Vladimir Putin: 2 ತಿಂಗಳ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ; ಉಕ್ರೇನ್ ಮಿಲಿಟರಿ ಅಧಿಕಾರಿ ಹೇಳಿದ್ದೇನು?
ಪುಟಿನ್ ಅವರನ್ನು ಹತ್ಯೆ ಮಾಡುವ ಯತ್ನ ಮಾಡಲಾಗಿತ್ತು. ಅದಕ್ಕಾಗಿಯೇ ಅವರ ಮೇಲೆ ದಾಳಿ ನಡೆಸಲಾಯಿತು ಎಂದು ಉಕ್ರೇನ್ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು. ಅದೃಷ್ಟವಶಾತ್ ಅವರು ಬದುಕುಳಿದಿದ್ದಾರೆ ಎಂದು ಉಕ್ರೇನ್ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಷ್ಯಾ- ಉಕ್ರೇನ್ ಸಂಘರ್ಷದ ನಡುವೆಯೇ ಈ ಆಘಾತಕಾರಿ ವಿಷಯ ಹೊರಬಿದ್ದಿದ್ದು, ಅತ್ತ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ಕೂಡ ಹದಗೆಟ್ಟಿದೆ ಎನ್ನಲಾಗುತ್ತಿದೆ. ಉಕ್ರೇನ್‌ನ ರಕ್ಷಣಾ ಗುಪ್ತಚರ ಮುಖ್ಯಸ್ಥ ಮೇಜರ್ ಜನರಲ್ ಕೈರಿಲೊ ಬುಡಾನೋವ್ ಅವರ ಪ್ರಕಾರ, ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿದ ಸ್ವಲ್ಪ ಸಮಯದ ಬಳಿಕ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವಿನ ಪ್ರದೇಶವಾದ ಕಾಕಸಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಕೊಲ್ಲುವ ವಿಫಲ ಪ್ರಯತ್ನ ನಡೆಯಿತು.
“ಪುಟಿನ್ ಅವರನ್ನು ಹತ್ಯೆ ಮಾಡುವ ಯತ್ನ ಮಾಡಲಾಗಿತ್ತು. ಅದಕ್ಕಾಗಿಯೇ ಅವರ ಮೇಲೆ ದಾಳಿ ನಡೆಸಲಾಯಿತು. ಕಾಕಸಸ್ನ ಪ್ರತಿನಿಧಿಗಳು ಬಹಳ ಈ ಬಗ್ಗೆ ಸಂಚು ರೂಪಿಸಿದ್ದರು” ಎಂದು ಬುಡಾನೋವ್ ಹೇಳಿದ್ದಾರೆ. ಸುಮಾರು 2 ತಿಂಗಳ ಹಿಂದೆ ಈ ಘಟನೆ ಸಂಭವಿಸಿದೆ. ಆದರೆ, ಪುಟಿನ್ರನ್ನು ಕೊಲ್ಲುವ ಯತ್ನ ಯಶಸ್ವಿಯಾಗಲಿಲ್ಲ ಎಂದು ಅವರು ಹೇಳಿದ್ದಾರೆ.
ತಮ್ಮ ಮೇಲೆ 5 ಬಾರಿ ಕೊಲೆ ಯತ್ನ ನಡೆದಿತ್ತು. ಆದರೂ ನಾನು ನನ್ನ ಸುರಕ್ಷತೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2017ರಲ್ಲಿ ಸಾರ್ವಜನಿಕವಾಗಿ ಹೇಳಿಕೊಂಡಿದ್ದರು. ಇದೀಗ 6ನೇ ಬಾರಿಗೆ ಅವರ ಮೇಲೆ ಹತ್ಯೆಯ ಪ್ರಯತ್ನ ನಡೆದಂತಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:04 pm, Tue, 24 May 22