Video Viral: ಹಿಜಾಬ್ ವಿರೋಧಿ ಪ್ರತಿಭಟನೆಗೆ ನನ್ನ ಬೆಂಬಲವಿದೆ ಎಂದು ವೇದಿಕೆಯಲ್ಲಿ ಕೂದಲು ಕತ್ತರಿಸಿಕೊಂಡ ಟರ್ಕಿಶ್ ಗಾಯಕಿ

ಹಿಜಾಬ್ ವಿರೋಧಕ್ಕೆ ಇರಾನ್‌ನಲ್ಲಿ ಪ್ರತಿಭಟನಾಕಾರರಿಗೆ ನನ್ನ ಬೆಂಬಲ ಇದೆ ಎಂದು ವೇದಿಕೆಯ ಮೇಲೆ ಕಲಾವಿದೆ ತನ್ನ ಕೂದಲನ್ನು ಕತ್ತರಿಸುತ್ತಿರುವ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Video Viral: ಹಿಜಾಬ್ ವಿರೋಧಿ ಪ್ರತಿಭಟನೆಗೆ ನನ್ನ ಬೆಂಬಲವಿದೆ ಎಂದು ವೇದಿಕೆಯಲ್ಲಿ ಕೂದಲು ಕತ್ತರಿಸಿಕೊಂಡ ಟರ್ಕಿಶ್ ಗಾಯಕಿ
Video Viral
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 28, 2022 | 1:28 PM

ಟರ್ಕಿಶ್ ಗಾಯಕಿ ಮೆಲೆಕ್ ಮೊಸ್ಸೊ ಇರಾನ್‌ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಸೂಚಿಸಿದ ಮಹಿಳೆಯರ ಸಾಲನ್ನು ಸೇರಿಕೊಂಡಿದ್ದಾರೆ. ಹೌದು ಇರಾನ್‌ನಲ್ಲಿ ಪ್ರತಿಭಟನಾಕಾರರಿಗೆ ನನ್ನ ಬೆಂಬಲ ಇದೆ ಎಂದು ವೇದಿಕೆಯ ಮೇಲೆ ಕಲಾವಿದೆ ತನ್ನ ಕೂದಲನ್ನು ಕತ್ತರಿಸುತ್ತಿರುವ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದೀಗ ಈ ವಿಚಾರ ಭಾರೀ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಸೆಪ್ಟೆಂಬರ್ 17ರಂದು ಹಿಜಾಬ್ ನಿಯಮದ ಕುರಿತಾಗಿ ನಡೆದ ಘಟನೆಯಲ್ಲಿ ಪೋಲೀಸರ ಬಂಧನದಲ್ಲಿದ್ದ 22 ವರ್ಷದ ಮಹಾಸಾ ಅಮಿನಿಯ ಮರಣದ ನಂತರ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಆಕೆಯ ಸಾವಿನ ಹತ್ತು ದಿನಗಳ ನಂತರ, ಪ್ರತಿಭಟನೆಗಳು ಈಗ ಇರಾನಿ 46 ಕಡೆ ಹರಡಿವೆ. ನಗರಗಳು, ಪಟ್ಟಣಗಳು ​​ಮತ್ತು ಹಳ್ಳಿಗಳಲ್ಲೂ ಈ ಪ್ರತಿಭಟನೆಯ ಕಿಡಿ ಹತ್ತಿಕೊಂಡಿದೆ.

ಭದ್ರತಾ ಪಡೆಗಳೊಂದಿಗಿನ ಘರ್ಷಣೆಯ ನಡುವೆ ನಡೆದ ಪ್ರತಿಭಟನೆಯಲ್ಲಿ 75 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರತಿಭಟನೆಕಾರರೂ ಹೇಳಿಕೊಂಡಿದ್ದಾರೆ. ದೇಶದಲ್ಲಿ ಜಾರಿಯಲ್ಲಿರುವ ಕಟ್ಟುನಿಟ್ಟಿನ ಡ್ರೆಸ್ ಕೋಡ್ ವಿರುದ್ಧ ಪ್ರತಿಭಟಿಸಲು ಮಹಿಳಾ ಪ್ರತಿಭಟನಾಕಾರರು ತಮ್ಮ ಕೂದಲನ್ನು ಕತ್ತರಿಸಿ ಹಿಜಾಬ್ ತೆಗೆದು ಬೆಂಕಿ ಹಚ್ಚುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತಿದ್ದಾರೆ.

ಕಟ್ಟುನಿಟ್ಟಾದ ಡ್ರೆಸ್ ಕೋಡ್

ಇರಾನ್‌ನ ಷರಿಯಾ ಅಥವಾ ಇಸ್ಲಾಮಿಕ್ ಕಾನೂನಿನ ಅಡಿಯಲ್ಲಿ, ಏಳು ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ತಮ್ಮ ಕೂದಲನ್ನು ಮುಚ್ಚಲು ಮತ್ತು ಉದ್ದವಾದ, ಸಡಿಲವಾದ ಬಟ್ಟೆಗಳನ್ನು ಧರಿಸಲು ನಿರ್ಬಂಧವನ್ನು ಹೊಂದಿರುತ್ತಾರೆ. ಜುಲೈ 5 ರಂದು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಹಿಜಾಬ್ ಕಾನೂನನ್ನು ಜಾರಿಗೊಳಿಸಲು ಆದೇಶಿಸಿದ ನಂತರ ಮಹಿಳೆಯರು ಹೇಗೆ ಬಟ್ಟೆ ಧರಿಸಬಹುದು ಎಂಬ ನಿರ್ಬಂಧಗಳ ಹೊಸ ವಿವಾದಕ್ಕೆ ಕಾರಣವಾಯಿತು. ಇದೀಗ ಇದು ಸಾರ್ವಜನಿಕ ಖಂಡನೆ ಕಾರಣವಾಗಿದೆ. ಇದನ್ನು ವಿರೋಧಿವರಿಗೆ ದಂಡ ಅಥವಾ ಬಂಧನವನ್ನು ಎದುರಿಸುತ್ತಿದ್ದಾರೆ.

Published On - 1:15 pm, Wed, 28 September 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್