ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?

ಪ್ರಧಾನಿ ಮೋದಿ ಅಮೆರಿಕದ ಶಾಸಕರನ್ನುದ್ದೇಶಿಸಿ ಮಾತನಾಡಿದ್ದು, ನಾನು ಆಲೋಚನೆಗಳು ಮತ್ತು ಸಿದ್ಧಾಂತದ ಚರ್ಚೆಯನ್ನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನೀವು ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯವನ್ನು ಆಚರಿಸಲು ಇಂದು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.

ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Jun 23, 2023 | 7:26 PM

ವಾಷಿಂಗ್ಟನ್: ಭಾರತದೊಂದಿಗೆ ತಮ್ಮ ದೇಶದ ಬಾಂಧವ್ಯವನ್ನು ಆಚರಿಸಲು ಒಗ್ಗೂಡಿದ ಯುಎಸ್ (US) ಕಾಂಗ್ರೆಸ್ ಸದಸ್ಯರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಮನೆಯಲ್ಲಿ ವಿಚಾರಗಳ ಸ್ಪರ್ಧೆಯಿರಬೇಕು ಆದರೆ ರಾಷ್ಟ್ರಕ್ಕಾಗಿ ಮಾತನಾಡುವಾಗ ಜನರು ಕೂಡ ಒಂದಾಗಬೇಕು ಎಂದು ಹೇಳಿದ್ದಾರೆ. ಗುರುವಾರದಂದು ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿಯವರು ಮಾಡಿದ ಹೇಳಿಕೆಗಳು ರಾಹುಲ್ ಗಾಂಧಿಗೆ (Rahul Gandhi) ಟಾಂಗ್ ನೀಡಿದಂತಿದೆ. ರಾಹುಲ್ ತಮ್ಮ ವಿದೇಶ ಪ್ರವಾಸಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಆಗಾಗ ಟೀಕಿಸುತ್ತಲೇ ಇರುತ್ತಾರೆ. ಹಾಗಾಗಿ ಪ್ರಧಾನಿಯವರ ಮಾತುಗಳು ಕಾಂಗ್ರೆಸ್ ನಾಯಕನ ಮೇಲಿನ ದಾಳಿ ಎಂದು ಗ್ರಹಿಸಲಾಗಿದೆ.

ಪ್ರಧಾನಿ ಮೋದಿ ಅಮೆರಿಕದ ಶಾಸಕರನ್ನುದ್ದೇಶಿಸಿ ಮಾತನಾಡಿದ್ದು, ನಾನು ಆಲೋಚನೆಗಳು ಮತ್ತು ಸಿದ್ಧಾಂತದ ಚರ್ಚೆಯನ್ನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನೀವು ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯವನ್ನು ಆಚರಿಸಲು ಇಂದು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಸಂತೋಷವಾಗಿದೆ.

ನಿಮಗೆ ಬಲವಾದ ಉಭಯಪಕ್ಷೀಯ ಒಮ್ಮತದ ಅಗತ್ಯವಿರುವಾಗ ಸಹಾಯ ಮಾಡಲು ನಾನು ಸಂತೋಷಪಡುತ್ತೇನೆ. ಮನೆಯಲ್ಲಿ ವಿಚಾರಗಳ ಸ್ಪರ್ಧೆ ಇರುತ್ತದೆ, ಮತ್ತು ಇರಬೇಕು. ಆದರೆ, ನಾವು ನಮ್ಮ ರಾಷ್ಟ್ರಕ್ಕಾಗಿ ಮಾತನಾಡುವಾಗ ನಾವು ಕೂಡ ಒಂದಾಗಬೇಕು. ನೀವು ಅದನ್ನು ಮಾಡಬಲ್ಲಿರಿ ಎಂದು ತೋರಿಸಿದ್ದೀರಿ, ಅಭಿನಂದನೆಗಳು ಎಂದಿದ್ದಾರೆ.

ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ಕೆವಿನ್ ಮೆಕಾರ್ಥಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನಾನು ಪ್ರಜಾಪ್ರಭುತ್ವದ ಪ್ರಜೆಯಾಗಿ, ನಾನು ಒಂದು ವಿಷಯವನ್ನು ಒಪ್ಪಿಕೊಳ್ಳಬಲ್ಲೆ ಮಿಸ್ಟರ್ ಸ್ಪೀಕರ್ ನಿಮ್ಮದು ಕಷ್ಟದ ಕೆಲಸ. ಉತ್ಸಾಹ, ಮನವೊಲಿಕೆ ಮತ್ತು ನೀತಿಯ ಯುದ್ಧಳ ಬಗ್ಗೆ ಬಲ್ಲೆ ಎಂದಿದ್ದಾರೆ ಮೋದಿ.

ಇದನ್ನೂ ಓದಿ: PM Modi US Visit: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಅಮೆರಿಕದ ಪ್ರತಿನಿಧಿಗಳು ಖುಷಿ ಹಂಚಿಕೊಂಡಿದ್ದು ಹೀಗೆ

ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕ ಪ್ರವಾಸ ನಡೆಸಿದಾಗ ಮೋದಿ ಸರ್ಕಾರ ಸಮಸ್ಯೆಗಳನ್ನು ನಿಭಾಯಿಸುತ್ತಿದ್ದ ರೀತಿಯನ್ನು ಟೀಕಿಸಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ