ಬಾಯ್ತಪ್ಪಿನಿಂದ ಕಮಲಾ ಹ್ಯಾರಿಸ್​ಗೆ ಅಮೆರಿಕದ ಪ್ರಥಮ ಮಹಿಳೆ ಎಂದ ಜೋ ಬೈಡೆನ್; ನಗೆಗಡಲಲ್ಲಿ ತೇಲಿದ ಪ್ರೇಕ್ಷಕರು

"ಪ್ರಥಮ ಮಹಿಳೆಯ ಪತಿ ಕೊವಿಡ್ ಸೋಂಕಿಗೆ ಒಳಗಾದ ಕಾರಣ ಈ ವೇದಿಕೆಯಲ್ಲಿ ಯಾರೆಲ್ಲ ಇದ್ದಾರೆ ಎಂಬುದರಲ್ಲಿ ಸ್ವಲ್ಪ ಬದಲಾವಣೆಯಾಗಿದೆ" ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. ಈ ಮಾತಿಗೆ ಸಭಾಂಗಣದಲ್ಲಿ ನಗುವಿನ ಅಲೆ ಎದ್ದಿದೆ.

ಬಾಯ್ತಪ್ಪಿನಿಂದ ಕಮಲಾ ಹ್ಯಾರಿಸ್​ಗೆ ಅಮೆರಿಕದ ಪ್ರಥಮ ಮಹಿಳೆ ಎಂದ ಜೋ ಬೈಡೆನ್; ನಗೆಗಡಲಲ್ಲಿ ತೇಲಿದ ಪ್ರೇಕ್ಷಕರು
ಜೋ ಬಿಡೆನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Mar 19, 2022 | 3:53 PM

ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಕಾರ್ಯಕ್ರಮವೊಂದರಲ್ಲಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಅವರನ್ನು “ಅಮೆರಿಕದ ಪ್ರಥಮ ಮಹಿಳೆ” ಎಂದು ತಪ್ಪಾಗಿ ಉಲ್ಲೇಖಿಸಿದ್ದಾರೆ. ಜೋ ಬೈಡೆನ್ (Joe Biden) ಅವರ ಮಾತು ಕೇಳಿ ಸಭೆಯಲ್ಲಿದ್ದ ಪ್ರೇಕ್ಷಕರು ನಗೆಗಡಲಲ್ಲಿ ತೇಲಿದ್ದಾರೆ. ಜೋ ಬೈಡೆನ್ ಶ್ವೇತಭವನದಲ್ಲಿ ಸಮಾನ ವೇತನ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಕಾರ್ಯಕ್ರಮಕ್ಕೆ ಏಕೆ ಹಾಜರಾಗಲಿಲ್ಲ ಎಂಬುದನ್ನು ವಿವರಿಸುವಾಗ ಅವರನ್ನು ಪ್ರಥಮ ಮಹಿಳೆ ಎಂದು ಸಂಬೋಧಿಸಿದ್ದಾರೆ. ಇದಕ್ಕೆ ಸಭಾಂಗಣದಲ್ಲಿ ನೆರೆದಿದ್ದವರೆಲ್ಲ ಜೋರಾಗಿ ನಗಾಡಿದ್ದಾರೆ.

“ಪ್ರಥಮ ಮಹಿಳೆಯ ಪತಿ ಕೊವಿಡ್ ಸೋಂಕಿಗೆ ಒಳಗಾದ ಕಾರಣ ಈ ವೇದಿಕೆಯಲ್ಲಿ ಯಾರೆಲ್ಲ ಇದ್ದಾರೆ ಎಂಬುದರಲ್ಲಿ ಸ್ವಲ್ಪ ಬದಲಾವಣೆಯಾಗಿದೆ” ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. ಅಮೆರಿಕದ ಪ್ರಥಮ ಮಹಿಳೆಯ ಗಂಡನಿಗೆ ಕೊರೊನಾ ಬಂದಿದೆ ಎಂದರೆ ನಿಮಗೇ ಬಂದಿದೆ ಎಂದು ಅರ್ಥ ಬರುತ್ತದೆ ಎಂದು ವೇದಿಕೆಯಲ್ಲಿದ್ದ ಕೆಲವರು ಜೋ ಬೈಡೆನ್​ಗೆ ಹೇಳಿದಾಗ ತಕ್ಷಣ ತಿದ್ದಿಕೊಂಡ ಅವರು ಪ್ರಥಮ ಮಹಿಳೆ ಆರೋಗ್ಯವಾಗಿದ್ದಾಳೆ ಎಂದು ನಗುತ್ತಾ ಮಾತು ಮುಂದುವರೆಸಿದ್ದಾರೆ.

ಟ್ವಿಟ್ಟರ್​ನಲ್ಲಿ ಶೇರ್ ಮಾಡಲಾದ ಈ ವಿಡಿಯೋ 3 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ಈ ವಿಡಿಯೋ ಈಗ ವೈರಲ್ ಆಗಿದೆ. ಅಮೆರಿಕದ ಶ್ವೇತಭವನದಲ್ಲಿ ನಡೆದ ಸಮಾನ ವೇತನ ದಿನದ ಕಾರ್ಯಕ್ರಮದಲ್ಲಿ 79 ವರ್ಷ ವಯಸ್ಸಿನ ಜೋ ಬೈಡೆನ್ ಈ ರೀತಿಯ ಎಡವಟ್ಟು ಮಾಡಿದ್ದಾರೆ.

ಕಳೆದ ವರ್ಷ ಕೂಡ ಅಮೆರಿಕದ ಉಪಾಧ್ಯಕ್ಷರಾದ ಕಮಲಾ ಹ್ಯಾರಿಸ್ ಅವರನ್ನು “ಅಧ್ಯಕ್ಷ ಹ್ಯಾರಿಸ್” ಎಂದು ತಪ್ಪಾಗಿ ಕರೆಯುವ ಮೂಲಕ ಇದೇ ರೀತಿಯ ಎಡವಟ್ಟು ಮಾಡಿದ್ದರು.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಬೈಡೆನ್, ಕೆನಡಾ ಪ್ರಧಾನಿ ಟ್ರುಡೋ ವಿರುದ್ಧ ನಿರ್ಬಂಧ ಘೋಷಿಸಿದ ರಷ್ಯಾ

ಉಕ್ರೇನ್ ಮೇಲೆ ರಷ್ಯಾದ ದಾಳಿಯಲ್ಲಿ ನಮ್ಮ ಪಾತ್ರದ ಬಗ್ಗೆ ಅಮೆರಿಕ ಸುಳ್ಳು ಸುದ್ದಿ ಹರಡುತ್ತಿದೆ; ಚೀನಾ ಆರೋಪ

Published On - 3:51 pm, Sat, 19 March 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್