AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ನಂಬಿಕೆಗೆ ಯೋಗ್ಯವಲ್ಲ, ಮತ್ತೆ ಯುದ್ಧ ಆರಂಭವಾಗಬಹುದು; ಇರಾನ್ ಸ್ಫೋಟಕ ಹೇಳಿಕೆ

ಯಾವುದೇ ಒಪ್ಪಂದದ ಬಗ್ಗೆ ಅಮೆರಿಕ ಗಂಭೀರವಾಗಿಲ್ಲ. ಹೀಗಾಗಿ ಯುದ್ಧ ಪುನರಾರಂಭವಾಗಬಹುದು ಎಂದು ಇರಾನ್ ಹೇಳಿಕೆ ನೀಡಿದೆ. ಅಲ್ಲದೆ, ಇರಾನ್ ಸೇನೆಯು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಕೂಡ ಹೇಳಿದೆ. ಅತ್ತ ಟ್ರಂಪ್ ಇರಾನ್‌ನ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಇರಾನ್​ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ತಯಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ, ಕದನ ವಿರಾಮದ ನಡುವೆಯೂ ಮತ್ತೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಮುಂದುವರೆದಿದೆ.

ಅಮೆರಿಕ ನಂಬಿಕೆಗೆ ಯೋಗ್ಯವಲ್ಲ, ಮತ್ತೆ ಯುದ್ಧ ಆರಂಭವಾಗಬಹುದು; ಇರಾನ್ ಸ್ಫೋಟಕ ಹೇಳಿಕೆ
Masoud Pezeshkian And Donald TrumpImage Credit source: TV9
ಸುಷ್ಮಾ ಚಕ್ರೆ
|

Updated on: May 02, 2026 | 4:23 PM

Share

ಟೆಹ್ರಾನ್, ಮೇ 2: ಕದನವಿರಾಮ ಘೋಷಣೆಯಾಗಿದ್ದರೂ ಇರಾನ್ ಮತ್ತು ಅಮೆರಿಕದ ನಡುವಿನ ಉದ್ವಿಗ್ನತೆ ಇನ್ನೂ ಹೆಚ್ಚಾಗಿದೆ. ಎರಡೂ ದೇಶಗಳ ನಡುವಿನ ಪರಿಸ್ಥಿತಿ ಮತ್ತೆ ಉಲ್ಬಣಗೊಳ್ಳಬಹುದು. ಅಮೆರಿಕ ಮತ್ತು ಇಸ್ರೇಲ್ ಜೊತೆ ಯುದ್ಧ ಮತ್ತೆ ಆರಂಭವಾಗಬಹುದು ಎಂದು ಇರಾನ್ (Iran) ಸೇನೆ ಎಚ್ಚರಿಸಿದೆ. ಇರಾನ್ ಸೇನಾ ಉಪ ಅಧಿಕಾರಿ ಮೊಹಮ್ಮದ್ ಜಾಫರ್ ಅಸಾದಿ ಅಮೆರಿಕ ಯಾವುದೇ ಒಪ್ಪಂದಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

ಅಮೆರಿಕದ ಅಧಿಕಾರಿಗಳ ಹೇಳಿಕೆಗಳು ಕೇವಲ ಪ್ರದರ್ಶನಕ್ಕಾಗಿ ಮಾತ್ರ ಎಂದು ಅಸ್ಸಾದಿ ಆರೋಪಿಸಿದ್ದಾರೆ. ಇರಾನ್ ಸೇನೆಯು ಸಂಪೂರ್ಣವಾಗಿ ಸಿದ್ಧವಾಗಿದೆ. ಮತ್ತೆ ಯಾವುದೇ ದಾಳಿ ನಡೆದರೂ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಇದನ್ನೂ ಓದಿ: ನೀವು ನನಗೆ ಸಹಾಯ ಮಾಡಿ, ನಾನು ನಿಮಗೆ ಸಹಾಯ ಮಾಡ್ತೇನೆ, ಟ್ರಂಪ್-ಪುಟಿನ್ 90 ನಿಮಿಷಗಳ ರಹಸ್ಯ ಮಾತುಕತೆ

ಇರಾನ್ ಜೊತೆಗಿನ ಮಾತುಕತೆಯ ಹೊಸ ಪ್ರಸ್ತಾಪವನ್ನು ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ ಸಮಯದಲ್ಲಿಯೇ ಅವರ ಈ ಹೇಳಿಕೆ ಬಂದಿದೆ. ಇರಾನ್ ತಾನು ಒಪ್ಪಿಕೊಳ್ಳಲು ಸಾಧ್ಯವಾಗದ ಷರತ್ತುಗಳನ್ನು ವಿಧಿಸುತ್ತಿದೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ ನಾಯಕರು ಒಗ್ಗಟ್ಟಿನಲ್ಲಿಲ್ಲ ಎಂದು ಅವರು ಆರೋಪಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಇರಾನ್ ಸಮರ ಅಂತ್ಯ: ಟ್ರಂಪ್ ಆಡಳಿತದ ದಿಢೀರ್ ಘೋಷಣೆ, ಸಂಸತ್ತಿನ ಹಸ್ತಕ್ಷೇಪಕ್ಕೆ ಬೀಳಲಿದೆಯೇ ಬ್ರೇಕ್?

ಒಂದು ಕಾರ್ಯಕ್ರಮವೊಂದರಲ್ಲಿ ಟ್ರಂಪ್ ಮಾತನಾಡುತ್ತಾ, ಪರಮಾಣು ಶಸ್ತ್ರಾಸ್ತ್ರಗಳು ಹುಚ್ಚರ ಕೈಗೆ ಸಿಗಲು ಬಿಡಲು ಸಾಧ್ಯವಿಲ್ಲದ ಕಾರಣ ಅಮೆರಿಕ ಈ ಯುದ್ಧದಲ್ಲಿ ಭಾಗವಹಿಸಿದೆ ಎಂದು ಹೇಳಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯುವುದನ್ನು ತಡೆಯುವುದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ