Putin on Make in India: ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ರಷ್ಯಾ(Russia) ಹಾಗೂ ಭಾರತ(India)ದ ಸಂಬಂಧಗಳು ಯಾವಾಗಲೂ ಉತ್ತಮವಾಗಿಯೇ ಇದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿಯೂ ಭಾರತ ಯಾರ ಪರ, ವಿರೋಧವನ್ನು ಮಾಡದೆ ತಟಸ್ಥ ನಿಲುವನ್ನು ತೋರಿತ್ತು.

Putin on Make in India: ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ವ್ಲಾಡಿಮಿರ್ ಪುಟಿನ್-ನರೇಂದ್ರ ಮೋದಿImage Credit source: The Print
Follow us
ನಯನಾ ರಾಜೀವ್
|

Updated on: Jun 30, 2023 | 10:55 AM

ರಷ್ಯಾ(Russia) ಹಾಗೂ ಭಾರತ(India)ದ ಸಂಬಂಧಗಳು ಯಾವಾಗಲೂ ಉತ್ತಮವಾಗಿಯೇ ಇದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿಯೂ ಭಾರತ ಯಾರ ಪರ, ವಿರೋಧವನ್ನು ಮಾಡದೆ ತಟಸ್ಥ ನಿಲುವನ್ನು ತೋರಿತ್ತು. ಇದೀಗ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಕ್ ಇನ್ ಇಂಡಿಯಾ(Make In India) ಪರಿಕಲ್ಪನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತಮ ಸ್ನೇಹಿತ ಎಂದು ಬಣ್ಣಿಸಿದ್ದಾರೆ.

ಭಾರತ ಸರ್ಕಾರದ ಮೇಕ್​ ಇನ್ ಇಂಡಿಯಾ ಪರಿಕಲ್ಪನೆಯು ಭಾರತದ ಆರ್ಥಿಕತೆಯ ಮೇಲೆ ನಿಜವಾಗಿಯೂ ಆಳವಾದ ಪರಿಣಾಮ ಬೀರಲಿದೆ ಎಂದು ಹೇಳಿದರು. ಭಾರತದ ಕೆಲವು ಯೋಜನೆಗಳನ್ನು ರಷ್ಯಾದಲ್ಲೂ ಅಳವಡಿಸಿಕೊಳ್ಳುವುದರಿಂದ ಏನಾದರೂ ಹಾನಿಯಾಗಬಹುದೇ ಎಂದು ರಷ್ಯಾದ ಸಚಿವರು ಕಳವಳ ವ್ಯಕ್ತಪಡಿಸಿದ್ದರು.

ಮತ್ತಷ್ಟು ಓದಿ: 9 Years Of PM Modi: ಪ್ರಧಾನಿ ಮೋದಿಯವರ 9 ವರ್ಷಗಳ ಪಯಣ, ಭಾರತದ ಅಭಿವೃದ್ಧಿಗೆ ಕೊಡುಗೆ ನೀಡಿದ 9 ಮಹತ್ವದ ಯೋಜನೆಗಳು ಇಲ್ಲಿವೆ

ಆಗ ಪುಟಿನ್ ಮಾತನಾಡಿ, ಭಾರತವು ಹಲವು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಎಂಬ ಯೋಜನೆ ಆರಂಭಿಸಿತ್ತು, ಈ ಯೋಜನೆಯು ಭಾರತದ ಆರ್ಥಿಕತೆಯ ಮೇಲೆ ತನ್ನ ಪರಿಣಾಮವನ್ನು ತೋರಿಸಿದೆ, ಇದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಅದರಿಂದ ಯಾವುದೇ ಹಾನಿಯಿಲ್ಲ ಎಂದು ಹೇಳಿದ್ದಾರೆ. ವ್ಲಾಡಿಮಿರ್ ಪುಟಿನ್ ರಷ್ಯಾದಲ್ಲಿ ದೇಶೀಯ ಉತ್ಪನ್ನಗಳು ಮತ್ತು ಬ್ರ್ಯಾಂಡ್ಗಳನ್ನು ಪ್ರೋತ್ಸಾಹಿಸಲು ಭಾರತದ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ.

ನಾವು ನಮ್ಮ ಉತ್ಪನ್ನಗಳನ್ನು ಆಧುನೀಕರಿಸಬೇಕು ಮತ್ತು ಅವುಗಳನ್ನು ಹೆಚ್ಚು ಅನುಕೂಲಕರ ಮತ್ತು ಕ್ರಿಯಾತ್ಮಕಗೊಳಿಸುವ ಬಗ್ಗೆ ಯೋಚಿಸಬೇಕು ಎಂದು ಪುಟಿನ್ ಹೇಳಿದರು. ರಷ್ಯಾ ಜೊತೆಗಿನ ಸಂಬಂಧವನ್ನು ರಕ್ಷಣೆಗೆ ಮಾತ್ರ ಸೀಮಿತಗೊಳಿಸಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದರು. ಇದೇ ವೇಳೆ ರಷ್ಯಾ ಜತೆಗಿನ ಆರ್ಥಿಕ ಸಂಬಂಧಗಳ ಬಗ್ಗೆ ಪ್ರಸ್ತಾಪಿಸಿದ ಜೈಶಂಕರ್, ಉಭಯ ದೇಶಗಳ ನಡುವಿನ ಆರ್ಥಿಕ ಸಂಬಂಧವೂ ಸುಧಾರಿಸಿದೆ ಎಂದು ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್