಿರುವ ಪ್ರಕಾರ ಬಾಲ್ಟಿಮೋರ್ ಬ್ಯಾನರ್​ನಲ್ಲಿರುವ ಉದ್ಯಾನವನದಿಂದ ಪೊಲೀಸ್ ಮತ್ತು ಮಹಿಳೆ ಪ್ರತ್ಯೇಕವಾಗಿ ಹೊರಗೆ ಬಂದಿದ್ದಾರೆ. ಪಾರ್ಕ್​​ನ ಒಳಗೆ ಇಬ್ಬರು ಸುಮಾರು 40 ನಿಮಿಷಗಳ ಕಾಲ ಕಳೆದಿದ್ದಾರೆ. ABC 7News ಪ್ರಕಾರ, ಆಕ್ಸನ್ ಹಿಲ್ ಹೈಸ್ಕೂಲ್‌ನ ಪಕ್ಕದಲ್ಲಿರುವ ಕಾರ್ಸನ್ ಪಾರ್ಕ್‌ನಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ ಎಂದು ವರದಿ ಮಾಡಿದೆ.

ಇದನ್ನೂ ಓದಿ:ಮಧ್ಯರಾತ್ರಿ ಎದುರು ಮನೆ ಬಾಲ್ಕನಿಯಲ್ಲಿ ಕಾಣಿಸಿಕೊಂಡಿದ್ದು ದೆವ್ವನಾ? ವಿಡಿಯೋ ವೈರಲ್ ಆಗಿದೆ

ಮಾರ್ಲೆಟ್ ಮತ್ತು ವಿಡಿಯೋದಲ್ಲಿರುವ ಮಹಿಳೆಯ ನಡುವಿನ ಸಂಬಂಧ ಏನು ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಈ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾರ್ವಜನಿಕ ಸ್ಥಳದಲ್ಲಿ ಕರ್ತವ್ಯನಿರತ ಅಧಿಕಾರಿಗಳು ಅಪರಿಚಿತ ವ್ಯಕ್ತಿಗಳ ಜತೆಗೆ ಅಸಭ್ಯವಾಗಿ ವರ್ತನೆ ಮಾಡುವುದು ಸರಿಯಲ್ಲ ಎಂದು ಮಾರ್ಲೆಟ್ ಅವರನ್ನು ಮಂಗಳವಾರ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಮಹಿಳೆಗೆ ಕಿಸ್​​ ಮಾಡುತ್ತಿರುವ ವಿಡಿಯೋ ಇಲ್ಲಿದೆ

ಇನ್ನು ಈ ಬಗ್ಗೆ ಟ್ವೀಟ್​​ ಮಾಡಿದ ಪೊಲೀಸ್​​ ಇಲಾಖೆ, ಮಾರ್ಲೆಟ್ ಅವರನ್ನು ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಮಾರ್ಲೆಟ್ ಅವರ ಮೇಲೆ ಈಗಾಗಲೇ ಅನೇಕ ಪ್ರಕರಣಗಳು ಇದ್ದು, ಶಿಕ್ಷೆಯನ್ನು ಕೂಡ ಅನುಭವಿಸಿದ್ದಾರೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Thu, 7 September 23

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!