ಅಮೆರಿಕದಲ್ಲಿ ರಾಹುಲ್​ ಗಾಂಧಿಯನ್ನು ಭೇಟಿಯಾದ ಇಲ್ಹಾನ್ ಒಮರ್ ಯಾರು?

ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಅಮೆರಿಕ ಕಾಂಗ್ರೆಸ್ ಸದಸ್ಯರು ಮತ್ತು ಬಿಡೆನ್ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿದರು. ವಾಷಿಂಗ್ಟನ್ ಡಿಸಿಯಲ್ಲಿ ರಾಹುಲ್ ಅವರ ಈ ಸಭೆ ನಡೆದಿದೆ. ಈ ಸಮಯದಲ್ಲಿ ಇಲ್ಹಾನ್ ಒಮರ್ ಕೂಡ ಇದ್ದರು. ಇಲ್ಹಾನ್ ಜೊತೆ ರಾಹುಲ್ ಭೇಟಿಯ ಬಗ್ಗೆ ಬಿಜೆಪಿ ಎತ್ತಿದೆ. ಇಲ್ಹಾನ್ ಒಮರ್ ಅಮೆರಿಕದ ವಿವಾದಾತ್ಮಕ ಮುಖ. ಮೋದಿ ಸರ್ಕಾರದ ಹಲವು ನೀತಿಗಳ ವಿರುದ್ಧ ಬಹಿರಂಗವಾಗಿ ಟೀಕಿಸಿದ್ದರು.

ಅಮೆರಿಕದಲ್ಲಿ ರಾಹುಲ್​ ಗಾಂಧಿಯನ್ನು ಭೇಟಿಯಾದ ಇಲ್ಹಾನ್ ಒಮರ್ ಯಾರು?
ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on: Sep 11, 2024 | 12:56 PM

ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi)ಯನ್ನು  ಅಮೆರಿಕದ ವಿವಾದಿತ ಸಂಸದೆ ಇಲ್ಹಾನ್ ಒಮರ್ ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಈ ಸಭೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳು ಎದ್ದಿವೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಟ್ಟಾ ಬೆಂಬಲಿಗೆರನಿಸಿಕೊಂಡಿರುವ ಇಲ್ಹಾನ್ ಒಮರ್ ಅವರು ಭಾರತ ವಿರೋಧಿ ನಿಲುವಿಗೆ ಹೆಸರುವಾಸಿಯಾಗಿದ್ದಾರೆ.

ಭಾರತದ ವಿರೋಧದ ನಡುವೆಯೂ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ್ದು ಇದೇ ಇಲ್ಹಾನ್ ಒಮರ್. ಪಿಒಕೆಯಲ್ಲಿ ಭಾರತದ ವಿರುದ್ಧ ಹೇಳಿಕೆ ನೀಡಿದ್ದರು. ಇಷ್ಟೇ ಅಲ್ಲ, ಇಲ್ಹಾನ್ ಒಮರ್ ಹಿಂದೂಫೋಬಿಯಾ ಬಗ್ಗೆ ಆಗಾಗ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುತ್ತಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ವಾಷಿಂಗ್ಟನ್‌ನ ರೇಬರ್ನ್ ಹೌಸ್‌ನಲ್ಲಿ ಅಮೆರಿಕದ ಶಾಸಕರ ಗುಂಪನ್ನು ಭೇಟಿಯಾದರು. ಈ ವೇಳೆ ಇಲ್ಹಾನ್ ಒಮರ್ ಕೂಡ ಉಪಸ್ಥಿತರಿದ್ದರು. ಇದೇ ಇಲ್ಹಾನ್ ಒಮರ್ ಅಮೆರಿಕ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ ಅಧಿವೇಶನವನ್ನು ಬಹಿಷ್ಕರಿಸಿದ್ದರು. ಪ್ರಧಾನಿ ಮೋದಿ ಅಧಿಕೃತ ಭೇಟಿಗಾಗಿ ಅಮೆರಿಕಕ್ಕೆ ಬಂದಿದ್ದರು.

ಮತ್ತಷ್ಟು ಓದಿ: ರಾಷ್ಟ್ರ ವಿರೋಧಿ ಹೇಳಿಕೆ ನೀಡುವುದು ರಾಹುಲ್​ ಗಾಂಧಿಗೆ ಅಭ್ಯಾಸವಾಗಿಬಿಟ್ಟಿದೆ: ಅಮಿತ್ ಶಾ

ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ಭಾರತ ಸರ್ಕಾರದ ವರ್ತನೆ ಮತ್ತು ಹಿಂದೂ ರಾಷ್ಟ್ರೀಯತಾವಾದಿ ಗುಂಪುಗಳಿಗೆ ಬೆಂಬಲ ನೀಡುತ್ತಿದೆ ಎಂಬ ಕಾರಣಕ್ಕಾಗಿ ತಾನು ಪ್ರಧಾನಿ ಮೋದಿಯವರ ಭಾಷಣವನ್ನು ಬಹಿಷ್ಕರಿಸಿದ್ದೇನೆ ಎಂದು ಇಲ್ಹಾನ್ ಹೇಳಿದ್ದರು.

ಮೂರು ದಿನಗಳ ಭೇಟಿಗಾಗಿ ರಾಹುಲ್ ಗಾಂಧಿ ಅಮೆರಿಕ ತಲುಪಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯಿಂದ ಹಿಡಿದು ಆರ್‌ಎಸ್‌ಎಸ್‌ವರೆಗೆ ಎಲ್ಲರ ಮೇಲೂ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಮಾತನಾಡಿ, ಇಲ್ಹಾನ್ ಒಮರ್ ಅವರು ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಭಾರತದಲ್ಲಿ ಇಸ್ಲಾಮೋಫೋಬಿಯಾ ಕುರಿತು ಚರ್ಚಿಸಿದರು, ಭಾರತವು ಆರ್ಟಿಕಲ್ 370 ಅನ್ನು ರದ್ದುಗೊಳಿಸಿದಾಗ ಅವರು ಭಾರತದ ವಿರುದ್ಧ ಮಾತನಾಡಿದರು ಮತ್ತು ಇಲ್ಹಾನ್ ಒಮರ್ ಅವರು ಹಿಂದೂಗಳ ವಿರುದ್ಧ ದ್ವೇಷವನ್ನು ಹರಡಿದರು ಎಂದು ಹೇಳಿದರು.

ಇಲ್ಹಾನ್​ ಒಮರ್​ಗೆ ಭಾರತದ ವಿಚಾರದಲ್ಲಿ ಆಗಾಗ ಹಸ್ತಕ್ಷೇಪ ಮಾಡುವ ಅಭ್ಯಾಸವಿದೆ. ಇಲ್ಹಾನ್ ಒಮರ್ ಜನವರಿ 2019 ರಲ್ಲಿ ಅಧಿಕಾರ ವಹಿಸಿಕೊಂಡರು. ಅವರು ಸೋಮಾಲಿಯಾದಲ್ಲಿ ಜನಿಸಿದರು. ಅಂತರ್ಯುದ್ಧದ ಕಾರಣ, ಅವರ ಕುಟುಂಬವು ಸೊಮಾಲಿಯಾದಿಂದ ಅಮೆರಿಕಕ್ಕೆ ಸ್ಥಳಾಂತರಗೊಂಡಿತು. ಅವರ ಕುಟುಂಬವು 1990 ರ ದಶಕದಲ್ಲಿ ಅಮೆರಿಕಕ್ಕೆ ಸ್ಥಳಾಂತರಗೊಳ್ಳುವ ಮೊದಲು ಕೀನ್ಯಾದ ನಿರಾಶ್ರಿತರ ಶಿಬಿರದಲ್ಲಿ ನಾಲ್ಕು ವರ್ಷಗಳ ಕಾಲ ಕಳೆದರು.

ಭಾರತ ಮತ್ತು ಯುಎಸ್ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಭೇಟಿಯ ಸಮಯದಲ್ಲಿ ಅರ್ಥಪೂರ್ಣ ಚರ್ಚೆಗಳು ಮತ್ತು ಪ್ರಾಯೋಗಿಕ ಸಂವಾದಗಳಲ್ಲಿ ತೊಡಗಿಸಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಬಳಿಕ ರಾಹುಲ್ ಗಾಂಧಿ ಅವರ ಮೊದಲ ಅಮೆರಿಕ ಭೇಟಿ ಇದಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ