China Virus: ನ್ಯುಮೋನಿಯಾ ಹೆಚ್ಚಳ, ಇದರ ಹಿಂದೆ ಯಾವುದೇ ವೈರಸ್​ಗಳ ಪ್ರಭಾವವಿಲ್ಲ ಎಂದು ಚೀನಾ ಹೇಳಿದೆ: WHO

ಚೀನಾ(China)ದಲ್ಲಿ ನ್ಯುಮೋನಿಯಾ(Pneumonia) ಪ್ರಕರಣಗಳು ಹೆಚ್ಚಳವಾಗುತ್ತಿದೆ. ಆದರೆ ಈ ಪ್ರಕರಣಗಳ ಹೆಚ್ಚಳದ ಹಿಂದೆ ಯಾವುದೇ ವೈರಸ್​ಗಳು ಪ್ರಭಾವ ಬೀರುತ್ತಿಲ್ಲ ಎಂದು ಚೀನಾ ಹೇಳಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಅಕ್ಟೋಬರ್ ಮಧ್ಯದಿಂದ ವಿಶ್ವ ಆರೋಗ್ಯ ಸಂಸ್ಥೆಯು ಚೀನಾದ ಮಕ್ಕಳಲ್ಲಿ ಹೆಚ್ಚುತ್ತಿರುವ ಉಸಿರಾಟ ಸಮಸ್ಯೆಗೆ ಸಂಬಂಧಿಸಿದಂತೆ ನಿಗಾ ಇಡುತ್ತಿದೆ.

China Virus: ನ್ಯುಮೋನಿಯಾ ಹೆಚ್ಚಳ, ಇದರ ಹಿಂದೆ ಯಾವುದೇ ವೈರಸ್​ಗಳ ಪ್ರಭಾವವಿಲ್ಲ ಎಂದು ಚೀನಾ ಹೇಳಿದೆ: WHO
ಚೀನಾImage Credit source: Firstpost
Follow us
|

Updated on: Nov 24, 2023 | 10:52 AM

ಚೀನಾ(China)ದಲ್ಲಿ ನ್ಯುಮೋನಿಯಾ(Pneumonia) ಪ್ರಕರಣಗಳು ಹೆಚ್ಚಳವಾಗುತ್ತಿದೆ. ಆದರೆ ಈ ಪ್ರಕರಣಗಳ ಹೆಚ್ಚಳದ ಹಿಂದೆ ಯಾವುದೇ ವೈರಸ್​ಗಳು ಪ್ರಭಾವ ಬೀರುತ್ತಿಲ್ಲ ಎಂದು ಚೀನಾ ಹೇಳಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಅಕ್ಟೋಬರ್ ಮಧ್ಯದಿಂದ ವಿಶ್ವ ಆರೋಗ್ಯ ಸಂಸ್ಥೆಯು ಚೀನಾದ ಮಕ್ಕಳಲ್ಲಿ ಹೆಚ್ಚುತ್ತಿರುವ ಉಸಿರಾಟ ಸಮಸ್ಯೆಗೆ ಸಂಬಂಧಿಸಿದಂತೆ ನಿಗಾ ಇಡುತ್ತಿದೆ.

ನ್ಯುಮೋನಿಯಾ ಹಾಗೂ ಉಸಿರಾಟಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಚೀನಾದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಚೀನಾದ ವುಹಾನ್​ನಲ್ಲಿ ಕೊರೊನಾ ವೈರಸ್​ ಉಲ್ಬಣಗೊಂಡು ಮೂರು ವರ್ಷಗಳು ಕಳೆದಿವೆ. ಇದೀಗ ಚೀನಾದಲ್ಲಿ ಕೋವಿಡ್ ಮಾದರಿಯ ಯಾವುದೇ ವೈರಸ್ ಪತ್ತೆಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈಶಾನ್ಯಕ್ಕೆ 500 ಮೈಲುಗಳಷ್ಟು ದೂರದಲ್ಲಿರುವ ಬೀಜಿಂಗ್ ಮತ್ತು ಲಿಯಾನಿಂಗ್‌ನಲ್ಲಿರುವ ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ದಾಖಲಿಸಲಾಗುತ್ತಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಈ ನಿಗೂಢ ನ್ಯುಮೋನಿಯಾ ಏಕಾಏಕಿ ಹೆಚ್ಚಿದ ಕಾರಣ ಶಾಲೆಗಳನ್ನು ಮುಚ್ಚಲಾಗಿದೆ.

ಮತ್ತಷ್ಟು ಓದಿ: Pneumonia: ಚೀನಾದಲ್ಲಿ ಕೊರೊನಾ ಬಳಿಕ ನಿಗೂಢ ನ್ಯುಮೋನಿಯಾದಿಂದ ತತ್ತರಿಸಿದ ಜನ, ಶಾಲೆಗಳು ಬಂದ್

ಈ ನಿಗೂಢ ನ್ಯುಮೋನಿಯಾದಿಂದ ಬಳಲುತ್ತಿರುವ ಮಕ್ಕಳಲ್ಲಿ ಶ್ವಾಸಕೋಶದಲ್ಲಿ ಊತ ಮತ್ತು ಅಧಿಕ ಜ್ವರ ಸೇರಿದಂತೆ ಅಸಾಮಾನ್ಯ ಲಕ್ಷಣಗಳು ಕಂಡುಬರುತ್ತಿವೆ. ಕೆಮ್ಮು ಮತ್ತು ಜ್ವರ, ಆರ್‌ಎಸ್‌ವಿ ಮತ್ತು ಉಸಿರಾಟದ ಕಾಯಿಲೆಗಳಿಗೆ ಸಂಬಂಧಿಸಿದ ಇತರ ಲಕ್ಷಣಗಳು ಆ ಮಕ್ಕಳಲ್ಲಿ ಕಂಡುಬರುತ್ತಿಲ್ಲ.

ಯಾವಾಗ ಆರಂಭವಾಯಿತು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಮೈಕೋಪ್ಲಾಸ್ಮಾ ನ್ಯುಮೋನಿಯಾ ಅಥವಾ ವಾಕಿಂಗ್ ನ್ಯುಮೋನಿಯಾ ಇರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದು, ಜನರು ಜಾಗರೂಕರಾಗಿರಲು ಸೂಚಿಸಿದೆ. ಇದರೊಂದಿಗೆ, ವಿಶ್ವ ಆರೋಗ್ಯ ಸಂಸ್ಥೆಯು ಮಕ್ಕಳಲ್ಲಿ ಹರಡುವ ಈ ರೋಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಚೀನಾದ ಆರೋಗ್ಯ ಅಧಿಕಾರಿಗಳನ್ನು ಕೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ