ಮಧ್ಯಪ್ರಾಚ್ಯ ಸಂಘರ್ಷ ಕೋವಿಡ್​ನಂತಹ ಜಾಗತಿಕ ಪರಿಣಾಮ ಬೀರಬಹುದು: ಪುಟಿನ್

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಪರಿಣಾಮಗಳನ್ನು ಊಹಿಸುವುದು ಕಷ್ಟ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಈ ಸಂಘರ್ಷವು ಕೋವಿಡ್​ನಂತೆ ಜಾಗತಿಕ ಪರಿಣಾಮ ಬೀರಬಹುದು ಎಂದರು. ಸಂಘರ್ಷವು ಈಗಾಗಲೇ ಇಂಟರ್​ನ್ಯಾಷನಲ್ ಲಾಜಿಸ್ಟಿಕ್ಸ್​, ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳಿಗೆ ಅಡ್ಡಿ ಪಡಿಸುತ್ತಿದೆ ಮತ್ತು ಹೈಡ್ರೋ ಕಾರ್ಬನ್, ಲೋಹಗಳು ಮತ್ತು ರಸಗೊಬ್ಬರ ಕಂಪನಿಗಳ ಮೇಲೆ ಭಾರೀ ಒತ್ತಡವನ್ನು ಹೇರುತ್ತಿದೆ ಎಂದು ಹೇಳಿದ್ದಾರೆ.

ಮಧ್ಯಪ್ರಾಚ್ಯ ಸಂಘರ್ಷ ಕೋವಿಡ್​ನಂತಹ ಜಾಗತಿಕ ಪರಿಣಾಮ ಬೀರಬಹುದು: ಪುಟಿನ್
ಪುಟಿನ್
Image Credit source: BBC

Updated on: Mar 26, 2026 | 7:59 PM

ಮಾಸ್ಕೋ, ಮಾರ್ಚ್​ 26: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಪರಿಣಾಮಗಳನ್ನು ಊಹಿಸುವುದು ಕಷ್ಟ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಈ ಸಂಘರ್ಷವು ಕೋವಿಡ್​ನಂತೆ ಜಾಗತಿಕ ಪರಿಣಾಮ ಬೀರಬಹುದು ಎಂದರು. ಸಂಘರ್ಷವು ಈಗಾಗಲೇ ಇಂಟರ್​ನ್ಯಾಷನಲ್ ಲಾಜಿಸ್ಟಿಕ್ಸ್​, ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳಿಗೆ ಅಡ್ಡಿ ಪಡಿಸುತ್ತಿದೆ ಮತ್ತು ಹೈಡ್ರೋ ಕಾರ್ಬನ್, ಲೋಹಗಳು ಮತ್ತು ರಸಗೊಬ್ಬರ ಕಂಪನಿಗಳ ಮೇಲೆ ಭಾರೀ ಒತ್ತಡವನ್ನು ಹೇರುತ್ತಿದೆ ಎಂದು ಹೇಳಿದ್ದಾರೆ.

ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ಮಧ್ಯಪ್ರಾಚ್ಯವನ್ನು ವ್ಯಾಪಕ ಬಿಕ್ಕಟ್ಟಿನ ಹತ್ತಿರಕ್ಕೆ ತಳ್ಳಿದೆ. ಮಧ್ಯಪ್ರಾಚ್ಯದಲ್ಲಿ ಈಗ ಎದ್ದಿರುವ ಬಿಕ್ಕಟ್ಟು ಬೇಗ ಬಗೆಹರಿಯುವುದಿಲ್ಲ, ಯಾವಾಗ ಅಂತ್ಯವಾಗುತ್ತೆ ಅಂತಾ ಯುದ್ಧ ಆರಂಭಿಸಿದವರಿಗೆ ಗೊತ್ತಿಲ್ಲ.ಯಾವಾಗ ಏನಾಗುತ್ತೋ ಅಂತಾ ಹೇಳಲು ಯಾರಿಗೂ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಭೀಕರ ಯುದ್ಧ ನಡೆಯುತ್ತಿದೆ. ಮೇಲ್ನೋಟಕ್ಕೆ ಇದು ಕೇವಲ ಮೂರು ದೇಶಗಳ ನಡುವಿನ ಕಾದಾಟದಂತೆ ಕಾಣಿಸಬಹುದು, ಆದರೆ ಸಾಕಷ್ಟು ರಾಷ್ಟ್ರಗಳ ಮೇಲೆ ಇದರ ದುಷ್ಪರಿಣಾಮ ಬೀರುತ್ತಿದೆ.ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವೆ ಫೆಬ್ರವರಿ 28ರಂದು ಯುದ್ಧ ಆರಂಭವಾದಾಗಿನಿಂದ, ರಷ್ಯಾ ಇರಾನ್‌ನ ಪರಿವಾಗಿ ಕೆಲಸ ಮಾಡುತ್ತಿದೆ.

ಉಕ್ರೇನ್ ಯುದ್ಧದಲ್ಲಿ ತನಗೆ ನಿರಂತರವಾಗಿ ಆತಂಕ ತಂದೊಡ್ಡಿದ ಅಮೆರಿಕದ ವಿರುದ್ಧ ಸೇಡು ತೀರಿಸಿಕೊಳ್ಳಲು ವ್ಲಾಡಿಮಿರ್‌ ಪುಟಿನ್‌ಗೆ ಇದೊಂದು ಉತ್ತಮ ಅವಕಾಶ ಎಂದೇ ಹೇಳಬಹುದು. ರಷ್ಯಾ ನೀಡುತ್ತಿರುವ ಈ ನೈಜ ಸಮಯದ ಗುಪ್ತಚರ ಮಾಹಿತಿ ಆಧರಿಸಿ, ಇರಾನ್ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದೆ.

ಮತ್ತಷ್ಟು ಓದಿ:

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವು

ಹಾರ್ಮುಜ್ ಜಲಸಂಧಿ ಬಳಿ ಇಸ್ರೇಲ್(Israel) ನಡೆಸಿದ ದಾಳಿಯಲ್ಲಿ ಇರಾನಿನ ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಹೆಚ್ಚಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳು ನಿರಂತರವಾಗಿ ಹೆಚ್ಚುತ್ತಿರುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ತಂಗ್ಸಿರಿ ಇರಾನ್ ನೌಕಾಪಡೆಯ ಪ್ರಮುಖ ಕಮಾಂಡರ್ ಆಗಿದ್ದರು ಮತ್ತು ಹಾರ್ಮುಜ್‌ನಂತಹ ಕಾರ್ಯತಂತ್ರದ ಪ್ರದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾರ್ಮುಜ್ ಜಲಸಂಧಿ ಮುಚ್ಚಲು ಅವರೇ ಕಾರಣರಾಗಿದ್ದರು.

ಈ ಯುದ್ಧದಲ್ಲಿ ಇಲ್ಲಿಯವರೆಗೆ ಅಮೆರಿಕ-ಇಸ್ರೇಲ್ ಇರಾನ್​​ನ ಮೂರು ಡಜನ್​ಗಿಂತಲೂ ಹೆಚ್ಚು ಪ್ರಮುಖ ಮಿಲಿಟರಿ ಕಮಾಂಡರ್​ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ದಾಳಿಯು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಬಹುದು. ಇರಾನ್ ತನ್ನ ಉನ್ನತ ಮಿಟಿಲರಿ ಅಧಿಕಾರಿಯ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವ ಭಯವಿದೆ, ಇದು ಗಲ್ಫ್​ ರಾಷ್ಟ್ರಗಳು ಮತ್ತು ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿನ ಭದ್ರತಾ ಬಿಕ್ಕಟ್ಟನ್ನು ಇನ್ನಷ್ಟು ಆಳಗೊಳಿಸುವ ಸಾಧ್ಯತೆ ಇದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us