ಟರ್ಕಿಶ್ ಗಾಯಕಿ ಮೆಲೆಕ್ ಮೊಸ್ಸೊ ಇರಾನ್‌ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಸೂಚಿಸಿದ ಮಹಿಳೆಯರ ಸಾಲನ್ನು ಸೇರಿಕೊಂಡಿದ್ದಾರೆ. ಹೌದು ಇರಾನ್‌ನಲ್ಲಿ ಪ್ರತಿಭಟನಾಕಾರರಿಗೆ ನನ್ನ ಬೆಂಬಲ ಇದೆ ಎಂದು ವೇದಿಕೆಯ ಮೇಲೆ ಕಲಾವಿದೆ ತನ್ನ ಕೂದಲನ್ನು ಕತ್ತರಿಸುತ್ತಿರುವ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದೀಗ ಈ ವಿಚಾರ ಭಾರೀ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.
ಸೆಪ್ಟೆಂಬರ್ 17ರಂದು ಹಿಜಾಬ್ ನಿಯಮದ ಕುರಿತಾಗಿ ನಡೆದ ಘಟನೆಯಲ್ಲಿ ಪೋಲೀಸರ ಬಂಧನದಲ್ಲಿದ್ದ 22 ವರ್ಷದ ಮಹಾಸಾ ಅಮಿನಿಯ ಮರಣದ ನಂತರ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಆಕೆಯ ಸಾವಿನ ಹತ್ತು ದಿನಗಳ ನಂತರ, ಪ್ರತಿಭಟನೆಗಳು ಈಗ ಇರಾನಿ 46 ಕಡೆ ಹರಡಿವೆ. ನಗರಗಳು, ಪಟ್ಟಣಗಳು ಮತ್ತು ಹಳ್ಳಿಗಳಲ್ಲೂ ಈ ಪ್ರತಿಭಟನೆಯ ಕಿಡಿ ಹತ್ತಿಕೊಂಡಿದೆ.
Turkish singer @MelekMosso cuts off her hair on stage in solidarity with the Iranian women. Thank you Melek!#MahsaAmini #مهسا_امینی #IranProtests2022 pic.twitter.com/ZjISxjGkAL
— Omid Memarian (@Omid_M) September 27, 2022
ಭದ್ರತಾ ಪಡೆಗಳೊಂದಿಗಿನ ಘರ್ಷಣೆಯ ನಡುವೆ ನಡೆದ ಪ್ರತಿಭಟನೆಯಲ್ಲಿ 75 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರತಿಭಟನೆಕಾರರೂ ಹೇಳಿಕೊಂಡಿದ್ದಾರೆ. ದೇಶದಲ್ಲಿ ಜಾರಿಯಲ್ಲಿರುವ ಕಟ್ಟುನಿಟ್ಟಿನ ಡ್ರೆಸ್ ಕೋಡ್ ವಿರುದ್ಧ ಪ್ರತಿಭಟಿಸಲು ಮಹಿಳಾ ಪ್ರತಿಭಟನಾಕಾರರು ತಮ್ಮ ಕೂದಲನ್ನು ಕತ್ತರಿಸಿ ಹಿಜಾಬ್ ತೆಗೆದು ಬೆಂಕಿ ಹಚ್ಚುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತಿದ್ದಾರೆ.
ಕಟ್ಟುನಿಟ್ಟಾದ ಡ್ರೆಸ್ ಕೋಡ್
ಇರಾನ್‌ನ ಷರಿಯಾ ಅಥವಾ ಇಸ್ಲಾಮಿಕ್ ಕಾನೂನಿನ ಅಡಿಯಲ್ಲಿ, ಏಳು ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ತಮ್ಮ ಕೂದಲನ್ನು ಮುಚ್ಚಲು ಮತ್ತು ಉದ್ದವಾದ, ಸಡಿಲವಾದ ಬಟ್ಟೆಗಳನ್ನು ಧರಿಸಲು ನಿರ್ಬಂಧವನ್ನು ಹೊಂದಿರುತ್ತಾರೆ. ಜುಲೈ 5 ರಂದು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಹಿಜಾಬ್ ಕಾನೂನನ್ನು ಜಾರಿಗೊಳಿಸಲು ಆದೇಶಿಸಿದ ನಂತರ ಮಹಿಳೆಯರು ಹೇಗೆ ಬಟ್ಟೆ ಧರಿಸಬಹುದು ಎಂಬ ನಿರ್ಬಂಧಗಳ ಹೊಸ ವಿವಾದಕ್ಕೆ ಕಾರಣವಾಯಿತು. ಇದೀಗ ಇದು ಸಾರ್ವಜನಿಕ ಖಂಡನೆ ಕಾರಣವಾಗಿದೆ. ಇದನ್ನು ವಿರೋಧಿವರಿಗೆ ದಂಡ ಅಥವಾ ಬಂಧನವನ್ನು ಎದುರಿಸುತ್ತಿದ್ದಾರೆ.
Published On - 1:15 pm, Wed, 28 September 22