ಯುಕೆ ಪ್ರಧಾನಿ ರಿಷಿ ಸುನಕ್ ಯಾರು?, ಭಾರತದೊಂದಿಗೆ ಅವರಿಗಿರುವ ಸಂಬಂಧ ಏನು?

ರಿಷಿ ಸುನಕ್ ಅವರು ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಪತಿ. ಇವರಿಗೆ ಕೃಷ್ಣ ಮತ್ತು ಅನೌಷ್ಕಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಯುಕೆ ಪ್ರಧಾನಿ ರಿಷಿ ಸುನಕ್ ಯಾರು?, ಭಾರತದೊಂದಿಗೆ ಅವರಿಗಿರುವ ಸಂಬಂಧ ಏನು?
ರಿಷಿ ಸುನಕ್ ಕುಟುಂಬ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 24, 2022 | 6:36 PM

ಬ್ರಿಟನ್ ಪ್ರಧಾನಿ ಹುದ್ದೆಯಿಂದ ಲಿಜ್ ಟ್ರಸ್ ನಿರ್ಗಮಿಸಿದ ನಂತರ ಭಾರತೀಯ ಮೂಲದ ರಿಷಿ ಸುನಕ್ (Rishi Sunak )ಯುಕೆ ಪ್ರಧಾನಿ (UK PM) ಸ್ಥಾನವನ್ನು ಅಲಂಕರಿಸಿದ್ದಾರೆ. ಬ್ರಿಟನ್ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ, ಮಾಜಿ ಯುಕೆ ಚಾನ್ಸೆಲರ್ ರಿಷಿ ಸುನಕ್ ಪ್ರಧಾನಿಯಾಗಲು ಸೂಕ್ತ ಎಂದು ಇಲ್ಲಿನ ಜನರು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ ರಿಷಿ ಸುನಕ್ ಬ್ರಿಟನ್​​ನ ಮೊದಲ ಭಾರತೀಯ ಮೂಲದ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ರಿಷಿ ಸುನಕ್​​ಗೆ ಭಾರತ ಜತೆಗಿನ ನಂಟು

  1. ರಿಷಿ ಸುನಕ್ ಅವರು ಸಂಸತ್ತಿನಲ್ಲಿ ಯಾರ್ಕ್‌ಷೈರ್‌ನಿಂದ ಸಂಸದರಾಗಿ ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಅವರು ಹಾಗೆ ಮಾಡಿದ ಮೊದಲ ಯುಕೆ ಸಂಸದರಾಗಿದ್ದರು.
  2. ರಿಷಿ ಸುನಕ್ ಅವರ ಅಜ್ಜ ಅಜ್ಜಿ ಪಂಜಾಬ್ ಮೂಲದವರು. ಅವರ ತಂದೆ ತಾಯಿಯರಿಬ್ಬರೂ ಭಾರತೀಯ ಮೂಲದವರು. ಸುನಕ್ ಅವರ ಪೋಷಕರು ಫಾರ್ಮಸಿಸ್ಟ್ ಆಗಿದ್ದು 1960 ರ ದಶಕದಲ್ಲಿ ಪೂರ್ವ ಆಫ್ರಿಕಾದಿಂದ ಯುಕೆಗೆ ವಲಸೆ ಬಂದಿದ್ದರು.
  3. ರಿಷಿ ಸುನಕ್ ಅವರು ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಪತಿ. ಇವರಿಗೆ ಕೃಷ್ಣ ಮತ್ತು ಅನೌಷ್ಕಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
  4. ಬೋರಿಸ್ ಜಾನ್ಸನ್ ಅವರ ನೇತೃತ್ವದಲ್ಲಿ ಹಣಕಾಸು ಸಚಿವರಾಗಿದ್ದ , ರಿಷಿ ಸುನಕ್ ಡೌನಿಂಗ್ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದಲ್ಲಿ ದೀಪಾವಳಿಗೆ ದೀಪ ಬೆಳಗಿಸಿದ್ದರು.
  5. ರಿಷಿ ಸುನಕ್ ಆಗಾಗ್ಗೆ ಅವರ ಪರಂಪರೆಯ ಬಗ್ಗೆ ಮಾತನಾಡುತ್ತಾರೆ . ಅವರ ಕುಟುಂಬವು ಮೌಲ್ಯಗಳು ಮತ್ತು ಸಂಸ್ಕೃತಿಯ ಬಗ್ಗೆ ನೆನಪಿಸುತ್ತದೆ ಅಂತಾರೆ ಅವರು.
  6. ಹೆಚ್ಚಿನ ಭಾರತೀಯ ಮನೆಗಳಂತೆ, ಸುನಕ್ ಮನೆಯಲ್ಲಿ ಶಿಕ್ಷಣ ಪ್ರಮುಖ ಅಂಶವಾಗಿದೆ. ರಿಷಿ ಸುನಕ್ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಪದವೀಧರ ಮತ್ತು ಮಾಜಿ ಇನ್ವೆಸ್ಟ್ ಮೆಂಟ್  ಬ್ಯಾಂಕರ್.
  7. ರಿಷಿ ಸುನಕ್ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿಗೆ ಬಂದು ತಮ್ಮ ಅತ್ತೆಯನ್ನು ಭೇಟಿಯಾಗುತ್ತಿರುತ್ತಾರೆ.
  8. 2022 ಪ್ರಧಾನಿ ಚುನಾವಣೆ ಪ್ರಚಾರದ ಸಮಯದಲ್ಲಿ, ರಿಷಿ ಸುನಕ್ ಅವರ ಅದ್ದೂರಿ ಮನೆ, ದುಬಾರಿ ಸೂಟುಗಳು ಮತ್ತು ಬೂಟುಗಳು ಸೇರಿದಂತೆ ವಿವಿಧ ಟೀಕೆಗಳನ್ನು ಎದುರಿಸಿದರು. ಒತ್ತಡದ ಸಂದರ್ಭಗಳಲ್ಲಿ ಭಗವದ್ಗೀತೆಯು ಆಗಾಗ್ಗೆ ನನ್ನನ್ನು ರಕ್ಷಿಸುತ್ತದೆ ಮತ್ತು ಕರ್ತವ್ಯನಿಷ್ಠರಾಗಿರಲು ನೆನಪಿಸುತ್ತದೆ ಎಂದು ರಿಷಿ ಹೇಳಿದ್ದರು.
  9. ರಿಷಿ ಸುನಕ್ ಅವರು 700 ಮಿಲಿಯನ್ ಪೌಂಡ್‌ಗಳಿಗಿಂತ ಹೆಚ್ಚು ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಯುಕೆಯಲ್ಲಿನ ಹೆಚ್ಚಿನ ಆಸ್ತಿ ಹೊಂದಿದ್ದಾರೆ . ಯಾರ್ಕ್‌ಷೈರ್‌ನಲ್ಲಿ ಮಹಲು ಹೊಂದಿದ್ದಲ್ಲದೆ, ರಿಷಿ ಮತ್ತು ಅವರ ಪತ್ನಿ ಅಕ್ಷತಾ ಮಧ್ಯ ಲಂಡನ್‌ನ ಕೆನ್ಸಿಂಗ್ಟನ್‌ನಲ್ಲಿ ಆಸ್ತಿ ಹೊಂದಿದ್ದಾರೆ.
  10. ಫಿಟ್ ಆಗಿರಲು ರಿಷಿ ಸುನಕ್ ಕ್ರಿಕೆಟ್ ಆಡಲು ಇಷ್ಟಪಡುತ್ತಾರೆ.

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?