AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aruna Miller: ಅಮೆರಿಕದಲ್ಲಿ ಇತಿಹಾಸ ಸೃಷ್ಟಿಸಿದ ಭಾರತೀಯ ಸಂಜಾತೆ: ಅರುಣಾ ಮಿಲ್ಲರ್ ಈಗ ಮೇರಿಲ್ಯಾಂಡ್‌ನ ಲೆಫ್ಟಿನೆಂಟ್ ಗವರ್ನರ್

ಭಾರತೀಯ ಮೂಲದ ಮಹಿಳೆ ಅರುಣಾ ಮಿಲ್ಲರ್ ಮೇರಿಲ್ಯಾಂಡ್​ನ ಲೆಫ್ಟಿನೆಂಟ್ ಗವರ್ನರ್ ಆಗಿ, ಅಮೆರಿಕದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಅಮೆರಿಕದಲ್ಲಿ ಮಧ್ಯಂತರ ಚುನಾವಣೆಗಳ ಮಧ್ಯೆ, ಈ ಬಾರಿ ಭಾರತೀಯ-ಅಮೆರಿಕನ್ನರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಶೇಕಡಾ 100 ಸ್ಟ್ರೈಕ್ ರೇಟ್ ಹೊಂದಬಹುದು.

Aruna Miller: ಅಮೆರಿಕದಲ್ಲಿ ಇತಿಹಾಸ ಸೃಷ್ಟಿಸಿದ ಭಾರತೀಯ ಸಂಜಾತೆ: ಅರುಣಾ ಮಿಲ್ಲರ್ ಈಗ  ಮೇರಿಲ್ಯಾಂಡ್‌ನ ಲೆಫ್ಟಿನೆಂಟ್ ಗವರ್ನರ್
Aruna Miller
TV9 Web
| Edited By: |

Updated on: Nov 09, 2022 | 11:06 AM

Share

ಭಾರತೀಯ ಮೂಲದ ಮಹಿಳೆ ಅರುಣಾ ಮಿಲ್ಲರ್ ಮೇರಿಲ್ಯಾಂಡ್​ನ ಲೆಫ್ಟಿನೆಂಟ್ ಗವರ್ನರ್ ಆಗಿ, ಅಮೆರಿಕದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಅಮೆರಿಕದಲ್ಲಿ ಮಧ್ಯಂತರ ಚುನಾವಣೆಗಳ ಮಧ್ಯೆ, ಈ ಬಾರಿ ಭಾರತೀಯ-ಅಮೆರಿಕನ್ನರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಶೇಕಡಾ 100 ಸ್ಟ್ರೈಕ್ ರೇಟ್ ಹೊಂದಬಹುದು.

ವಾಸ್ತವವಾಗಿ, ಭಾರತೀಯ-ಅಮೆರಿಕನ್ನರಾದ ಅಮಿ ಬೇರಾ, ರಾಜಾ ಕೃಷ್ಣಮೂರ್ತಿ, ರೋ ಖನ್ನಾ ಮತ್ತು ಪ್ರಮೀಳಾ ಜಯಪಾಲ್ ಮರು ಆಯ್ಕೆಯಾಗುವ ಸಾಧ್ಯತೆಯಿದೆ.

ಅರುಣಾ ಮಿಲ್ಲರ್ ಇತಿಹಾಸ ನಿರ್ಮಿಸಿದ್ದಾರೆ ಲಕ್ಷಾಂತರ US ಮತದಾರರು ಗವರ್ನರ್, ರಾಜ್ಯ ಕಾರ್ಯದರ್ಶಿ ಮತ್ತು ಇತರ ಕಚೇರಿಗಳ ಮುಖ್ಯಸ್ಥರನ್ನು ಆಯ್ಕೆ ಮಾಡಲು ಮತ ಹಾಕಿದ್ದಾರೆ. ಇದೇ ವೇಳೆ ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ಸಂಜಾತೆ ಇತಿಹಾಸ ಸೃಷ್ಟಿಸಿದ್ದಾರೆ.

ಭಾರತೀಯ ಮೂಲದ ಅಮೇರಿಕನ್ ಮಹಿಳೆ ಅರುಣಾ ಮಿಲ್ಲರ್ ಅವರು ಮೇರಿಲ್ಯಾಂಡ್‌ನಲ್ಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯನ್ನು ಅಲಂಕರಿಸಿದ ಮೊದಲ ವಲಸಿಗರಾಗಿದ್ದಾರೆ.

ಅರುಣಾ ಮಿಲ್ಲರ್ ಯಾರು? 58 ವರ್ಷದ ಡೆಮೋಕ್ರಾಟ್ ಅರುಣಾ ಮಿಲ್ಲರ್ ಆಂಧ್ರಪ್ರದೇಶದಲ್ಲಿ 6 ನವೆಂಬರ್ 1964 ರಂದು ಜನಿಸಿದರು. ಆಕೆ ತನ್ನ ಏಳನೇ ವಯಸ್ಸಿನಲ್ಲಿ ತನ್ನ ಹೆತ್ತವರೊಂದಿಗೆ ಅಮೆರಿಕಕ್ಕೆ ವಲಸೆ ಹೋಗಿದ್ದರು.

1989 ರಲ್ಲಿ, ಅವರು ಮಿಸೌರಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ಅವರು 25 ವರ್ಷಗಳ ಕಾಲ ಮಾಂಟ್ಗೊಮೆರಿ ಕೌಂಟಿಯ ಸ್ಥಳೀಯ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡಿದರು.

2018ರ ಸಂಸತ್ ಚುನಾವಣೆಯಲ್ಲಿ ಸೋತರು ಅರುಣಾ ಮಿಲ್ಲರ್ 2010 ರಿಂದ 2018 ರವರೆಗೆ ಮೇರಿಲ್ಯಾಂಡ್ ಹೌಸ್ ಆಫ್ ಡೆಲಿಗೇಟ್ಸ್‌ನಲ್ಲಿ 15 ಜಿಲ್ಲೆಗಳನ್ನು ಪ್ರತಿನಿಧಿಸಿದ್ದಾರೆ. 2018ರಲ್ಲಿ ನಡೆದ ಚುನಾವಣೆಯಲ್ಲಿ ಸೋಲನ್ನು ಎದುರಿಸಬೇಕಾಯಿತು. ಇದರ ನಂತರ, ಅವರನ್ನು ಡೆಮೋಕ್ರಾಟ್‌ಗಳ ಪರವಾಗಿ ಗವರ್ನರ್ ಹುದ್ದೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅರುಣಾ ಡೇವಿಡ್ ಮಿಲ್ಲರ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಮಿಲ್ಲರ್ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ