ಇದು ಯುದ್ಧದ ಯುಗವಲ್ಲ ಎಂದು ನಾವಿಬ್ಬರೂ ಒಪ್ಪಿದ್ದೇವೆ; ಸೈಪ್ರಸ್ ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಜೊತೆ ಪ್ರಧಾನಿ ಮೋದಿ ಮಾತುಕತೆ
ವಿಸ್ತೃತ ಮಾತುಕತೆಗಳ ನಂತರ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಂವಾದ ಮತ್ತು ಸ್ಥಿರತೆಯ ಮೂಲಕ ಪರಿಹಾರ ತೆಗೆದುಕೊಳ್ಳಬಹುದು ಎಂದು ಹೇಳಿದರು. ಪ್ರಧಾನಿ ಮೋದಿ ಅವರು ರಾಜಧಾನಿ ನಿಕೋಸಿಯಾಗೆ ಪ್ರವಾಸ ಮಾಡಿದರು. ಪಶ್ಚಿಮ ಏಷ್ಯಾ ಮತ್ತು ಯುರೋಪಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಬಗ್ಗೆ ನಾವಿಬ್ಬರೂ ಕಳವಳ ವ್ಯಕ್ತಪಡಿಸಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ನಿಕೋಸಿಯಾ (ಸೈಪ್ರಸ್), ಜೂನ್ 16: ಸೈಪ್ರಸ್ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಸೋಮವಾರ) ಪಶ್ಚಿಮ ಏಷ್ಯಾ ಮತ್ತು ಯುರೋಪಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಬಗ್ಗೆ ತಾವು ಮತ್ತು ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಕಳವಳ ವ್ಯಕ್ತಪಡಿಸಿದ್ದೇವೆ. ಇಬ್ಬರೂ “ಇದು ಯುದ್ಧದ ಯುಗವಲ್ಲ” ಎಂದು ಒಪ್ಪಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ವಿಸ್ತೃತ ಮಾತುಕತೆಗಳ ನಂತರ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಸಂವಾದದ ಮೂಲಕ ಪರಿಹಾರ ಮತ್ತು ಸ್ಥಿರತೆಯ ಪುನಃಸ್ಥಾಪನೆಯು ಮಾನವೀಯತೆಯ ಕರೆಯಾಗಿದೆ” ಎಂದು ಹೇಳಿದರು.
Gratitude to President Christodoulides for showing me parts of the very historic city of Nicosia. We look forward to closer people-to-people linkages with Cyprus!@Christodulides pic.twitter.com/ucUPmQZtCc
— Narendra Modi (@narendramodi) June 16, 2025
“ಪಶ್ಚಿಮ ಏಷ್ಯಾ ಮತ್ತು ಯುರೋಪಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಬಗ್ಗೆ ನಾವಿಬ್ಬರೂ ಕಳವಳ ವ್ಯಕ್ತಪಡಿಸಿದ್ದೇವೆ. ಅವುಗಳ ನಕಾರಾತ್ಮಕ ಪರಿಣಾಮವು ಆ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿಲ್ಲ. ಇದು ಯುದ್ಧದ ಯುಗವಲ್ಲ ಎಂದು ನಾವಿಬ್ಬರೂ ಪರಿಗಣಿಸುತ್ತೇವೆ. ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕಾಗಿದೆ” ಎಂದು ಮೋದಿ ಹೇಳಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಬೆಂಗಳೂರಿನಲ್ಲಿ ವ್ಯಕ್ತಿ ವಿರುದ್ಧ ಬಿಜೆಪಿ ದೂರು
ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಸೈಪ್ರಸ್‌ಗೆ ಧನ್ಯವಾದ ಅರ್ಪಿಸಿದರು. ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟಕ್ಕೆ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಸೈಪ್ರಸ್‌ಗೆ ಧನ್ಯವಾದ ಅರ್ಪಿಸಿದರು. “ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಸೈಪ್ರಸ್ ನೀಡಿದ ಬೆಂಬಲಕ್ಕೆ ನಾವು ಕೃತಜ್ಞರಾಗಿರುತ್ತೇವೆ” ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಸ್ತುತ ತಮ್ಮ 3 ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್‌ಗೆ ಮೋದಿ ಅಧಿಕೃತ ಭೇಟಿ ನೀಡಿದ್ದಾರೆ.
I extend my heartfelt gratitude to the Government and people of Cyprus for conferring upon me ‘The Grand Cross of the Order of Makarios III.’
This isn’t my honour. It is an honour for 140 crore Indians. I dedicate this award to the everlasting friendship between India and… pic.twitter.com/Q9p7LQGNfq
— Narendra Modi (@narendramodi) June 16, 2025
ಪ್ರಧಾನಿ ಮೋದಿ ಮತ್ತು ಕ್ರಿಸ್ಟೋಡೌಲೈಡ್ಸ್ ವಿಸ್ತೃತ ಮಾತುಕತೆ ನಡೆಸಿದರು, ಇದು ಭಾರತ-ಸೈಪ್ರಸ್ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಒಳಗೊಂಡಿದೆ. ಅವರು ರಕ್ಷಣೆ, ಭದ್ರತೆ, ವ್ಯಾಪಾರ, ತಂತ್ರಜ್ಞಾನ, ಆರೋಗ್ಯ ರಕ್ಷಣೆ, ನವೀಕರಿಸಬಹುದಾದ ಇಂಧನ ಮತ್ತು ಹವಾಮಾನ ನ್ಯಾಯದಂತಹ ಕ್ಷೇತ್ರಗಳಲ್ಲಿನ ಸಹಕಾರದ ಬಗ್ಗೆ ಮಾತನಾಡಿದರು. ಅವರು ಪ್ರಾದೇಶಿಕ ವಿಷಯಗಳ ಬಗ್ಗೆಯೂ ಚರ್ಚಿಸಿದರು. ಎರಡು ದಶಕಗಳಲ್ಲಿ ಸೈಪ್ರಸ್‌ಗೆ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿಗೆ ಸೈಪ್ರಸ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ, ಇಲ್ಲಿಯವರೆಗೆ ಯಾವ್ಯಾವ ದೇಶಗಳಿಂದ ಸಿಕ್ಕಿದೆ ಗೌರವ
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ್ ಅನ್ನು ನಡೆಸಿತು. ಈ ಸಮಯದಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಪಡಿಸಿತು. “ನಮ್ಮ ನಡುವೆ ಐತಿಹಾಸಿಕ ಸ್ನೇಹವಿದೆ, ಆ ಸಂಬಂಧಗಳಲ್ಲಿ ನಂಬಿಕೆ ಇದೆ” ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ತಮ್ಮ ಹೇಳಿಕೆಗಳಲ್ಲಿ ಹೇಳಿದ್ದಾರೆ.
ಏಪ್ರಿಲ್ 22ರ ಭಯಾನಕ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಅವರು ನೆನಪಿಸಿಕೊಂಡರು. ಸೈಪ್ರಸ್ ಭಾರತದೊಂದಿಗೆ “ಸಂಪೂರ್ಣ ಒಗ್ಗಟ್ಟಿನಲ್ಲಿ” ನಿಂತಿದೆ ಎಂದು ಅವರು ಪ್ರತಿಪಾದಿಸಿದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:49 pm, Mon, 16 June 25




