ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​​ ಧರಿಸುವುದು ಕಡ್ಡಾಯವಲ್ಲ; ಅಚ್ಚರಿಯ ನಿಲುವು ತಳೆದ ಇಸ್ರೇಲ್​ ದೇಶ

ಇಸ್ರೇಲ್​ನಲ್ಲಿ ಕೊರೊನಾ ಸೋಂಕಿತರ ಮರಣ ಪ್ರಮಾಣವೂ ಕಡಿಮೆಯಾಗಿದ್ದು, ಸೋಂಕು ಹಬ್ಬುವಿಕೆಗೂ ಕಡಿವಾಣ ಬಿದ್ದಿದೆ. ದೇಶದಲ್ಲಿರುವ ಒಟ್ಟು ಅರ್ಧದಷ್ಟು ಜನರಿಗೆ ಕೊರೊನಾ ಲಸಿಕೆ ನೀಡಲಾಗಿರುವ ಬೆನ್ನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಇನ್ನುಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂಬ ಅಚ್ಚರಿಯ ನಿರ್ಧಾರವನ್ನು ಇಸ್ರೇಲ್​ ಸರ್ಕಾರ ತಳೆದಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​​ ಧರಿಸುವುದು ಕಡ್ಡಾಯವಲ್ಲ; ಅಚ್ಚರಿಯ ನಿಲುವು ತಳೆದ ಇಸ್ರೇಲ್​ ದೇಶ
ಸಂಗ್ರಹ ಚಿತ್ರ
Follow us
Skanda
| Updated By: preethi shettigar

Updated on: Apr 19, 2021 | 11:10 AM

ಭಾರತದಲ್ಲಿ ಕೊರೊನಾ ವೈರಾಣು ಎರಡನೇ ಅಲೆಯ ಮೂಲಕ ಜನಜೀವನವನ್ನು ಸಂಕಷ್ಟಕ್ಕೆ ನೂಕಿದೆ. ಸೋಂಕು ನಿಯಂತ್ರಿಸಲು ವಿವಿಧ ಕಠಿಣ ಕ್ರಮಗಳಿಗೆ ಮುಂದಾಗಿರುವ ಸರ್ಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಇನ್ನಿತರ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದಕ್ಕೆ ಅತಿಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ. ಏತನ್ಮಧ್ಯೆ ಜಾಗತಿಕ ಮಟ್ಟದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಆದರೆ, ಇದೇ ಸಂದರ್ಭದಲ್ಲಿ ಇಸ್ರೇಲ್ ದೇಶ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಇನ್ನುಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂಬ ಅಚ್ಚರಿಯ ನಿರ್ಧಾರ ತಳೆದಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದಂತೆಯೇ ಇಸ್ರೇಲ್​ನ ಆರೋಗ್ಯ ಸಚಿವ ಪ್ರೊ.ಹೇಜಿ ಲೇವಿ ಹೊಸ ಸುತ್ತೋಲೆ ಹೊರಡಿಸಿದ್ದು, ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಅಲ್ಲ ಎಂದು ತಿಳಿಸಿದ್ದಾರೆ.

ಇಸ್ರೇಲ್​ನಲ್ಲಿ ಕೊರೊನಾ ಸೋಂಕಿತರ ಮರಣ ಪ್ರಮಾಣವೂ ಕಡಿಮೆಯಾಗಿದ್ದು, ಸೋಂಕು ಹಬ್ಬುವಿಕೆಗೂ ಕಡಿವಾಣ ಬಿದ್ದಿದೆ. ಈಗಾಗಲೇ ಇಸ್ರೇಲ್​ ದೇಶದಲ್ಲಿರುವ ಒಟ್ಟು ಅರ್ಧದಷ್ಟು ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಜಗತ್ತಿನಲ್ಲಿ ಅತಿ ವೇಗವಾಗಿ ಕೊರೊನಾ ಲಸಿಕೆ ವಿತರಿಸುತ್ತಿರುವ ದೇಶ ಎಂಬ ಹಿರಿಮೆಗೂ ಅದು ಪಾತ್ರವಾಗಿದೆ. ಇದರ ನಡುವಿನಲ್ಲೇ ಹೊರಾಂಗಣ ಪ್ರದೇಶಗಳಲ್ಲಿ ಮಾಸ್ಕ್​ ಕಡ್ಡಾಯ ಅಲ್ಲ ಎಂಬ ನಿಲುವನ್ನು ತಳೆದಿರುವುದರಿಂದ ಕೊರೊನಾ ಮಣಿಸುವಲ್ಲಿ ಇಸ್ರೇಲ್ ಅತ್ಯಂತ ಆತ್ಮವಿಶ್ವಾಸದಿಂದ ಹೆಜ್ಜೆ ಇರಿಸಿದಂತಾಗಿದೆ.

ಇಸ್ರೇಲ್​ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಆದ್ಯತೆ ನೀಡಿದ ಕಾರಣ ಹೆಚ್ಚಿನ ಜನರಲ್ಲಿ ಕೊರೊನಾ ವಿರುದ್ಧದ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿದೆ. ಜತೆಗೆ ಈಗಾಗಲೇ ಹರ್ಡ್​ ಇಮ್ಯೂನಿಟಿ ಸಹ ಅಭಿವೃದ್ಧಿ ಆಗಿರುವ ಸಾಧ್ಯತೆ ಇದೆ ಎಂದು ಕೆಲ ವರದಿಗಳು ತಿಳಿಸಿವೆ. ಈ ಹಿಂದೆ ದಿನಕ್ಕೆ ಸುಮಾರು 10 ಸಾವಿರದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 100ರ ಅಂಚಿಗೆ ಇಳಿದಿದ್ದು, ಮರಣ ಪ್ರಮಾಣವೂ 10ರ ಆಸುಪಾಸಿಗೆ ಬಂದು ನಿಂತಿದೆ. ಹೀಗಾಗಿ ದೇಶದಲ್ಲಿ ಕೊರೊನಾ ಬಹುತೇಕ ನಿಯಂತ್ರಣಕ್ಕೆ ಬಂದಿರುವುದರಿಂದ ಇಸ್ರೇಲ್​ ಸರ್ಕಾರ ಜನಸಾಮಾನ್ಯರಿಗೆ ಕೊರೊನಾ ನಿಯಮಾವಳಿಗಳಿಂದ ಕೆಲ ವಿನಾಯಿತಿಗಳನ್ನು ನೀಡುತ್ತಿದೆ.

ಸೋಂಕು ಗಣನೀಯ ಪ್ರಮಾಣದಲ್ಲಿ ಇಳಿಕೆಯಾದ ಬೆನ್ನಲ್ಲೇ ಶೈಕ್ಷಣಿಕ ಚಟುವಟಿಕೆಗಳು ಪುನಾರಂಭಗೊಂಡಿದ್ದು, ಶಾಲಾ ಕಾಲೇಜುಗಳನ್ನು ತೆರೆಯಲಾಗಿದೆ. ಸದ್ಯ ಶೈಕ್ಷಣಿಕ ಕೇಂದ್ರ, ಒಳಾಂಗಣ ಸ್ಥಳಗಳು ಹಾಗೂ ಲಸಿಕೆ ಪಡೆಯದವರು ಹೆಚ್ಚಿರುವಲ್ಲಿ ಮಾತ್ರ ಮಾಸ್ಕ್ ಧರಿಸುವುದನ್ನು ಮುಂದುವರೆಸುವಂತೆ ಸೂಚಿಸಲಾಗಿದ್ದು ಮೇ ತಿಂಗಳಿನಿಂದ ವಿದೇಶಿಯರಿಗೆ ಇಸ್ರೇಲ್​ ದೇಶಕ್ಕೆ ಆಗಮಿಸಲು ಅವಕಾಶ ನೀಡುವುದಾಗಿಯೂ ಸರ್ಕಾರ ಘೋಷಣೆ ಮಾಡಿದೆ.

ಇದನ್ನೂ ಓದಿ: ಮಾಸ್ಕ್​ ಇಲ್ಲದೇ ರೈಲ್ವೆ ಸ್ಟೇಷನ್​ಗೆ ಕಾಲಿಟ್ಟರೆ ಹುಷಾರ್​; ಬೀಳಲಿದೆ ಭಾರೀ ದಂಡ

ಎರಡೇಟು ಕೊಟ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ ದಾವಣಗೆರೆ ಎಸ್​ಪಿ

(Wearing mask in Public space to avoid Covid 19 is no more compulsory says Israel)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್