ಪೂಜೆಗೆ ಸಿಗದ ಅವಕಾಶ: ವಿಷ್ಣು ಸಮಾಧಿ ಬಳಿ ಅಭಿಮಾನಿಗಳ ಗಲಾಟೆ

|

Updated on: Sep 18, 2024 | 9:49 PM

ವಿಷ್ಣುವರ್ಧನ್ ಹುಟ್ಟಿದ ದಿನವಾದ ಇಂದು ವಿಷ್ಣುವರ್ಧನ್ ಸಮಾಧಿ ಸ್ಥಳವಾದ ಅಭಿಮಾನ್ ಸ್ಟುಡಿಯೋ ಮುಂದೆ ಬೆಳಿಗ್ಗೆಯೇ ಅಭಿಮಾನಿಗಳು ಪೂಜೆ ಕಾದಿದ್ದರು. ಆದರೆ ಅಭಿಮಾನಿಗಳಿಗೆ ಸಮಾಧಿ ಸ್ಥಳ ಪೂಜೆ ಅವಕಾಶ ನೀಡಲಿಲ್ಲ. ಇದರಿಂದ ಅಭಿಮಾನಿಗಳು ಅಭಿಮಾನ್ ಸ್ಟುಡಿಯೋ ಮಾಲೀಕರ ಮೇಲೆ ಆಕ್ರೋಶ ಹೊರಹಾಕಿದರು.

ಕನ್ನಡದ ಮೇರು ನಟರಲ್ಲಿ ಒಬ್ಬರಾದ ವಿಷ್ಣುವರ್ಧನ್ ಅವರ ಹುಟ್ಟಿದ ದಿನ ಇಂದು. ಸಹಜವಾಗಿಯೇ ವಿಷ್ಣುವರ್ಧನ್ ಅಭಿಮಾನಿಗಳು, ವಿಷ್ಣುವರ್ಧನ್ ಸಮಾಧಿ ಸ್ಥಳ ಅಭಿಮಾನ್ ಸ್ಟುಡಿಯೋ ಬಳಿ ನೆರೆದಿದ್ದರು. ಆದರೆ ವಿಷ್ಣುವರ್ಧನ್ ಸಮಾಧಿ ಸ್ಥಳಕ್ಕೆ ನಮಿಸಲು ಅವಕಾಶ ಸಿಗದ ಕಾರಣ ವಿಷ್ಣು ಅಭಿಮಾನಿಗಳು ಆಕ್ರೋಶ ಹೊರಹಾಕಿದರು. ಅಭಿಮಾನ್ ಸ್ಟುಡಿಯೋ ಮಾಲೀಕರು ಹಾಗೂ ವಿಷ್ಣುವರ್ಧನ್ ಅಭಿಮಾನಿ ಸಂಘದ ನಡುವೆ ಸಮಾಧಿ ಸ್ಥಳದ ಕುರಿತಾಗಿ ವಾದ-ವಿವಾದ ವರ್ಷಗಳಿಂದಲೂ ನಡೆಯುತ್ತಲೇ ಇದೆ. ಸಮಾಧಿ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ವರ್ಷಗಳಿಂದಲೂ ವಿಷ್ಣು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆದರೆ ವಿಷ್ಣುವರ್ಧನ್ ಕುಟುಂಬದವರ ಮನವಿ ಮೇರೆಗೆ ಈಗಾಗಲೇ ಸರ್ಕಾರವು ಮೈಸೂರಿನಲ್ಲಿ ವಿಷ್ಣುವರ್ಧನ್​ಗೆ ಸ್ಮಾರಕ ನಿರ್ಮಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ