AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರಾತ್ರಿ ಇಡೀ ದೇಶವೇ ನಾಶವಾಗುತ್ತದೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

ಇರಾನ್​ ಕದನವಿರಾಮದ ಒಪ್ಪಂದ ಮಾಡಿಕೊಳ್ಳಲು ಅಮೆರಿಕ ನೀಡಿದ್ದ ಗಡುವು ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಅಮೆರಿಕದ ಕಾಲಮಾನದ ಪ್ರಕಾರ ಇಂದು ರಾತ್ರಿ 8 ಗಂಟೆಗೆ, ಭಾರತೀಯ ಕಾಲಮಾನದ ಪ್ರಕಾರ ನಾಳೆ (ಬುಧವಾರ) ಬೆಳಗ್ಗೆ 5.30ಕ್ಕೆ ಟ್ರಂಪ್ ಇರಾನ್​ಗೆ ನೀಡಿದ್ದ ಗಡುವು ಮುಗಿಯುತ್ತದೆ. ಆದರೆ, ಅದಕ್ಕೂ ಮೊದಲೇ ಇರಾನ್​ನ 50 ಮಿಲಿಟರಿ ಟಾರ್ಗೆಟ್​​ಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಟ್ರಂಪ್ ಇರಾನ್​ಗೆ ಎಚ್ಚರಿಕೆ ನೀಡಿದ್ದು, ಇಂದು ರಾತ್ರಿ ಇರಾನ್ ನಿರ್ನಾಮವಾಗಲಿದೆ ಎಂದು ಹೇಳಿದ್ದಾರೆ.

ಇಂದು ರಾತ್ರಿ ಇಡೀ ದೇಶವೇ ನಾಶವಾಗುತ್ತದೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ
Donald Trump Warning
ಸುಷ್ಮಾ ಚಕ್ರೆ
|

Updated on:Apr 07, 2026 | 7:15 PM

Share

ವಾಷಿಂಗ್ಟನ್, ಏಪ್ರಿಲ್ 7: ಇಸ್ರೇಲ್ ಜೊತೆ ಸೇರಿ ಫೆಬ್ರವರಿ 28ರಂದು ಅಮೆರಿಕ ಇರಾನ್ (Iran War) ಮೇಲೆ ದಾಳಿ ಆರಂಭಿಸಿತ್ತು. ಇರಾನ್​ನ ಸುಪ್ರೀಂ ನಾಯಕನನ್ನು ಕೊಂದು, ಇರಾನ್ ಮೇಲೆ ಡ್ರೋನ್ ದಾಳಿ ನಡೆಸಿದರೆ ಈ ಯುದ್ಧ ಒಂದೆರಡು ದಿನಗಳಲ್ಲೇ ಮುಗಿದು ಹೋಗುತ್ತದೆ ಎಂಬ ಲೆಕ್ಕಾಚಾರ ಟ್ರಂಪ್​ದಾಗಿತ್ತು. ಆದರೆ, ಸುಪ್ರೀಂ ನಾಯಕ ಸೇರಿದಂತೆ ಮಿಲಿಟರಿಯ ಮುಖ್ಯಸ್ಥರನ್ನೆಲ್ಲ ಕಳೆದುಕೊಂಡರೂ ಇರಾನ್ ಕಂಗೆಡದೆ ಅಮೆರಿಕ ಮತ್ತು ಇಸ್ರೇಲ್​ನ ವಾಯುನೆಲೆಗಳನ್ನೆಲ್ಲ ಉಡೀಸ್ ಮಾಡಿತ್ತು. ನಾವು ಸಂಪೂರ್ಣ ನಾಶವಾದರೂ ಪರವಾಗಿಲ್ಲ, ನಮ್ಮ ಶತ್ರುಗಳು ನಮ್ಮ ಅರ್ಧದಷ್ಟಾದರೂ ನಾಶವಾಗಬೇಕೆಂಬ ಹಠ ತೊಟ್ಟ ಇರಾನ್ ಯಾವೆಲ್ಲ ರೀತಿಯಲ್ಲಿ ಸಾಧ್ಯವೋ ಆ ರೀತಿಯಲ್ಲೆಲ್ಲ ವಿಶ್ವದ ದೊಡ್ಡಣ್ಣ ಡೊನಾಲ್ಡ್​ ಟ್ರಂಪ್​ (Donald Trump) ನಿದ್ರೆಗೆಡಿಸಿತ್ತು.

ಈ ಯುದ್ಧ ಶುರುವಾಗಿ ತಿಂಗಳೇ ಕಳೆದರೂ ಮೂರೂ ದೇಶಗಳು ಸುಮ್ಮನಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಇದರ ನಡುವೆ ಕೊನೆಯ ಅವಕಾಶವಾಗಿ ಕದನವಿರಾಮದ ಒಪ್ಪಂದಕ್ಕೆ ಒಪ್ಪಿಗೆ ನೀಡಲು ಅಮೆರಿಕ ಇರಾನ್​ಗೆ ನೀಡಿದ್ದ ಗಡುವು ಅಮೆರಿಕದ ಕಾಲಮಾನದ ಪ್ರಕಾರ ಇಂದು ರಾತ್ರಿ ಹಾಗೂ ಭಾರತೀಯ ಕಾಲಮಾನದ ಪ್ರಕಾರ ನಾಳೆ ಬೆಳಗ್ಗೆ 5.30ಕ್ಕೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಕೊನೆಯ ಎಚ್ಚರಿಕೆ ನೀಡಿರುವ ಟ್ರಂಪ್ ಇಂದು ರಾತ್ರಿ ಇರಾನ್​ನ ನಾಗರಿಕತೆಯೇ ನಾಶವಾಗಲಿದೆ. ಇರಾನ್ ಮತ್ತೆ ಎದ್ದುಬರಲು ಸಾಧ್ಯವೇ ಇಲ್ಲ, ಇರಾನ್ ಎಂಬ ದೇಶ ವಿಶ್ವದ ಭೂಪಟದಿಂದಲೇ ಮಾಯವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಒಪ್ಪಂದ, ಶರಣಾಗತಿ ಅಥವಾ ಅತ್ಯಂತ ಮಾರಕ ದಾಳಿ? ಇರಾನ್​ಗೆ ಟ್ರಂಪ್ ಗಡುವು, ವಿನಾಶಕ್ಕೆ ಕ್ಷಣಗಣನೆ

ಇರಾನ್ ವಿರುದ್ಧ ಇದುವರೆಗೆ ಟ್ರಂಪ್ ನೀಡಿದ ಪ್ರಬಲ ಬೆದರಿಕೆಗಳಲ್ಲಿ ಇದು ಒಂದಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್​ ಕದನವಿರಾಮಕ್ಕೆ ಒಪ್ಪದಿದ್ದರೆ ಆಗುವ ವಿನಾಶಕಾರಿ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಇಂದು ರಾತ್ರಿ ಇರಾನ್‌ನ ನಾಗರಿಕತೆಯು ಸಂಪೂರ್ಣ ನಾಶವಾಗಬಹುದು ಎಂದು ಬೆದರಿಕೆ ಹಾಕಿದ್ದಾರೆ.

Trump Post

ಟ್ರೂತ್ ಸೋಶಿಯಲ್ ಬಗ್ಗೆ ಟ್ರಂಪ್ ಈ ಬಗ್ಗೆ ಬರೆದಿದ್ದಾರೆ. “ಇರಾನ್​ನ ಇಡೀ ನಾಗರಿಕತೆಯು ಇಂದು ರಾತ್ರಿ ಸಾಯುತ್ತದೆ, ಮತ್ತೆಂದೂ ಇರಾನ್​ ಹಿಂತಿರುಗುವುದಿಲ್ಲ. ಆ ರೀತಿ ಆಗಬೇಕೆಂದು ನಾನು ಬಯಸುವುದಿಲ್ಲ. ಆದರೆ ಆ ರೀತಿ ಆಗುವ ಸಾಧ್ಯತೆಯೂ ಇಲ್ಲದಿಲ್ಲ” ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

“ಇಂದು ರಾತ್ರಿ ಏನಾಗಲಿದೆ ಎಂಬುದು ಯಾರಿಗೂ ತಿಳಿದಿಲ್ಲ. ಈ ರಾತ್ರಿ ಪ್ರಪಂಚದ ದೀರ್ಘ ಮತ್ತು ಸಂಕೀರ್ಣ ಇತಿಹಾಸದಲ್ಲಿ ಅತ್ಯಂತ ಪ್ರಮುಖ ಕ್ಷಣಗಳಲ್ಲಿ ಒಂದಾಗಲಿದೆ. 47 ವರ್ಷಗಳ ಸುಲಿಗೆ, ಭ್ರಷ್ಟಾಚಾರ ಮತ್ತು ಸಾವು ಅಂತಿಮವಾಗಿ ಕೊನೆಗೊಳ್ಳುತ್ತದೆ. ಇರಾನ್‌ನ ಜನರನ್ನು ದೇವರು ಆಶೀರ್ವದಿಸಲಿ!” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:03 pm, Tue, 7 April 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!