
ಇಸ್ಲಮಾಬಾದ್, ನವೆಂಬರ್ 27: ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ (Imran Khan) ಕಸ್ಟಡಿಯಲ್ಲಿ ನಿಧನರಾಗಿದ್ದಾರೆ ಎಂಬ ವದಂತಿಗಳ ನಡುವೆ ಪಾಕಿಸ್ತಾನದ ಅಡಿಯಾಲ ಜೈಲಿನ ಹೊರಗೆ ಉದ್ವಿಗ್ನತೆ ಭುಗಿಲೆದ್ದಿತ್ತು. ಇದೀಗ ಈ ಬಗ್ಗೆ ಪಾಕಿಸ್ತಾನ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಗ್ಯವಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ, ಯಾರಿಗೂ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಪಾಕಿಸ್ತಾನದ ಅಡಿಯಾಲ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಎದ್ದಿರುವ ಊಹಾಪೋಹಗಳು ಆಧಾರರಹಿತ. ಅವರಿಗೆ ಸಂಪೂರ್ಣ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜೈಲು ಆಡಳಿತ ಹೇಳಿದೆ. “ಅಡಿಯಾಲ ಜೈಲಿನಿಂದ ಅವರನ್ನು ಶಿಫ್ಟ್ ಮಾಡಲಾಗಿದೆ ಎಂಬ ವರದಿಗಳಲ್ಲಿ ಯಾವುದೇ ಸತ್ಯವಿಲ್ಲ. ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.
ಇದನ್ನು ಓದಿ: ಪಾಕಿಸ್ತಾನದ ಜೈಲಿನೊಳಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆಯಾದರಾ?
ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರು ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ಪ್ರಕರಣಗಳ ಜಾಲದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಬಂಧನದಲ್ಲಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ