ಅಮೆರಿಕದ ಹೆದ್ದಾರಿಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಸ್ಫೋಟ; ವೈರಲ್ ವಿಡಿಯೋ ಇಲ್ಲಿದೆ
ಕಾರು ನಿಯಂತ್ರಣ ತಪ್ಪಿ, ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಆಗ ಟ್ರಕ್ ಚಾಲಕನು ಹೆದ್ದಾರಿಯ ಸೈಡ್‌ವಾಲ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇದಾದ ಬಳಿಕ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ.
ಕ್ಯಾಲಿಫೋರ್ನಿಯಾ: ಅಮೆರಿಕಾದ ಬ್ಲೇನ್ ಬಳಿಯ ಹೆದ್ದಾರಿಯೊಂದರಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಭಾರೀ ಬೆಂಕಿ (Fire Accident) ಕಾಣಿಸಿಕೊಂಡಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಬಿಳಿ ಬಣ್ಣದ ಕಾರು ನಿಯಂತ್ರಣ ಕಳೆದುಕೊಂಡು ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಟ್ರಕ್‌ನ ಎದುರು ಉರುಳಿಬಿದ್ದಿದೆ. ಇದರಿಂದ ಟ್ರಕ್‌ನ ಚಾಲಕನ ನಿಯಂತ್ರಣ ತಪ್ಪಿ, ಟ್ರಕ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಈ ದೃಶ್ಯದ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಾರು ರಾಂಪ್‌ನಿಂದ ಹೆದ್ದಾರಿಯತ್ತ ಸಾಗಿ, ಟ್ರಕ್‌ಗೆ ಡಿಕ್ಕಿ ಹೊಡೆದಿರುವುದನ್ನು ನೋಡಬಹುದು. ಕಾರು ನಿಯಂತ್ರಣ ತಪ್ಪಿ, ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಆಗ ಟ್ರಕ್ ಚಾಲಕನು ಹೆದ್ದಾರಿಯ ಸೈಡ್‌ವಾಲ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇದಾದ ಬಳಿಕ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ.
ಈ ಘಟನೆಯು ಏಪ್ರಿಲ್ 11ರಂದು ಮಧ್ಯಾಹ್ನ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸುಮಾರು 2 ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಯಿತು. ಈ ಸಮಯದಲ್ಲಿ ಬೆಂಕಿ ಹೊತ್ತಿಕೊಂಡು ಕರಕಲಾಗಿದ್ದ ಅವಶೇಷಗಳನ್ನು ತೆರವುಗೊಳಿಸಲಾಯಿತು.
ಅಮೆರಿಕದ ದೂರದರ್ಶನ ಮತ್ತು ರೇಡಿಯೋ ಬ್ರಾಡ್‌ಕಾಸ್ಟಿಂಗ್ ಕಂಪನಿಯಾದ KSTPಯಲ್ಲಿನ ವರದಿಯೊಂದು ಟ್ರಕ್ ಚಾಲಕನ ಹೆಸರು ಮಿಚೆಲ್ ಮೂರ್ ಎಂದು ಹೇಳಿದೆ. ಕಾರು ಚಾಲಕನು ಮದ್ಯದ ಅಮಲಿನಲ್ಲಿದ್ದನೆಂದು ಶಂಕಿಸಲಾಗಿದೆ. ಈ ಅಪಘಾತದಲ್ಲಿ ಇಬ್ಬರು ಚಾಲಕರ ಪಾತ್ರವೂ ಇದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಬ್ಬರ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ: Shocking Video: ಪುಣೆ- ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು- ಬಸ್ ನಡುವೆ ಭೀಕರ ಅಪಘಾತ; ಓರ್ವ ಸಾವು, 25 ಜನರ ಸ್ಥಿತಿ ಗಂಭೀರ
ಬೈಕ್ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಮಂಗಳೂರಿನ ಹಂಪನಕಟ್ಟೆ ವೃತ್ತದ ಬಳಿ ಬಸ್ ಬೆಂಕಿಗಾಹುತಿ