Vladimir Putin: 2 ತಿಂಗಳ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ; ಉಕ್ರೇನ್ ಮಿಲಿಟರಿ ಅಧಿಕಾರಿ ಹೇಳಿದ್ದೇನು?

| Updated By: ಸುಷ್ಮಾ ಚಕ್ರೆ

Updated on: May 24, 2022 | 7:05 PM

ಪುಟಿನ್ ಅವರನ್ನು ಹತ್ಯೆ ಮಾಡುವ ಯತ್ನ ಮಾಡಲಾಗಿತ್ತು. ಅದಕ್ಕಾಗಿಯೇ ಅವರ ಮೇಲೆ ದಾಳಿ ನಡೆಸಲಾಯಿತು ಎಂದು ಉಕ್ರೇನ್ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Vladimir Putin: 2 ತಿಂಗಳ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ; ಉಕ್ರೇನ್ ಮಿಲಿಟರಿ ಅಧಿಕಾರಿ ಹೇಳಿದ್ದೇನು?
ವ್ಲಾಡಿಮಿರ್ ಪುಟಿನ್
Image Credit source: NDTV
Follow us on

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು. ಅದೃಷ್ಟವಶಾತ್ ಅವರು ಬದುಕುಳಿದಿದ್ದಾರೆ ಎಂದು ಉಕ್ರೇನ್ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಷ್ಯಾ- ಉಕ್ರೇನ್ ಸಂಘರ್ಷದ ನಡುವೆಯೇ ಈ ಆಘಾತಕಾರಿ ವಿಷಯ ಹೊರಬಿದ್ದಿದ್ದು, ಅತ್ತ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ಕೂಡ ಹದಗೆಟ್ಟಿದೆ ಎನ್ನಲಾಗುತ್ತಿದೆ. ಉಕ್ರೇನ್‌ನ ರಕ್ಷಣಾ ಗುಪ್ತಚರ ಮುಖ್ಯಸ್ಥ ಮೇಜರ್ ಜನರಲ್ ಕೈರಿಲೊ ಬುಡಾನೋವ್ ಅವರ ಪ್ರಕಾರ, ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿದ ಸ್ವಲ್ಪ ಸಮಯದ ಬಳಿಕ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವಿನ ಪ್ರದೇಶವಾದ ಕಾಕಸಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಕೊಲ್ಲುವ ವಿಫಲ ಪ್ರಯತ್ನ ನಡೆಯಿತು.

“ಪುಟಿನ್ ಅವರನ್ನು ಹತ್ಯೆ ಮಾಡುವ ಯತ್ನ ಮಾಡಲಾಗಿತ್ತು. ಅದಕ್ಕಾಗಿಯೇ ಅವರ ಮೇಲೆ ದಾಳಿ ನಡೆಸಲಾಯಿತು. ಕಾಕಸಸ್​ನ ಪ್ರತಿನಿಧಿಗಳು ಬಹಳ ಈ ಬಗ್ಗೆ ಸಂಚು ರೂಪಿಸಿದ್ದರು” ಎಂದು ಬುಡಾನೋವ್ ಹೇಳಿದ್ದಾರೆ. ಸುಮಾರು 2 ತಿಂಗಳ ಹಿಂದೆ ಈ ಘಟನೆ ಸಂಭವಿಸಿದೆ. ಆದರೆ, ಪುಟಿನ್​ರನ್ನು ಕೊಲ್ಲುವ ಯತ್ನ ಯಶಸ್ವಿಯಾಗಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Vladimir Putin: ರಷ್ಯಾ ಅಧ್ಯಕ್ಷ ಪುಟಿನ್​ಗೆ ಗುಣಪಡಿಸಲಾಗದ ನಿಗೂಢ ಕಾಯಿಲೆ, ಇದು ಉಕ್ರೇನ್‌ನಲ್ಲಿ ನಡೆಯುತ್ತಿರುವ ಭೀಕರತೆಯ ಪರಿಣಾಮ ಎಂದ ಮಾಜಿ ಬ್ರಿಟನ್ ಗುಪ್ತಚರ

ಇದನ್ನೂ ಓದಿ
ಕ್ಯಾನ್ಸರ್ ರೋಗಿಗಳಲ್ಲಿ ಬಹುಬೇಗ ಕ್ಷೀಣಿಸುತ್ತದೆಯೇ ಕೋವಿಡ್ ವ್ಯಾಕ್ಸಿನ್ ಪ್ರಭಾವ? ಇಲ್ಲಿದೆ ವರದಿ
Monkeypox: ಇಂಗ್ಲೆಂಡ್​ನಲ್ಲಿ 36 ಹೊಸ ಮಂಕಿಪಾಕ್ಸ್​ ವೈರಸ್ ಪತ್ತೆ; ಲೈಂಗಿಕ ಕ್ರಿಯೆಯಿಂದಲೂ ಹರಡುತ್ತಂತೆ ಈ ರೋಗ!
Rahul Gandhi: ಒಂದು ವರ್ಗವನ್ನು ಹೊರಗಿಟ್ಟು ಪ್ರಧಾನಿ ಮೋದಿ ಭಾರತದ ದೃಷ್ಟಿಕೋನ ನಿರ್ಮಿಸುತ್ತಿರುವುದು ತಪ್ಪು; ರಾಹುಲ್ ಗಾಂಧಿ ವಾಗ್ದಾಳಿ

ತಮ್ಮ ಮೇಲೆ 5 ಬಾರಿ ಕೊಲೆ ಯತ್ನ ನಡೆದಿತ್ತು. ಆದರೂ ನಾನು ನನ್ನ ಸುರಕ್ಷತೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2017ರಲ್ಲಿ ಸಾರ್ವಜನಿಕವಾಗಿ ಹೇಳಿಕೊಂಡಿದ್ದರು. ಇದೀಗ 6ನೇ ಬಾರಿಗೆ ಅವರ ಮೇಲೆ ಹತ್ಯೆಯ ಪ್ರಯತ್ನ ನಡೆದಂತಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Tue, 24 May 22