AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಮೇಲೆ ಪರಮಾಣು ದಾಳಿ ನಡೆಸುತ್ತಾ ಅಮೆರಿಕ? ಶ್ವೇತಭವನ ಹೇಳಿದ್ದೇನು?

ಕದನವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್​ಗೆ ನೀಡಿದ್ದ ಗಡುವು ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಒಪ್ಪಂದಕ್ಕೆ ಒಪ್ಪದಿದ್ದರೆ ಇಂದು ರಾತ್ರಿ ಇರಾನ್​ ದೇಶದ ನಾಗರಿಕತೆಯನ್ನೇ ನಾಶ ಮಾಡುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದರು. ಸದ್ಯದ ಮಟ್ಟಿಗಂತೂ ಇರಾನ್ ಅಮೆರಿಕದ ಮುಂದೆ ಮಣಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಹೀಗಾಗಿ, ಅಮೆರಿಕ ಇರಾನ್ ಮೇಲೆ ಪರಮಾಣು ದಾಳಿ ನಡೆಸುತ್ತದೆಯೇ? ಎಂಬ ಚರ್ಚೆಗಳು ಶುರುವಾಗಿವೆ. ಇರಾನ್ ಮೇಲೆ ಪರಮಾಣು ದಾಳಿಗಳನ್ನು ನಡೆಸುವ ಬಗ್ಗೆ ಶ್ವೇತಭವನ ಸ್ಪಷ್ಟನೆ ನೀಡಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಇರಾನ್ ಮೇಲೆ ಪರಮಾಣು ದಾಳಿ ನಡೆಸುತ್ತಾ ಅಮೆರಿಕ? ಶ್ವೇತಭವನ ಹೇಳಿದ್ದೇನು?
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Apr 07, 2026 | 9:51 PM

Share

ವಾಷಿಂಗ್ಟನ್, ಏಪ್ರಿಲ್ 7: ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ ಇಡೀ ನಾಗರಿಕತೆಯು ಇಂದು ರಾತ್ರಿ ಕೊನೆಗೊಳ್ಳುತ್ತದೆ ಎಂದು ಡೊನಾಲ್ಡ್ ಟ್ರಂಪ್ (Donald Trump) ಇಂದು ಸಂಜೆ ಬೆದರಿಕೆ ಹಾಕಿದ್ದರು. ಡೊನಾಲ್ಡ್ ಟ್ರಂಪ್ ಅವರ ಈ ಹೇಳಿಕೆ ಇರಾನ್ ಮೇಲಿನ ಪರಮಾಣು ದಾಳಿಯ ಭಯವನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಇದರ ನಡುವೆ ಒಪ್ಪಂದ ಮಾಡಿಕೊಳ್ಳಲು ಟ್ರಂಪ್ ನೀಡಿದ ಗಡುವು ಕೊನೆಗೊಳ್ಳುವ ಮೊದಲೇ ಯುಎಸ್ ಮಿಲಿಟರಿ ಇರಾನ್‌ನ ಪ್ರಮುಖ ತೈಲ ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ದಾಳಿ ಮಾಡಿತ್ತು. ಕದನವಿರಾಮಕ್ಕೆ ಒಪ್ಪದಿದ್ದರೆ ಅಮೆರಿಕ ಇರಾನ್ ಮೇಲೆ ಪರಮಾಣು ದಾಳಿ ನಡೆಸುತ್ತದೆಯೇ? ಎಂಬ ಬಗ್ಗೆ ಶ್ವೇತಭವನ ಸ್ಪಷ್ಟನೆ ನೀಡಿದೆ.

ಮಧಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಇರಾನ್ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಬಗ್ಗೆ ಹರಡಿರುವ ಸುದ್ದಿಗಳನ್ನು ಶ್ವೇತಭವನ ಇಂದು ನಿರಾಕರಿಸಿದೆ. ನಿಗದಿಪಡಿಸಿದ ಗಡುವಿನೊಳಗೆ ಇರಾನ್ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ವಿಫಲವಾದರೆ ಇಡೀ ನಾಗರಿಕತೆಯು ಸಾಯುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟು ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ ಈ ಸ್ಪಷ್ಟೀಕರಣ ಬಂದಿದೆ.

ಇದನ್ನೂ ಓದಿ: ಒಪ್ಪಂದ, ಶರಣಾಗತಿ ಅಥವಾ ಅತ್ಯಂತ ಮಾರಕ ದಾಳಿ? ಇರಾನ್​ಗೆ ಟ್ರಂಪ್ ಗಡುವು, ವಿನಾಶಕ್ಕೆ ಕ್ಷಣಗಣನೆ

“ನಮ್ಮ ನಾಯಕರು ನೀಡಿದ ಯಾವ ಹೇಳಿಕೆಗಳೂ ಪರಮಾಣು ದಾಳಿಯ ಸಾಧ್ಯತೆಯನ್ನು ಸೂಚಿಸುವುದಿಲ್ಲ” ಎಂದು ಅಮೆರಿಕದ ಶ್ವೇತಭವನ ಹೇಳಿದೆ. ಟ್ರೂತ್ ಸೋಶಿಯಲ್ ಬಗ್ಗೆ ಟ್ರಂಪ್ ಈ ಬಗ್ಗೆ ಬರೆದಿದ್ದಾರೆ. “ಇಡೀ ನಾಗರಿಕತೆಯು ಇಂದು ರಾತ್ರಿ ಸಾಯುತ್ತದೆ, ಮತ್ತೆಂದೂ ಇರಾನ್​ನ ಜನರು ಹಿಂತಿರುಗುವುದಿಲ್ಲ. ಆ ರೀತಿ ಆಗಬೇಕೆಂದು ನಾನು ಬಯಸುವುದಿಲ್ಲ. ಆದರೆ ಆ ರೀತಿ ಆಗುವ ಸಾಧ್ಯತೆಯೂ ಇಲ್ಲದಿಲ್ಲ” ಎಂದು ಟ್ರಂಪ್ ಎಚ್ಚರಿಸಿದ್ದರು.

ಇದನ್ನೂ ಓದಿ: ಇಂದು ರಾತ್ರಿ ಇಡೀ ದೇಶವೇ ನಾಶವಾಗುತ್ತದೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

“ಇಂದು ರಾತ್ರಿ ಏನಾಗಲಿದೆ ಎಂಬುದು ಯಾರಿಗೂ ತಿಳಿದಿಲ್ಲ. ಈ ರಾತ್ರಿ ಪ್ರಪಂಚದ ದೀರ್ಘ ಮತ್ತು ಸಂಕೀರ್ಣ ಇತಿಹಾಸದಲ್ಲಿ ಅತ್ಯಂತ ಪ್ರಮುಖ ಕ್ಷಣಗಳಲ್ಲಿ ಒಂದಾಗಲಿದೆ. 47 ವರ್ಷಗಳ ಸುಲಿಗೆ, ಭ್ರಷ್ಟಾಚಾರ ಮತ್ತು ಸಾವು ಅಂತಿಮವಾಗಿ ಕೊನೆಗೊಳ್ಳುತ್ತದೆ. ಇರಾನ್‌ನ ಜನರನ್ನು ದೇವರು ಆಶೀರ್ವದಿಸಲಿ!” ಎಂದು ಟ್ರಂಪ್ ಹೇಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು